ಚೌಡಯ್ಯ ಜಯಂತಿ: ಸಿದ್ಧತಾ ಸಭೆ
Team Udayavani, Jan 19, 2018, 11:57 AM IST
ಬೀದರ: ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜ.21ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಸೂಚಿಸಿದರು.
ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 9:30ಕ್ಕೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳಲ್ಲಿ ಹಾಗೂ ಬೆಳಗ್ಗೆ 10ಕ್ಕೆ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಪೂಜೆ ಕಾರ್ಯಕ್ರಮ.
ಬಳಿಕ ಭಾವಚಿತ್ರ ಮೆರವಣಿಗೆ ಜರುಗಲಿದೆ. ಬೆಳಗ್ಗೆ 11:30ಕ್ಕೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಮುಖ್ಯ ಕಾರ್ಯಕ್ರಮ
ಇರುತ್ತದೆ ಎಂದು ಹೇಳಿದರು.
ಟೋಕರಿ ಕೋಳಿ ಸಮಾಜದ ಮುಖಂಡರಾದ ಪಾಂಡುರಂಗ ಗುರೂಜಿ ಮಾತನಾಡಿ, ಜಿಲ್ಲೆಯಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ 2.5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದರು.
ಬಸವಕಲ್ಯಾಣದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಸ್ಮಾರಕದ ಸ್ಥಳವನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ
ಎಂದು ಮುಖಂಡರು ಸಭೆಗೆ ತಿಳಿಸಿದಾಗ, ಬಸವಕಲ್ಯಾಣ ಎಸಿ ಶರಣಬಸಪ್ಪ ಕೋಟೆಪ್ಪಗೋಳ ಮಾತನಾಡಿ, ಈ
ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸ್ಮಾರಕದ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸುನೀಲ ಭಾವಿಕಟ್ಟಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ. ಡಿ.ಷಣ್ಮುಖ, ಎಎಸ್‌ಪಿ ಶ್ರೀಹರಿ ಬಾಬು, ನೌಕರರ
ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಗಂದಗೆ, ರಮೇಶ ಮಠಪತಿ, ಶಿವಶರಣಪ್ಪ ವಾಲಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
MUST WATCH
ಹೊಸ ಸೇರ್ಪಡೆ
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.