ಕೋವಿಡ್ : ಚಿತ್ರ ಕಲಾವಿದರಿಂದ ಜಾಗೃತಿ ಜಾಥಾ
Team Udayavani, Apr 23, 2020, 5:57 PM IST
ಚಿಂಚೋಳಿ: ಸುಲೇಪೇಟ ಬಸವೇಶ್ವರ ವೃತ್ತದಲ್ಲಿ ಚಿತ್ರ ಕಲಾವಿದರು ಕೋವಿಡ್ ವೈರಸ್ ಕುರಿತು ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದರು.
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಚಿತ್ರ ಕಲಾವಿದರು ಕೋವಿಡ್ ವೈರಸ್ ಕುರಿತು ಚಿತ್ರ ಬಿಡಿಸಿ ಜನರಿಗೆ ಜಾಗೃತಿ ಮೂಡಿಸಿದರು.
“ನೀವು ಬಂದರೆ ಹೊರಗಿ ನಾನು ಬರುವ ನಿಮ್ಮ ಮನೆಗೆ’ಎಂಬ ಸಂದೇಶವನ್ನು ಚಿತ್ರದಲ್ಲಿ ಬಿಡಿಸಿದ್ದರಿಂದ ಎಲ್ಲರ ಮೆಚ್ಚುಗೆ ಪಡೆದುಕೊಂಡಿತು. ಚಿತ್ರ ಕಲಾವಿದ ಶಿಕ್ಷಕರಾದ ಪ್ರಭುಜಾಣ, ನಾಗೇಶ ಶೀಲವಂತ, ಪ್ರಭುಲಿಂಗಯ್ಯ ಇವರು ಬಸವೇಶ್ವರ ವೃತ್ತದಲ್ಲಿ ಕೋವಿಡ್ ವೈರಸ್ ಚಿತ್ರ ಬಿಡಿಸಿದರು. ಸಾರ್ವಜನಿಕರು ಮತ್ತು ಅಧಿಕಾರಿಗಳು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಡಿವೈಎಸ್‌ಪಿ ಇ.ಎಸ್.ವೀರಭದ್ರಯ್ಯ,ಕೋವಿಡ್ ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಪಾಲಾಮೂರ, ದೇವೇಂದ್ರಪ್ಪ ಹೋಳ್ಕರ, ಶಾಂತಕುಮಾರ ಯಾಲಕ್ಕಿ, ಚೆನ್ನಬಸಪ್ಪ ಹೋಳ್ಕರ ಇನ್ನಿತರಿದ್ದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಅವರು ಕೊರೊನಾ ವೈರಸ್ ಕುರಿತು ಸಾಮಾಜಿಕ ಅಂತರ ಮತ್ತು ತಡೆಗಟ್ಟುವಿಕೆ ಕುರಿತು ಪ್ರತಿಜ್ಞಾ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.