20 ಕ್ವಿಂಟಲ್ ತೊಗರಿ ಖರೀದಿಗೆ ಆಗ್ರಹ
Team Udayavani, Feb 19, 2020, 4:28 PM IST
ಚಿಂಚೋಳಿ: ಮುಖ್ಯಮಂತ್ರಿಗಳು ಬೀದರ್‌ದಲ್ಲಿ ನಡೆದ ರಾಜ್ಯಮಟ್ಟದ ಪಶು ಸಮ್ಮೇಳನದಲ್ಲಿ ಘೋಷಿಸಿರುವಂತೆ ಪ್ರತಿಯೊಬ್ಬ ರೈತನಿಂದ 20 ಕ್ವಿಂಟಲ್ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ತಾಲೂಕು ಜೆಡಿಎಸ್ ಮುಖಂಡರು ಒತ್ತಾಯಿಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಜೆಡಿಎಸ್ ಮತ್ತು ಸಿಪಿಐ (ಎಂ) ಕಾರ್ಯಕರ್ತರು ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ರೈತರು ಸಾಕಷ್ಟು ಪ್ರಮಾಣದಲ್ಲಿ ತೊಗರಿ ಬೆಳೆದಿದ್ದಾರೆ. ಈಗಾಗಲೇ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತೊಗರಿ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಆದರೆ ಸದ್ಯ ಪ್ರತಿಯೊಬ್ಬ ರೈತನಿಂದ ಕೇವಲ 10 ಕ್ವಿಂಟಲ್ ಮಾತ್ರ ಖರೀದಿಸಲಾಗುತ್ತಿದೆ.
ಮುಖ್ಯಮಂತ್ರಿಗಳು ಘೋಷಣೆ ಮಾಡಿದ ಹಾಗೆ ಪ್ರತಿಯೊಬ್ಬ ರೈತನಿಂದ ಸದ್ಯ 20 ಕ್ವಿಂಟಲ್ ಖರೀದಿಸುತ್ತಿಲ್ಲವೆಂದು ಸರಕಾರದ ಆಕ್ರೋಶ ವ್ಯಕ್ತಡಪಡಿಸಿದರು. ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಮುಖ್ಯಕಾಲುವೆ ಆಧುನಿಕರಣ ಕಾಮಗಾರಿ ಮತ್ತು ಯೋಜನೆ ಪುರ್ನವಸತಿ ಕೇಂದ್ರಗಳಲ್ಲಿ ಕೈಗೊಂಡಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸಂಪೂರ್ಣ ಕಳಪೆಮಟ್ಟದ್ದಾಗಿವೆ. ಇವುಗಳ ತನಿಖೆ ನಡೆಸಬೇಕೆಂದು ಅಗ್ರಹಿಸಿದರು.
ನಂತರ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾ.ಪಂ ಯೋಜನಾಧಿಕಾರಿ ಶಂಕರ ರಾಠೊಡಗೆ ಸಲ್ಲಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ, ಭೀಮಶೆಟ್ಟಿ ಎಂಪಳ್ಳಿ, ಜಾಫರಖಾನ್, ಪುರಸಭೆ ಸದಸ್ಯ ನಾಗೀಂದ್ರಪ್ಪ ಗುರಂಪಳ್ಳಿ, ವಾಮನರಾವ್ ಕೊರವಿ, ಎಸ್.ಕೆ.
ಮುಕ್ತಾರ ಇನ್ನಿತರರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.