ವೀರಭದ್ರೇಶ್ವರ ದೇವಸ್ಥಾನಕ್ಕೆ ಬೀಗ
Team Udayavani, Apr 22, 2020, 5:37 PM IST
ಚಿಂಚೋಳಿ: ಸುಲೇಪೇಟ ವೀರಭದ್ರೇಶ್ವರ ದೇವಾಲಯ ಮುಖ್ಯ ದ್ವಾರಕ್ಕೆ ಅಧಿಕಾರಿಗಳು ಬೀಗ ಹಾಕಿದರು.
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಐತಿಹಾಸಿಕ ದೇವಸ್ಥಾನ ವೀರಭದ್ರೇಶ್ವರ ಜಾತ್ರೆಯನ್ನು ಕೋವಿಡ್-19 ಮತ್ತು ಕರ್ಫ್ಯೂ ಜಾರಿ ಇರುವುದರಿಂದ ಮಂಗಳವಾರ ಸಂಜೆ ನಡೆಯಬೇಕಾಗಿದ್ದ ರಥೋತ್ಸವವನ್ನು ರದ್ದುಪಡಿಸಲಾಯಿತು.
ದೇವಾಲಯ ಸಮಿತಿಯ ಮುಖಂಡರೊಂದಿಗೆ ಸೇಡಂ ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಸಿಪಿಐ ವಿಜಯ ಮಹಾಂತೇಶ ಮಠಪತಿ, ಪಿಎಸ್ಐ ತಮ್ಮಯ್ಯ ಸುದೀರ್ಘವಾಗಿ ಚರ್ಚಿಸಿ ಎಲ್ಲರ ಒಮ್ಮತ ಅಭಿಪ್ರಾಯದ ಮೇರೆಗೆ ಜಾತ್ರೆ ರಥೋತ್ಸವವನ್ನು ರದ್ದುಪಡಿಸಲಾಯಿತು.
ತೇರ ಮೈದಾನದಲ್ಲಿ ನಿಲ್ಲಿಸಲಾಗಿದ್ದ ರಥದ ಗಾಲಿಗೆ ಹಗ್ಗ ಕಟ್ಟಲಾಯಿತು. ವೀರಭದ್ರೇಶ್ವರ ದೇವಾಲಯ ಮುಖ್ಯ ದ್ವಾರಕ್ಕೆ ಕೀಲಿ ಹಾಕಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು. ಕೆರೊಳ್ಳಿ, ಚಿಮ್ಮಾಇದಲಾಯಿ, ಕಲ್ಲೂರ, ಗಾರಂಪಳ್ಳಿ, ನಿಡಗುಂದಾ ಗ್ರಾಮಗಳ ಜಾತ್ರೆಗಳನ್ನು ರದ್ದಪಡಿಸಲಾಗಿದೆ. ಗ್ರಾಮಸ್ಥರಿಗೆ ಸಾಮಾಜಿಕ ಅಂತರ ಮತ್ತು ಕೋವಿಡ್ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದ್ದರಿಂದ ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರೇ ರದ್ದುಪಡಿಸಲು ನಿರ್ಧರಿಸಿದ್ದಾರೆ ಎಂದು ತಹಶೀಲ್ದಾರ್ ಅರುಣಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.