ಇಂದಿ ನಿಂದ ಚಿಟಗುಪ್ಪ ಹೊಸ ತಾಲೂಕು


Team Udayavani, Feb 26, 2018, 12:18 PM IST

bid-1.jpg

ಹುಮನಾಬಾದ: ಬಹು ವರ್ಷಗಳಿಂದ ಚಿಟಗುಪ್ಪ ತಾಲೂಕು ಘೋಷಿಸುವಂತೆ ಒತ್ತಾಯಿಸಿ ನಡೆದ ಹೋರಾಟಕ್ಕೆ ಪ್ರತಿಫಲ ಸಿಕ್ಕಿದ್ದು, ಫೆ. 26ರಂದು ಚಿಟಗುಪ್ಪ ತಾಲೂಕು ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿಜಾಮ ಆಳ್ವಿಕೆಯಲ್ಲಿ ಚಿಟಗುಪ್ಪ ಜಿಲ್ಲಾ ಕೇಂದ್ರವಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ಹುಮನಾಬಾದ ತಾಲೂಕು ಕೇಂದ್ರವಾಗಿ ಗುರುತಿಸಿಕೊಂಡಿತ್ತು. ಕಳೆದ ನಾಲ್ಕು ದಶಕಕ್ಕೂ ಅಧಿಕ ಅವಧಿಯಿಂದ ಚಿಟಗುಪ್ಪ ತಾಲೂಕು ಕೇಂದ್ರವಾಗಿ ಸರ್ಕಾರ ಘೋಷಿಸುವಂತೆ ಒತ್ತಾಯಿಸಿ ವಿವಿಧ ಬಗೆಯ ಹೋರಾಟಗಳು ನಡೆಸಿದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಹೊಸ ತಾಲೂಕುಗಳ ಘೋಷಣೆ ಮಾಡಿದ ಪಟ್ಟಿಯಲ್ಲಿ ಚಿಟಗುಪ್ಪ ಕೂಡ ಸೇರಿತ್ತು. ಪೂರ್ಣ ಪ್ರಮಾಣದ ಅನುಷ್ಠಾನಗೊಳಿಸುವಲ್ಲಿ ಅಂದಿನ ಸರ್ಕಾರ ವಿಫಲಗೊಂಡಿತ್ತು. ನಂತರ ಸಿದ್ದರಾಮಯ್ಯ ಸರ್ಕಾರ ಕೂಡ ಅದೇ ಹೊಸ ತಾಲೂಕುಗಳ ಘೋಷಣೆ ಮಾಡಿ, ಒಂದು ಹೆಜ್ಜೆ ಮುಂದೆ ಇಟ್ಟು ತಾಲೂಕು ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಇದೀಗ ಚಿಟಗುಪ್ಪ ಪಟ್ಟಣದಲ್ಲಿನ ವಿಶೇಷ ತಹಶೀಲ್ದಾರ ಕಚೇರಿಯಲ್ಲಿ ಹೊಸ ಹುದ್ದೆಗಳು ಸೃಷ್ಟಿಸಿ ಕಾರ್ಯರೂಪಕ್ಕೆ ತರಲಾಗುತ್ತಿದೆ. ಇನ್ನುಳಿದ ಇಲಾಖೆಗಳು ಚಿಟಗುಪ್ಪ ಪಟ್ಟಣದಲ್ಲಿ ಸ್ಥಾಪಿಸುವಂತೆ ಸರ್ಕಾರದ ಯಾವುದೇ ಸುತ್ತೋಲೆಗಳು ಹೊರಡಿಸಿಲ್ಲ. ಅಲ್ಲದೇ ಕಂದಾಯ ಇಲಾಖೆ ಬಿಟ್ಟರೆ ಬೇರೆ ಇಲಾಖೆಗಳಲ್ಲಿ ಹುದ್ದೆಗಳ ಸೃಷ್ಟಿಗೊಂಡಿಲ್ಲ ಎಂಬುವುದು ಅಧಿಕಾರಿಗಳ ಮಾತು.

ಸಧ್ಯ ಚಿಟಗುಪ್ಪ ಪಟ್ಟಣದಲ್ಲಿ ಪುಸರಭೆ, ಪೊಲೀಸ್‌ ಠಾಣೆ, ವೃತ್ತ ನಿರೀಕ್ಷಕರ ಠಾಣೆ, ಅಗ್ನಿ ಶಾಮಕ, ಆರೋಗ್ಯ ಸಮುದಾಯ ಕೇಂದ್ರ ಕಾರ್ಯ ನಿರ್ವಹಿಸುತ್ತಿವೆ. ಉಪ ಕೇಂದ್ರಗಳಂತೆ ಕೃಷಿ ಕೇಂದ್ರ, ಪಶು ವೈದ್ಯಕೀಯ ಕೇಂದ್ರ, ಕೃಷಿ ಉತ್ಪನ ಮಾರುಕಟ್ಟೆ ಕೇಂದ್ರಗಳು ಇವೆ. ಇದೀಗ ತಾಲೂಕು ಪಂಚಾಯತ್‌, ಪಂಚಾಯತ್‌ ರಾಜ್‌ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಿಸಿಎಂ, ಸಮಾಜ ಕಲ್ಯಾಣ, ಕೆಇಬಿ, ತೋಟಗಾರಿಕೆ, ಕೃಷಿ ಇಲಾಖೆ, ಸಿವಿಲ್‌ ನ್ಯಾಯಾಲಯ, ಡಿವೈಎಸ್‌ಪಿ ಕಾರ್ಯಾಲಯ, ಸಾರಿಗೆ ಘಟಕ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳು ಸೃಷ್ಟಿಗೊಂಡು ಕಚೇರಿಗಳು ಪ್ರಾರಂಭಗೊಂಡಲ್ಲಿ ಮಾತ್ರ ಪೂರ್ಣ ತಾಲೂಕು ಕೇಂದ್ರವೆಂದು ಗುರುತಿಸಿಕೊಳ್ಳುತ್ತದೆ. 

ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಹುಮನಾಬಾದ: ನನೆಗುದಿಗೆ ಬಿದ್ದ ಕಾಮಗಾರಿಗಳನ್ನು ಸೂಕ್ತ ಸಮಯದಲ್ಲಿ ಮುಗಿಸುವಂತೆ ಶಾಸಕ ರಾಜಶೇಖರ ಪಾಟೀಲ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಚಿಟಗುಪ್ಪ ಪಟ್ಟಣ ತಾಲೂಕು ಕೇಂದ್ರ ಉದ್ಘಾಟನೆ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಚಿಟಗುಪ್ಪ ಪಟ್ಟಣ ತಾಲೂಕು ಕೇಂದ್ರವಾಗಿ ಅಧಿಕೃತವಾಗಿ ಫೆ. 26ರಂದು ಚಾಲನೆ ದೊರೆಯಲ್ಲಿದೆ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳು ಆ ಭಾಗದ ಜನರ ಅನುಕೂಲಕ್ಕೆ ಅಣಿಯಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಇಲಾಖೆಗಳ ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಇಲಾಖೆ ಸ್ಥಾಪನೆಗೆ ತಯಾರಿ ಮಾಡಿಕೊಳ್ಳಬೇಕು. ಆ ಭಾಗದ ಜನರು ಅನೇಕ ವರ್ಷಗಳ ಹೋರಾಟ ನಡೆಸಿ ಇದೀಗ ಅವರ ಕನಸು ನನಸ್ಸಾಗುತ್ತಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.

ಮಾರ್ಚ್‌ ತಿಂಗಳಿಂದ ಬೇಸಿಗೆ ಪ್ರಾರಂಭಗೊಳ್ಳುತ್ತಿದ್ದು, ಹುಮನಾಬಾದ, ಚಿಟಗುಪ್ಪ ಪುರಸಭೆಗಳು ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಲೇ ಅಧಿಕಾರಿಗಳು ಜಾಗೃತೆ ವಹಿಸಬೇಕು. ಅಲ್ಲದೇ ಯಾವ ಇಲಾಖೆಗಳಲ್ಲಿ ನೆನೆಗುದ್ದಿಗೆ ಬಿದ್ದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಚುನಾವಣೆಗೂ ಮುನ್ನ ಮುಗಿಸುವ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮಗಳು ನಡೆದ ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಮೊದಲು ಪರಿಹಾರ ಕಂಡುಕೊಳ್ಳುವ ಕೆಲಸ ಅಧಿಕಾರಿಗಳು ಮಾಡಬೇಕು. ನಾವು ನೀಡಿದ ಭರವಸೆಗಳು ಈಡೇರಿಸುವ ಕೆಲಸ ಮಾಡಿ, ಅನುದಾನದ ಚಿಂತೆ ಅಧಿಕಾರಿಗಳು ಮಾಡುವುದು ಬೇಡ ಎಂದು ತಿಳಿಸಿದರು.

ಈಗಾಗಲೇ ಚಿಟಗುಪ್ಪ ಹಾಗೂ ಹುಮನಾಬಾದ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಅವುಗಳ ಗುಣಮಟ್ಟ ವೀಕ್ಷಿಸಲು ಪ್ರತ್ಯೇಕ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ನಿಯೋಜಿಸಿದ್ದಾರೆ. ಯಾವುದೇ ಕಾಮಗಾರಿಗಳು ಕಳಪೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದ ಅವರು, ಮಾ. 5ರಂದು ಹುಮನಾಬಾದ ಮತ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಕುಂದುಕೊರತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.

ಬೀದರ: ನೂತನ ಚಿಟಗುಪ್ಪ ತಾಲೂಕು ಉದ್ಘಾಟನಾ ಸಮಾರಂಭವು ಜಿಲ್ಲಾಡಳಿತದ ಆಶ್ರಯದಲ್ಲಿ ಫೆ. 26ರಂದು ಸಂಜೆ 5ಕ್ಕೆ ಚಿಟಗುಪ್ಪದ ತಹಶೀಲ್ದಾರ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು.
 ಶಾಸಕ ರಾಜಶೇಖರ ಪಾಟೀಲ ಅಧ್ಯಕ್ಷತೆ ವಹಿಸುವರು.

ಟಾಪ್ ನ್ಯೂಸ್

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

1-chirag

Malaysia Open; ಸೆಮಿಫೈನಲ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಸೋಲು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.