ಚೌಡಯ್ಯ ಭಾವಚಿತ್ರ ಮೆರವಣಿಗೆ
Team Udayavani, Jan 22, 2018, 12:32 PM IST
ಬೀದರ: ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಆಚರಣೆ ನಿಮಿತ್ತ ಜಿಲ್ಲಾಡಳಿತದಿಂದ
ಚೌಡಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.
ಅಲಂಕೃತ ವಾಹನದಲ್ಲಿ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ಸಿಕ್ಕಿತು. ಮೆರವಣಿಗೆ ಭಗತ್‌ಸಿಂಗ್, ಬಸವೇಶ್ವರ ಸರ್ಕಲ್, ಅಂಬೇಡ್ಕರ ಸರ್ಕಲ್, ಕನ್ನಡಾಂಬೆ ಗೆಳೆಯರ ವೃತ್ತದ ಮಾರ್ಗವಾಗಿ ರಂಗಮಂದಿರಕ್ಕೆ ಬಂದು ಸೇರಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ರಹೀಂ ಖಾನ್, ಸಂಸದ ಭಗವಂತ ಖೂಬಾ, ನಗರಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ, ಮುಖಂಡರಾದ ಶೈಲೇಂದ್ರ ಬೆಲ್ದಾಳೆ, ಚಂದ್ರಾಸಿಂಗ್, ಪತ್ರಕರ್ತ ಬಾಬು ವಾಲಿ, ಟೋಕರಿ ಕೋಳಿ ಸಮಾಜದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ, ಉಪಾಧ್ಯಕ್ಷರಾದ ಸುನೀಲ್ ಖಾಶೆಂಪುರ, ಪಾಂಡುರಂಗ ಗುರೂಜಿ, ಶಿವರಾಜ ಜಮಾದಾರ, ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ, ಶಿವಕುಮಾರ ಶೀಲವಂತ, ಜಿಲ್ಲಾಮಟ್ಟದ ಅ ಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು. ಸರ್ಕಾರಿ, ಅರೇ ಸರ್ಕಾರಿ
ಸಂಘ ಸಂಸ್ಥೆಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಲಾಯಿತು. ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಅವರು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು. ಬಳಿಕ ಗಣ್ಯರು ಹಾಗೂ ಸಮುದಾಯದ ಬಂಧುಗಳು ಪುಷ್ಪಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.