ಕುರಿಗಾಹಿಗಳ ಕೈ ಹಿಡಿದ ಸಿಎಂ
Team Udayavani, May 17, 2020, 5:47 AM IST
ಬೀದರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ರೈತರು, ಕುರಿಗಾಹಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದು ಬೋನಸ್ ನೀಡಿದಂತಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಬಜೆಟ್‌ನಲ್ಲಿ ಕುರಿ-ಮೇಕೆಗಳು ಆಕಸ್ಮಿಕ ಅಪಘಾತ ಹಾಗೂ ರೋಗದಿಂದ ಮೃತಪಟ್ಟರೆ ಪರಿಹಾರ ನೀಡಬೇಕೆಂದು ಸಿಎಂ ಅವರಿಗೆ ಕೋರಲಾಗಿತ್ತು. ಅಲ್ಲದೆ ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಕುರಿ ಸಾಕಾಣಿಕೆದಾರರಿಂದ ಇದೇ ಕೋರಿಕೆ ಕೇಳಿ ಬಂದಿತ್ತು. ಆಗಲೂ ವೈಯಕ್ತಿಕವಾಗಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ಮನವರಿಕೆ ಮಾಡಲಾಗಿತ್ತು. ಇಂದು 500 ಕೋಟಿ ರೂ. ಪ್ಯಾಕೇಜ್‌ನಲ್ಲಿ ಕುರಿಗಾಹಿಗಳಿಗೆ ನೈಸರ್ಗಿಕ ವಿಕೋಪದಲ್ಲಿ ಕುರಿ-ಮೇಕೆಗಳು ಸತ್ತರೆ 5000 ರೂ. ಪರಿಹಾರ ಧನ ಘೋಷಿಸಿದ್ದಕ್ಕೆ ಸಿಎಂಗೆ ಅಭಿನಂದಿಸುವುದಾಗಿ ಹೇಳಿದ್ದಾರೆ.
ಪಶುಗಳಿಗೆ ಆಹಾರದಲ್ಲಿ ಮೆಕ್ಕೆ ಜೋಳ ಪ್ರಮುಖವಾಗಿದ್ದು, ಮೆಕ್ಕೆ ಜೋಳ ಬೆಳೆಗಾರರಿಗೂ ಈ ಸಮಯದಲ್ಲಿ 5000 ರೂ. ಘೋಷಿಸಿದ್ದು ಪರೋಕ್ಷವಾಗಿ ಪಶು ಪಾಲಕರು-ಪಶುಗಳಿಗೆ ಸಹಾಯ ಮಾಡಿದಂತಾಗಿದ್ದು, ಕಷ್ಟದ ಸಮಯದಲ್ಲಿ ಸಮಯೋಚಿತವಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.