ವಾರ ಕಳೆದ್ರೂ ಏರಿಕೆಯಾಗದ ಹಾಜರಾತಿ

ಕಾಲೇಜಿನತ್ತ ಬರಲು ವಿದ್ಯಾರ್ಥಿಗಳ ನಿರಾಸಕ್ತಿ

Team Udayavani, Nov 24, 2020, 6:12 PM IST

ವಾರ ಕಳೆದ್ರೂ ಏರಿಕೆಯಾಗದ ಹಾಜರಾತಿ

ಬೀದರ: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೋವಿಡ್‌-19 ಸಂದಿಗ್ಧತೆಯ ನಡುವೆ ಸರ್ಕಾರ ಕಾಲೇಜು ಆರಂಭಿಸಿ ವಾರ ಕಳೆದಿದೆ. ಆದರೆ, ವೈರಸ್‌ನ ಆತಂಕ ಹಿನ್ನೆಲೆಯಲ್ಲಿ ತರಗತಿಯಲ್ಲಿ ಕುಳಿತ ಪಾಠ ಕೇಳಲು ನಿರಾಸಕ್ತಿ ತೋರುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ಗೆ ಸೈ ಎನ್ನುತ್ತಿದ್ದಾರೆ. ಹಾಗಾಗಿ ಕಾಲೇಜಿನತ್ತ ಬೆರಳಣಿಕೆಯಷ್ಟು ಮಕ್ಕಳು ಮಾತ್ರ ಹೆಜ್ಜೆ ಹಾಕುತ್ತಿರುವುದು ಕಾಣಿಸಿಗುತ್ತಿದೆ.

ಕೋವಿಡ್‌ ವೈರಸ್‌ ಹರಡುವಿಕೆ ಹಿನ್ನೆಲೆಯಲ್ಲಿ ಕಳೆದೆಂಟು ತಿಂಗಳಿಂದ ಪದವಿ ಮತ್ತು ತಾಂತ್ರಿಕ ಕೋರ್ಸ್‌ಗಳ ತರಗತಿ ಕೊಠಡಿ ಬಾಗಿಲುಗಳನ್ನುನ.17ರಿಂದ ಮುಂಜಾಗ್ರತಾ ಕ್ರಮಗಳೊಂದಿಗೆ ತೆರೆದು, ಬೋಧನಾ ಚಟುವಟಿಗಳಿಗೆ ಚಾಲನೆ ನೀಡಲಾಗಿದೆ.ಆದರೆ, ಬೀದರ ನಗರ ಸೇರಿದಂತೆ ಜಿಲ್ಲೆಯ ಎಲ್ಲಕಾಲೇಜುಗಳಲ್ಲೂ ಒಟ್ಟು ವಿದ್ಯಾರ್ಥಿಗಳ ಹಾಜರಾತಿಪೈಕಿ ಶೇ.10ರಷ್ಟು ಸಹ ದಾಟುತ್ತಿಲ್ಲ. ಬೀದರ ಜಿಲ್ಲೆಯಲ್ಲಿ ಗುಲಬರ್ಗಾ ವಿವಿ ಮತ್ತುವಿಜಯಪುರ ಮಹಿಳಾ ವಿವಿ ವ್ಯಾಪ್ತಿಯ 10 ಸರ್ಕಾರಿಮತ್ತು 18 ಅನುದಾನಿತ ಪದವಿ ಕಾಲೇಜುಗಳಿದ್ದು, ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.

ಬಹುತೇಕ ಕಾಲೇಜುಗಳಲ್ಲಿ ಸ್ಯಾನಿಟೈಸರ್‌ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಸೀನರಾಗಲುಬೇಕಾದ ವ್ಯವಸ್ಥೆ ಮಾಡಲಾಗುತ್ತಿದೆ.ಈ ನಡುವೆ ದೇಶದಲ್ಲಿ ಎರಡನೇ ಅಲೆರೂಪದಲ್ಲಿ ಕೋವಿಡ್‌ ಆರ್ಭಟ ಹೆಚ್ಚುತ್ತಿರುವುದರಜತೆಗೆ ಕಾಲೇಜು ತರಗತಿಗೆ ಕೂಡಲು ಪಾಲಕರ ಸಮ್ಮಿತ ಪತ್ರ, ಕೋವಿಡ್‌ ತಪಾಸಣಾ ವರದಿಜೊತೆಗಿಟ್ಟುಕೊಳ್ಳುವುದು ಅನಿವಾರ್ಯ ಹಿನ್ನೆಲೆಯಲ್ಲಿ ಕೋವಿಡ್‌ ವರದಿ ಕೈಸೇರದಿರುವುದು ಮತ್ತು ಅನೇಕ ವಿದ್ಯಾರ್ಥಿಗಳು ಕೊರೊನಾ ಟೆಸ್ಟ್‌ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಜತೆಗೆ ಕಾಲೇಜಿಗೆ ಬರಬೇಕೆಂಬುದು ಕಡ್ಡಾಯ ಇಲ್ಲವಾದ್ದರಿಂದ ತರಗತಿಗೆ ಗೈರಾಗುತ್ತಿದ್ದಾರೆ. ಕೆಲವರುಕಾಲೇಜಿಗೆ ಬಂದು ಶೈಕ್ಷಣಿಕ ದಾಖಲೆಗಳ ಸಲ್ಲಿಕೆ,ಅಗತ್ಯ ಮಾಹಿತಿ ಪಡೆದು ವಾಪಸ್ಸಾಗುತ್ತಿದ್ದಾರೆ.ಹಾಗಾಗಿ ಕ್ಲಾಸ್‌ ರೂಮ್‌ಗಳು ಮಕ್ಕಳಿಲ್ಲದೇ ಭಣಗುಡುತ್ತಿವೆ.

ಆನ್‌ಲೈನ್‌ ಶಿಕ್ಷಣದ ಮೊರೆ: ತರಗತಿಗೆ ವಿದ್ಯಾರ್ಥಿಗಳ ನಿರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ ಉನ್ನತ ಶಿಕ್ಷಣ ಇಲಾಖೆ ಆನ್‌ಲೈನ್‌ ಶಿಕ್ಷಣಕ್ಕೆ ಮತ್ತಷ್ಟು ಒತ್ತು ಕೊಡುತ್ತಿದೆ. ಹಾಗಾಗಿ ಕಾಲೇಜಿಗೆಬರಲು ಹಿಂದೇಟು ಹಾಕುತ್ತಿರುವ ವಿದ್ಯಾರ್ಥಿಗಳು, ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಯೂಟ್ಯೂಬ್‌ ಮತ್ತು ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ವಿಷಯ-ಅಧ್ಯಾಯವಾರು ಪಾಠಗಳನ್ನುಹರಿಬಿಡುತ್ತಿದ್ದು, ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ.

ಬೀದರ ಜಿಲ್ಲೆಯ ಪದವಿ ಕಾಲೇಜುಗಳಿಗೆ ಬೆರಳಣಿಕೆ ವಿದ್ಯಾರ್ಥಿಗಳು ಮಾತ್ರಬರುತ್ತಿದ್ದಾರೆ. ಮಕ್ಕಳ ಹಾಜರಾತಿಗೆ ಕೋವಿಡ್‌ ಪರೀಕ್ಷಾ ವರದಿ ಕಡ್ಡಾಯ. ಆದರೆ, ಬಹುತೇಕರು ಟೆಸ್ಟ್‌ಗೆ ಹಿಂದೇಟು ಹಾಕಿದರೆ, ಕೆಲವರದ್ದು ವರದಿ ಕೈ ಸೇರುತ್ತಿಲ್ಲ. ಹಾಗಾಗಿ ನೌಬಾದ್‌ಪಿಎಚ್‌ಸಿಯಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಪರೀಕ್ಷಾ ಕೇಂದ್ರ ಆರಂಭಿಸಲು ಮನವಿಮಾಡಲಾಗಿದೆ. ಯೂಟ್ಯೂಬ್‌, ವಾಟ್ಸ್‌ಆ್ಯಪ್‌ಮೂಲಕ ಪಾಠಗಳನ್ನು ಪರಿಣಾಮಕಾರಿಯಾಗನಡೆಸಲಾಗುತ್ತಿದೆ. -ಮನೋಹರ ಬಿ., ಪದವಿ ಕಾಲೇಜುಗಳ ನೋಡಲ್‌ ಅಧಿಕಾರಿ

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.