ಕಾಯ್ದೆ ದುರ್ಬಳಕೆ ತಡೆಗೆ ಸಮಿತಿ ರಚನೆ: ಪಾಟೀಲ

Team Udayavani, Jan 2, 2018, 12:36 PM IST

BID-2.jpg

ಬೀದರ: ವರದಕ್ಷಿಣೆ ನಿಷೇಧ ಕಾಯ್ದೆಯ ದುರ್ಬಳಕೆ ತಡೆಗಟ್ಟಲು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ
ಕುಟುಂಬ ಕಲ್ಯಾಣ ಸಮಿತಿ ರಚಿಸಲಾಗಿದ್ದು, ನಿವೃತ್ತ ಜಿಲ್ಲಾ ನ್ಯಾಯಾಧೀಶ ರಾಜಮೋಹನ ಶ್ರೀವಾಸ್ತವ ಅವರನ್ನು ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಸ್‌.ಪಾಟೀಲ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯ ಸದಸ್ಯರಾಗಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕವಿತಾ ಹುಷಾರೆ ಹಾಗೂ ನ್ಯಾಯವಾದಿ ಬಿ.ಎಸ್‌.ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರವಧಿ 3 ತಿಂಗಳು ಇರುತ್ತದೆ. ಅವರ ಕಾರ್ಯದಕ್ಷತೆ ಆಧರಿಸಿ ಅಧಿಕಾರವಧಿ ವಿಸ್ತರಿಸಲಾಗುತ್ತದೆ ಎಂದರು. ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನೂ ಬಂಧಿಸದೇ ಪ್ರಕರಣದಲ್ಲಿ ಭಾಗವಹಿಸದಿರುವ ಹಲವರನ್ನು ಬಂಧಿಸಲಾಗುತ್ತಿದೆ. ಇದರಿಂದಾಗಿ ಪ್ರಕರಣದಲ್ಲಿ ಭಾಗಿಯಾಗದೇ ಇರುವವರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿರುತ್ತವೆ. ಅಲ್ಲದೇ ಕಾಯ್ದೆಯ ದುರ್ಬಳಕೆಗೆ ಅವಕಾಶವಿರುತ್ತದೆ.

ಇಂತಹ ಲೋಪಗಳು ನಡೆಯದಂತೆ ನೋಡಿಕೊಳ್ಳಲು ಸಮಿತಿ ನೆರವಾಗಲಿದೆ ಎಂದರು. ಸಮಿತಿಯು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಒತ್ತು ನೀಡುವುದರಿಂದ ಕಕ್ಷಿದಾರರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಅಲೆಯುವುದು ತಪ್ಪಲಿದೆ. ಪ್ರಕರಣದಲ್ಲಿ ಭಾಗಿಯಾಗದೇ ಇರುವವರು ಬಂಧನಕ್ಕೆ ಒಳಗಾಗದಂತೆ ಹಾಗೂ ಮುಖ್ಯ ಆರೋಪಿಯನ್ನು ಮಾತ್ರ ಬಂಧಿ ಸಲು ಈ ಸಮಿತಿ ನೆರವಾಗಲಿದೆ ಎಂದು ಹೇಳಿದರು. ಸಮಿತಿಯ ಅಧ್ಯಕ್ಷ ರಾಜಮೋಹನ ಶ್ರೀವಾಸ್ತವ, ನ್ಯಾಯಾಧೀಶರಾದ ಜಿ.ನಂಜುಂಡಯ್ಯ, ಆರ್‌.ರಾಘವೇಂದ್ರ, ಯಮನಪ್ಪ, ಜೀವನರಾವ್‌ ಕುಲಕರ್ಣಿ, ಉಜ್ವಲಾ ವೀರಣ್ಣ, ಶ್ರೇಯಾಂಶ ದೊಡ್ಡಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಸಮಿತಿಯ ಸದಸ್ಯೆ ಕವಿತಾ ಹುಷಾರೆ, ಬಿ.ಎಸ್‌. ಪಾಟೀಲ ಇದ್ದರು

ಕುಟುಂಬ ಕಲ್ಯಾಣ ಸಮಿತಿ ಕಚೇರಿ ಉದ್ಘಾಟನೆ 
ಬೀದರ: ವರದಕ್ಷಿಣೆ ನಿಷೇಧ ಕಾಯ್ದೆಯ ದುರುಪಯೋಗ ತಡೆಗೆ ಜಿಲ್ಲಾ ನ್ಯಾಯಾಲಯ ಆವರಣದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಟ್ಟಡದಲ್ಲಿ ಸ್ಥಾಪಿಸಿರುವ ಕುಟುಂಬ ಕಲ್ಯಾಣ ಸಮಿತಿ ಕಚೇರಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶ ಎಂ.ಎಸ್‌. ಪಾಟೀಲ ಸೋಮವಾರ ಉದ್ಘಾಟಿಸಿದರು.

ಇದೇ ವೆಳೆ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ರಾಜಮೋಹನ ಶ್ರೀವಾಸ್ತವ ಅವರು ಅಧಿಕಾರ ವಹಿಸಿಕೊಂಡರು. ಸಮಿತಿ ಸದಸ್ಯರಾಗಿ ನೇಮಕವಾದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕವಿತಾ ಹುಷಾರೆ ಹಾಗೂ ನ್ಯಾಯವಾದಿ ಬಿ.ಎಸ್‌. ಪಾಟೀಲ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ನಂಜುಂಡಯ್ಯ, ಹಿರಿಯ ನ್ಯಾಯಾ ಧೀಶ ಆರ್‌.ರಾಘವೇಂದ್ರ, ಹಿರಿಯ ಸಿವಿಲ್‌ ನ್ಯಾಯಾ ಧೀಶ ಯಮನಪ್ಪ, ಜೀವನರಾವ್‌ ಕುಲಕರ್ಣಿ, ಸಿವಿಲ್‌ ನ್ಯಾಯಾಧಿಧೀಶ ಉಜ್ವಲಾ ವೀರಣ್ಣ, ಸಿವಿಲ್‌ ನ್ಯಾಯಾಧೀಶ ಶ್ರೇಯಾಂಶ ದೊಡ್ಡಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌. ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ವಕೀಲರು ಇದ್ದರು.

ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಪೊಲೀಸರು ಸಮಿತಿಗೆ ಕಳುಹಿಸಬೇಕು. ನ್ಯಾಯಾಲಯಕ್ಕೆ ಬರುವ ಪ್ರಕಣಗಳನ್ನು ಸಹ ಸಮಿತಿಗೆ ಕಳುಹಿಸಲಾಗುತ್ತದೆ. ಸಮಿತಿಯು ಕನಿಷ್ಠ ವಾರಕ್ಕೊಮ್ಮೆ ಸಭೆ ಸೇರಿ ಒಂದು ತಿಂಗಳೊಳಗೆ ಪ್ರಕರಣದಲ್ಲಿನ ಸತ್ಯಾಂಶ ಪರಿಶೀಲಿಸಿ ಸಂಬಂ ಧಿಸಿದ ಪೊಲೀಸ್‌ ಠಾಣೆಗಳಿಗೆ ವರದಿ ನೀಡುತ್ತದೆ. ಈ ವರದಿ ಆಧರಿಸಿ ಅಪರಾಧಿಗಳನ್ನು ಬಂಧಿಸಲಾಗುತ್ತದೆ. ಸಮಿತಿ ವರದಿ ನೀಡುವವರೆಗೂ ಆರೋಪಿಗಳನ್ನು ಬಂಧಿಸುವಂತಿಲ್ಲ.
 ಎಂ.ಎಸ್‌. ಪಾಟೀಲ, ಜಿಲ್ಲಾ ನ್ಯಾಯಾಧೀಶ

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.