ತಿಂಗಳಾಂತ್ಯದಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಿ
Team Udayavani, Jan 12, 2018, 11:22 AM IST
ಬೀದರ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಲೇ ಕೈಗೆತ್ತಿಕೊಂಡಿರುವ ಎಲ್ಲಾ ಕಾಮಗಾರಿಗಳನ್ನು ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಿ, ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರ ಆರಂಭಿಸಬೇಕೆಂದು ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಪೂರ್ಣಗೊಂಡಿರುವ ಕಟ್ಟಡ ಕಾಮಗಾರಿಗಳನ್ನು ಜನಪ್ರತಿನಿಧಿಗಳಿಂದ ದಿನಾಂಕ ನಿಗದಿಪಡಿಸಿ ಕೂಡಲೇ ಉದ್ಘಾಟಿಸಬೇಕು. ಪ್ರಸಕ್ತ ಸಾಲಿನಲ್ಲಿ ಜಿಪಂಗೆ ಬಿಡುಗಡೆಯಾಗಿರುವ ಅನುದಾನ ಪೂರ್ಣ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ಸಂಬಂಧಿಸಿದ ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಘಟಕಗಳನ್ನು ಪರಿಶೀಲಿಸಿ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಜಿಪಂ ಸಭೆಗಳಲ್ಲಿ ಪದೇ-ಪದೇ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಸಭೆಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯ ಹಾಜರಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಶೇ.100ರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 30 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ. ಈ ಪೈಕಿ 3 ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಪ್ರಾಂಶುಪಾಲರಿದ್ದು, ಉಳಿದೆಡೆ ಪ್ರಭಾರಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಪ್ರಾಂಶುಪಾಲರ ಪ್ರಭಾರ ನೀಡುವಾಗ ಅನುಭವ ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಪ್ರೌಢ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಶೀಘ್ರ ವೇತನ ಬಿಡುಗಡೆ ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲೆ ಕೊಠಡಿಗಳನ್ನು ನೆಲಸಮಗೊಳಿಸಿ ವಿದ್ಯಾರ್ಥಿಗಳು ನೆಮ್ಮದಿಯಿಂದ ವ್ಯಾಸಂಗ ಮಾಡಲು ಮುತುವರ್ಜಿ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಡಿಆರ್‌ಡಿಎ ಕೋಶದ ಯೋಜನಾ ನಿರ್ದೇಶಕ ರಾಮಕೃಷ್ಣ ಮಾತನಾಡಿ, ಸಕಾಲ ವ್ಯಾಪ್ತಿಗೆ ಒಳಪಡುವ ಎಲ್ಲಾ ಅರ್ಜಿಗಳನ್ನು ಸಕಾಲದಡಿ ನೋಂದಣಿ ಮಾಡಬೇಕು. ಈ ಸೇವೆಗಳನ್ನು ಯಾವುದೇ ಕಾರಣಕ್ಕೂ ಆಫ್‌ಲೈನ್‌ನಲ್ಲಿ ನಿರ್ವಹಿಸಕೂಡದು ಎಂದು ತಿಳಿಸಿದರು.
ಸಭೆಯಲ್ಲಿ ವಯಸ್ಕರ ಶಿಕ್ಷಣ, ಅಕ್ಷರ ದಾಸೋಹ, ಆಯುಷ್, ಸಮಾಜ ಕಲ್ಯಾಣ, ಬಿಸಿಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪಶು ಪಾಲನೆ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.