ವೈದ್ಯರ ಮೇಲಿನ ಹಲ್ಲೆಗೆ ಖಂಡನೆ
Team Udayavani, May 22, 2020, 6:03 AM IST
ನಿಡಗುಂದಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ| ವಿವೇಕಾನಂದ ಹೂವಿನಹಳ್ಳಿ ಅವರ ಮೇಲೆ ರೋಗಿಯೊಬ್ಬರ ಸಂಬಂಧಿನಡೆಸಿರುವ ಹಲ್ಲೆ ಘಟನೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಖಂಡಿಸಿದೆ. ಘಟನೆ ಖಂಡಿಸಿ ಸಂಘದ ಪದಾಧಿಕಾರಿಗಳು ಬಸವನಬಾಗೇವಾಡಿ ಡಿವೈಎಸ್‌ಪಿ, ನಿಡಗುಂದಿ ತಹಶೀಲ್ದಾರ್, ಪಿಎಸ್‌ಐ, ವೈದ್ಯಾಧಿ ಕಾರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ಗೌಡರ, ನೌಕರರ ಸಂಘದ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ರಕರೆಡ್ಡಿ ಮಾತನಾಡಿ, “ಕೋವಿಡ್ ದಂತಹ ಸಂದಿಗ್ಧ ಸಮಯದಲ್ಲಿಯೂ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇದರಿಂದ ನೌಕರರಿಗೆ ಕೆಲಸ ಮಾಡುವ ಮನೋಸ್ಥೈರ್ಯ ಕುಸಿಯುತ್ತದೆ, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ನಿರ್ಭಯವಾಗಿ ಕೆಲಸ ನಿರ್ವಹಿಸಲು ಸೂಕ್ತ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.
ಬಸವನಬಾಗೇವಾಡಿ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ಡಿವೈಎಸ್‌ಪಿ ಈ. ಶಾಂತವೀರ, ಪಿಎಸ್‌ಐ ಸಿ.ಬಿ. ಚಿಕ್ಕೋಡಿ, ಆರೋಗ್ಯಾಧಿಕಾರಿ ಡಾ| ಪ್ರಕಾಶ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು. ಕುಮಾರ ಬಾಗೇವಾಡಿ, ಸಲೀಂ ದಡೆದ, ಆರ್.ಎಸ್. ಕಮತ, ಎಂ.ಎಂ. ಮುಲ್ಲಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.