ಬೆಳೆಹಾನಿ ಸಮೀಕ್ಷೆ ಜವಾಬ್ದಾರಿಯಿಂದ ನಡೆಸಿ
Team Udayavani, Jul 26, 2022, 3:50 PM IST
ಔರಾದ: ಅತಿವೃಷ್ಠಿಯಿಂದಾಗಿ ಔರಾದ ಮತ್ತು ಕಮಲನಗರ ತಾಲೂಕುಗಳಲ್ಲಿ ಉಂಟಾಗಿರುವ ರಸ್ತೆ, ಸೇತುವೆ, ಶಾಲೆ-ಕಾಲೇಜುಗಳು, ಅಂಗನವಾಡಿ ಕಟ್ಟಡ ಸೇರಿ ಇತರೆ ಹಾನಿಯ ಬಗ್ಗೆ ಇಲಾಖಾವಾರು ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಲ್ಲಿನ ಪಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಔರಾದ ಹಾಗೂ ಕಮಲನಗರ ತಾಲೂಕಿನ ಹಲವು ಗ್ರಾಮಗಳಲ್ಲಿ ತಾವು ಸಂಚರಿಸಿ ಹಾನಿಯ ಬಗ್ಗೆ ಕಣ್ಣಾರೆ ವೀಕ್ಷಿಸಿದ್ದೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಔರಾದ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಧಿಕಾರಿಗಳು ಸಲ್ಲಿಸುವ ವರದಿಯನ್ನು ಆಧರಿಸಿ ಅತಿವೃಷ್ಟಿ ಪ್ರದೇಶವೆಂದು ಘೋಷಿಸಲಿದ್ದಾರೆ. ಹಾಗಾಗಿ ಅಧಿಕಾರಿಗಳು ಅಚ್ಚುಕಟ್ಟಾಗಿ ಹಾನಿಯ ಸಮೀಕ್ಷೆ ನಡೆಸಬೇಕು ಎಂದರು.
ಅನೇಕ ಕಡೆಗಳಲ್ಲಿ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು ಕಂಡುಬಂದಿದ್ದು, ಇದು ಒಳ್ಳೆಯ ಸಂಕೇತವಲ್ಲ. ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬೆಳೆ ಹೆಚ್ಚು ಹಾನಿಯಾಗದ ರೀತಿಯಲ್ಲಿ ರೈತರಿಗೆ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎರಡು ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ನದಿ ಮತ್ತು ಹಳ್ಳದ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಸೋಯಾ ಅವರೆಗಿಂತ ಹೆಸರು, ಉದ್ದು, ತೊಗರಿ ಹೆಚ್ಚಿನ ಹಾನಿಯಾಗಿದೆ. ಕ್ಷೇತ್ರದಲ್ಲಿ 605 ಹೆಕ್ಟೇರ್ ಪ್ರದೇಶ ಹಾನಿಯಾಗಿರುವುದು ವರದಿಯಾಗಿದ್ದು, ಮಳೆನಿಂತ ನಂತರ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೃಷಿ ಸಹಾಯಕ ನಿರ್ದೇಶಕ ಎಂ.ಎ.ಕೆ ಅನ್ಸಾರಿ ಸಭೆಗೆ ಮಾಹಿತಿ ನೀಡಿದರು.
ಅಧಿಕಾರಿಗಳಿಂದ ಮನೆ ಹಾನಿಯ ಬಗ್ಗೆ ವಿವರಣೆ ಪಡೆದ ಸಚಿವರು, ಕ್ಷೇತ್ರದಲ್ಲಿ ಬಹುತೇಕ ಎಲ್ಲ ಸಂತ್ರಸ್ತರಿಗೆ ಪರಿಹಾರಧನ ನೀಡಲಾಗಿದೆ. ಇನ್ನೂ ಬಾಕಿ ಇರುವ ಎಲ್ಲ ಸಂತ್ರಸ್ತರಿಗೆ ಮೊದಲ ಹಂತದಲ್ಲಿ ಕೊಡಲಾಗುತ್ತಿರುವ ಪರಿಹಾರದ ಮೊತ್ತವನ್ನು ತುರ್ತಾಗಿ ಕೊಡುವ ಕೆಲಸ ಮಾಡಬೇಕೆಂದು ತಹಶೀಲ್ದಾರರಿಗೆ ಸೂಚಿಸಿದರು. ಅತಿವೃಷ್ಟಿಯಿಂದ ಹಾನಿಯಾದ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ಬಗ್ಗೆ ಇದೇ ವೇಳೆ ವಿವರಣೆ ಪಡೆದರು.
ಎಲ್ಲ ಶಾಲೆಗಳಿಗೆ ಆಟದ ಮೈದಾನ ಮತ್ತು ಸುತ್ತುಗೋಡೆಗಳನ್ನು ನರೇಗಾದಡಿ ನಿರ್ಮಿಸಿಕೊಡುವ ಉದ್ದೇಶವಿದ್ದು, ಅವಶ್ಯಕತೆಯಿರುವ ಶಾಲೆ ಮತ್ತು ಅಂಗನವಾಡಿಗಳ ಪಟ್ಟಿ ನೀಡುವಂತೆ ತಾಕೀತು ಮಾಡಿದರು. ಸಭೆಯಲ್ಲಿ ತಹಶೀಲ್ದಾರ್ ರಮೇಶ್ ಪೆದ್ದೆ, ಔರಾದ ತಾಪಂ ಇಒ ಬಿರೇಂದ್ರಸಿಂಗ್ ಠಾಕೂರ್, ಕಮಲನಗರ ಇಒ ಸೈಯದ್ ಫಜಲ್ ಮಹಮೂದ್, ಮಾಶೆಟ್ಟಿ ಚಿದ್ರಿ ಇನ್ನಿತರ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.