ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ
Team Udayavani, Sep 10, 2022, 3:10 PM IST
ಬೀದರ: ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಬೀದರ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ತಿರಂಗಾ ಪಾದಯಾತ್ರೆ ನಡೆಯಿತು.
ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು. ಶಾಸಕ ರಹೀಮ್ ಖಾನ್ ನೇತೃತ್ವದಲ್ಲಿ ಇಲ್ಲಿನ ನೆಹರು ಕ್ರೀಡಾಂಗಣ ಸಮೀಪದ ಸಾಯಿ ಸ್ಕೂಲ್ ಆವರಣದಿಂದ ಆರಂಭವಾದ ಯಾತ್ರೆ ಅಂಬೇಡ್ಕರ್ ವೃತ, ಬಸವೇಶ್ವರ, ಬೊಮಗೊಂಡೇಶ್ವರ ಸರ್ಕಲ್, ಗಾಂಗಂಜ್, ಚಿದ್ರಿ ಮೂಲಕ ಶಾಸಕರ ಗೃಹ ಕಚೇರಿವರೆಗೆ ನಡೆಯಿತು. ನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬ್ಯಾಂಡ್ ಬಾಜಾದೊಂದಿಗೆ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಘೋಷಣೆ ಹಾಕುತ್ತ ಹೆಜ್ಜೆ ಹಾಕಿದರು.
ಪಾದಯಾತ್ರೆಗೂ ಮುನ್ನ ಮಾತನಾಡಿದ ಶಾಸಕ ರಹೀಮ್ ಖಾನ್, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟ ಕೊಡುಗೆ ಅಪಾರವಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಕಮಲ ಮುಖಂಡರು ನಕಲಿ ದೇಶ ಭಕ್ತರು. ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ, ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.
ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ ವಿವಿಧ ತನಿಖಾ ಸಂಸ್ಥೆ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದೆ. ಅಧಿಕಾರ ಶಾಶ್ವತವಲ್ಲ. ಬರುವ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಕಿತ್ತೂಗೆದು ಕಾಂಗ್ರೆಸಗೆ ಅಧಿಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ್, ಮುಖಂಡರಾದ ಪಂಡಿತರಾವ್ ಚಿದ್ರಿ, ಸಂಜಯ ಜಾಗೀರದಾರ್ ಮಾತನಾಡಿದರು. ಪಾದಯಾತ್ರೆಯಲ್ಲಿ ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮಾಜಿ ಎಂಎಲ್ಸಿ ಕೆ. ಪುಂಡಲೀಕರಾವ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಗ್ರಾಮೀಣ ಬ್ಲಾಕ್ ಸಮಿತಿ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ನಗರ ಅಧ್ಯಕ್ಷ ಮಹ್ಮದ್ ಯುಸೂಫ್, ಪ್ರಮುಖರಾದ ಪರ್ವೆಜ್ ಕಮಲ್, ಗೋವರ್ಧನ್ ರಾಠೊಡ್, ಇರ್ಷಾದ್ ಪೈಲ್ವಾನ್, ಮಹ್ಮದ್ ರಿಯಾಜ್, ಧನರಾಜ ಹಂಗರಗಿ, ಹಣಮಂತ ಮಲ್ಕಾಪುರೆ, ಸಚಿನ್ ಮಲ್ಕಾಪುರೆ, ಎಂ.ಎ. ಸಮಿ, ಮಹ್ಮದ್ ಯೂಸೂಫ್ ಇತರರಿದ್ದರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.