ರಾಜ್ಯಪಾಲರ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ
Team Udayavani, May 19, 2018, 11:36 AM IST
ಬೀದರ: ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್
ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ ಕಪ್ಪು ದಿನವನ್ನಾಗಿ
ಆಚರಿಸಿದರು.
ಜಿಲ್ಲಾ ಯುವಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದ
ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ರಾಷ್ಟ್ರಪತಿಗಳಿಗೆ
ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರದಿದ್ದರೂ ಅಧಿಕಾರ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ
ಅವರು, ತಮ್ಮ ಪಕ್ಷದಿಂದ ಪೂರ್ಣ ಪ್ರಮಾಣದ ಬಹುಮತ ತೋರಿಸದೇ ಅಕ್ರಮವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ
ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉನ್ನತ ಸ್ಥಾನದಲ್ಲಿರುವ ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಈ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಹ ಫರೀದುಲ್ಲಾ ಖಾನ, ಅಕ್ಮಲ್ ಪಾಶಾ ಚಿದ್ರಿ, ಸೈಯದ್ ಅಲಿಶಾನ ಖಾದ್ರಿ, ಅಜ್ಮತ ಅಲ್ಲೂರೆ, ಮಹ್ಮದ್ ಹಕ್, ಶೇಕ್ ನಜೀಬ್, ಪರ್ವೇಜ್ ಕಮಲ್, ಪ್ರೇಮ್ ಸಾಗರ, ವೆಂಕಟ್ ಮತ್ತಿತರರು ಇದ್ದರು.
ಹುಮನಾಬಾದ: ಕರ್ನಾಟಕ ರಾಜ್ಯಪಾಲರು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಪಿಐಎಂ ಮತ್ತು ಪ್ರಗತಿ ಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರದ ಬಿಜೆಪಿ ಸರಕಾರ ಮತ್ತು ರಾಜ್ಯ ಪಾಲರ ಕಚೇರಿಯ ಅಧಿಕಾರ ದುರುಪಯೋಗ ಮಾಡಿಕೊಂಡು ಬಹುಮತ ಇಲ್ಲದ ಹಾಗೂ ಶೇ.36ರಷ್ಟು ಮತ ಪಡೆದ ಬಿಜೆಪಿ ಮುಖಂಡ ಯಡಿಯೂರಪ್ಪ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿದ್ದು, ಶೇ.56ಕ್ಕೂ ಹೆಚ್ಚು ಮತಪಡೆದು ಬಹು ಸಂಖ್ಯಾಬಲ ಹೊಂದಿದ ಜೆಡಿಎಸ್ -ಕಾಂಗ್ರೆಸ್ ಪಕ್ಷಗಳಿಗೆ ಸರಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಸಂಘಟನೆಗಳು ಖಂಡಿಸಿದವು.
ಸಿಪಿಐಎಂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಭು ಸಂತೋಷಕರ್, ಬಸವರಾಜ ಮಾಳಗೆ, ಇಸಾಮೋದ್ದಿನ್
ಮಿರಾಸಾಬ್, ಜನವಾದಿ ಮಹಿಳಾ ಸಂಘಟನೆಯ ರೇಷ್ಮಾ ಹಂಸರಾಜ, ಕುಶಲಾ ಹುಣಜಿ, ಶಂಶಿಕಾಂತ ಡಾಂಗೆ, ಕಟ್ಟಡ ಕಾರ್ಮಿಕ ಮುಖಂಡ ಸೈಯದ ಗೌಸೋದ್ದಿನ್, ಸೋಮು ಡಾಂಗೆ, ಸೋಮಶೇಖರ ಗಡವಂತಿ, ಶೇಖ ವಾಜೀದ್ ಪಾಶಾ, ಮಹಮ್ಮದ ಫಿರೋಜ, ಮಹಮ್ಮದ ಗೌಸ, ಖೂರೇಶಿ, ಸೈಯದ ವಾಸಿಮ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.