ಸಂವಿಧಾನ ಎಲ್ಲ ಕಾನೂನುಗಳ ತಾಯಿ: ಸಿದ್ರಾಮ್
Team Udayavani, Jan 20, 2021, 2:47 PM IST
ಬೀದರ: ಭಾರತದ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ನಮ್ಮ ಸಂವಿಧಾನ ಎಲ್ಲ ಕಾನೂನುಗಳ ತಾಯಿ ಬೇರು. ಎಲ್ಲರಿಗೂ ಸಮಾನ ಹಕ್ಕು ನೀಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಪಿ. ಸಿದ್ರಾಮ್ ಹೇಳಿದರು.
ನಗರದ ಲಾಡಗೇರಿ ಹಿರೇಮಠದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಜಾಗೃತಿ ವೇದಿಕೆ, ನ್ಯೂ ಮದರ್ ತೆರೆಸಾ ಸಂಸ್ಥೆ, ಜಗದ್ಗುರು ಪಂಚಾಚಾರ್ಯ ಯುವಕ ಸಂಘ ಹಾಗೂ ನವೀನ್ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ನಡೆದ ಕಾನೂನು ಅರಿವು ಹಾಗೂ ಯುವ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿವೇಕಾನಂದರು ಭಾರತದ ಹೆಮ್ಮೆಯ ಪುತ್ರ. ಯುವ ಜನರಿಗೆ ಸ್ಫೂರ್ತಿ ಚಿಲುಮೆಯಂತಿದ್ದು, ಅವರ ಚಿಂತನೆ ಮತ್ತು ಆದರ್ಶ ಯುವಕರು ಜೀವನದಲ್ಲಿ ಅಳವಡಿಸಿಕೊಂಡರೆ ಭಾರತ ವಿಶ್ವದಲ್ಲಿಯೇ ಬಲಿಷ್ಠ ಆಗಬಹುದು. ಭಾರತದ ಭವ್ಯ ಪರಂಪರೆ ಮರುಸ್ಥಾಪನೆಗೆ ಇಂದಿನ ಯುವಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.
ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ| ರಾಜಕುಮಾರ ಹೆಬ್ಟಾಳೆ ಮಾತನಾಡಿ, ವಿವೇಕಾನಂದರು ವಿಶ್ವದ ಅತ್ಯಂತ ಪ್ರಭಾವಿ ಅಧ್ಯಾತ್ಮ ಚಿಂತಕರಾದ್ದರು. ಅವರ ನುಡಿಮುತ್ತುಗಳು ನಮ್ಮನ್ನು ಸದಾಕಾಲಕ್ಕೂ ಬಡಿದೆಬ್ಬಿಸುತ್ತವೆ ಎಂದರು. ರಾಜ್ಯ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ನಾಸ್ವಾಮಿ ಮಾತನಾಡಿ, ವಿವೇಕಾನಂದರು ಭಾರತದ ಸಂಸ್ಕೃತಿ, ಸಿರಿವಂತಿಕೆ, ಜ್ಞಾನ ಮತ್ತು ಹಿಂದು ಧರ್ಮ ವಿಶ್ವಕ್ಕೆ ಪರಿಚಯಿಸಿದವರು ಎಂದರು.
ಇದನ್ನೂ ಓದಿ:ಗುಡಿಬಂಡೆ ವರ್ಲಕೊಂಡ ಬೆಟ್ಟಕ್ಕೆ ಗಣಿಆಪತ್ತು? ಅಧಿಕಾರಿಗಳು ಮೌನ: ಸ್ಥಳೀಯರಿಗೆ ಆತಂಕ
ನವೀನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೋವಿಡ್ ವಾರಿಯರ್ಗಳಾದ ಡಾ| ಚಂದ್ರಕಾಂತ ಚಿಲ್ಲರ್ಗೆ, ಡಾ| ಶಿವನಂದ ಚಿಕ್ಕಮಠ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಶ್ರೀ ಗಂಗಾಧರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಸಂಯೋಜಕ ಸಂಜೀವಕುಮಾರ ಸ್ವಾಮಿ, ಜಿಲ್ಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೋರ್ಮೆ, ಅರವಿಂದ ಕುಲಕರ್ಣಿ, ಸುನೀಲ ಭಾವಿಕಟ್ಟಿ, ಶಂಕ್ರೆಪ್ಪಾ ಜನಕಟ್ಟಿ, ಸುಭಾಷ ಬಿರಾದಾರ, ಶ್ರೀಕಾಂತ ಸ್ವಾಮಿ, ಓಂಕಾರ ಉಪ್ಪೆ, ಪ್ರದೀಪ ಶೆಟಕಾರ, ಬಂಡೆಪ್ಪಾ ಗಿರಿ, ಮಲ್ಲಿಕಾರ್ಜುನ ಬಸಂತಪುರೆ, ಕಾಶಿನಾಥ ಗಿರಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.