ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿ
Team Udayavani, Jan 26, 2018, 3:08 PM IST
ಬೀದರ: ಸಹಕಾರಿಗೆ ಸಂಬಂಧಿ ಸಿದ ವಿಷಯ ಒಳಗೊಂಡ ವಿಶ್ವವಿದ್ಯಾಲಯ ಮತ್ತು ಕಾಲೇಜು ಸ್ಥಾಪಿಸುವ ಅಗತ್ಯವಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.
ನಗರದಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಸಂಪರ್ಕ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಇಂದು ಬಹಳ ಬೆಳವಣಿಗೆ ಕಂಡಿದೆ. ಸಂಯುಕ್ತ ಸಹಕಾರಿಯು ಸಂಪರ್ಕ ಕೇಂದ್ರದ ಸಹಕಾರಿಗಳಿಗೆ ಉತ್ತಮ ಸೇವೆ ನೀಡಬೇಕು. ಸೌಹಾರ್ದ ಸಹಕಾರಿಗಳು ಇನ್ನೂ ಹೆಚ್ಚು ಹೆಚ್ಚಾಗಿ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.
ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಸಹಕಾರ ಮಹಾ ಮಂಡಳ ಅಧ್ಯಕ್ಷ ಗುರುನಾಥ ಜ್ಯಾಂತಿಕರ್ ಅಧ್ಯಕ್ಷತೆ ವಹಿಸಿ
ಮಾತನಾಡಿ, ಸಹಕಾರಿಗಳು ದೊಡ್ಡ ದೊಡ್ಡ ಕೈಗಾರಿಕೆಗಳಿಗೆ ಸಾಲ ನೀಡುವಷ್ಟು ಬೆಳೆದಿವೆ. ಸಹಕಾರಿಗಳ ಸಮಸ್ಯೆ
ನಿವಾರಿಸುವ ಉದ್ದೇಶದಿಂದ ಜಿಲ್ಲಾ ಸಂಪರ್ಕ ಕಚೇರಿ ಆರಂಭಿಸಲಾಗಿದೆ. ಸಹಕಾರಿಗಳು ಕಚೇರಿಯ ಸದುಪಯೋಗ ಪಡೆಯಬೇಕು. ಸೌಹರ್ದ ಅಭಿವೃದ್ಧಿ ಅಧಿಕಾರಿಗಳು ವಾರದಲ್ಲಿ 2 ದಿನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು.
ಗಾಂಧಿ ಗಂಜ್ ಸಹಕಾರ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಪಾಟೀಲ, ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲ್ಕೂಡ, ಸಂಯುಕ್ತ ಸಹಕಾರಿಯ ನಿರ್ದೇಶಕ ವೈ.ಟಿ. ಪಾಟೀಲ, ಸಂಜೀವ ಮಹಾಜನ, ಸಂಜೀವಕುಮಾರ ಪಾಟೀಲ, ಪ್ರದೀಪ ದಾಬಶೆಟ್ಟಿ, ಎಸ್.ಎಸ್. ಪಾಟೀಲ ಮತ್ತಿತರರು ಇದ್ದರು. ಶಿವಕುಮಾರ ಬಿ.ಎಸ್. ನಿರೂಪಿಸಿದರು. ಸಂಜಯ ಕೋರಟಕರ ಪ್ರಾಸ್ಥಾವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.