ಚಿಕನ್‌ ವ್ಯಾಪಾರಕ್ಕೆ ಹೊಡೆತ!

Team Udayavani, Mar 17, 2020, 2:17 PM IST

ಚಿಕನ್‌ ವ್ಯಾಪಾರಕ್ಕೆ ಹೊಡೆತ!

ಔರಾದ: ದೇಶಾದ್ಯಂತ ಕೊರೊನಾ ವೈರಸ್‌ ಭೀತಿ ಹುಟ್ಟಿಸಿದ ಹಿನ್ನೆಲೆಯಲ್ಲಿ ವ್ಯಾಪಾರ ವ್ಯವಹಾರಗಳ ಮೇಲೆ ಅಡ್ಡ ಪರಿಣಾಮ ಬೀರಿದೆ. ಆದರೆ ಔರಾದ ಹಾಗೂ ಕಮಲನಗರ ತಾಲೂಗಳಲ್ಲಿ ಮಾತ್ರ ಯಾವುದೇ ರೀತಿಯ ಸಮಸ್ಯೆಯಿಲ್ಲದೆ ಜನರು ಎಂದಿನಂತೆ ಜೀವನ ಸಾಗಿಸುತ್ತಿದ್ದು, ಕೋಳಿ ಮಾಂಸದ ಮಾರುಕಟ್ಟೆ ಮೇಲೆ ಮಾತ್ರ ಬಿಸಿ ತಟ್ಟಿದೆ.

ಕೊರೊನಾ ವೈರಸ್‌ ಒಂದು ವಾರದಿಂದ ದೇಶ, ರಾಜ್ಯದಲ್ಲಿ ಜನರ ನೆಮ್ಮದಿ ಹಾಳು ಮಾಡಿದ್ದು, ಗಡಿ ತಾಲೂಕಿನಲ್ಲಿ ಮಾತ್ರ ಅಂತಹ ತೀವ್ರ ಸಮಸ್ಯೆಯೇನೂ ಆಗಿಲ್ಲ. ಪಟ್ಟಣದಲ್ಲಿ ವ್ಯಾಪಾರ- ವಹಿವಾಟು ಎಂದಿನಂತೆ ಇದ್ದು, ವ್ಯಾಪಾರಿಗಳು ಅಂಗಡಿ ಬಾಗಿಲು ತೆಗೆದು ನಿರ್ಭಯವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಕೊರೊನಾ ಮುಂಜಾಗ್ರತೆಯ ಬಗ್ಗೆ ತಿಳಿದುಕೊಂಡು ಸ್ವಚ್ಛತೆ ಹಾಗೂ ವೈಯಕ್ತಿಕ ಸಂರಕ್ಷಣೆಗೂ ಮುಂದಾಗಿದ್ದಾರೆ.

ಪಟ್ಟಣದ ಹೋಟೆಲ್‌, ತರಕಾರಿ ಮಾರುಕಟ್ಟೆ, ಮೀನು ಮಾರಾಟ, ಹಾಲು ಮಾರಾಟ, ಬಟ್ಟೆ ಅಂಗಡಿಗಳು ಹಾಗೂ ಇನ್ನಿತ ಮಳಿಗೆಯಲ್ಲಿ ವ್ಯಾಪಾರಿಗಳು ಎಂದು ನಂತೆ ವ್ಯಾಪಾರ ನಡೆಸಿದ್ದಾರೆ. ಆದರೆ ಕೋಳಿ ಮಾಂಸ ಸೇವಿಸುವುದರಿಂದ ಕೊರೊನಾ ಸೋಂಕು ತಗಲುತ್ತದೆ ಎಂದು ಆತಂಕದಿಂದ ಮಾಂಸ ಸೇವನೆ ಬಿಟ್ಟಿರುವುದರಿಂದ ಮಾಂಸದ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.

ಕೋಳಿಗಳಿಗೂ ಕೊರೊನಾ ವೈರಸ್‌ ತಗುಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಕೂಡ ಕೋಳಿ ಮಾಂಸ ಸೇವಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿಯೇ ಶೇ.98ರಷ್ಟು ವ್ಯಾಪಾರ ಕುಸಿದಿದ್ದು, ಕೋಳಿ ಮೊಟ್ಟೆಗಳಿಗೂ ಕೂಡ ಎಂದಿನಂತೆ ಬೇಡಿಕೆ ಇಲ್ಲವಾಗಿದೆ. ಚಿಕನ್‌ ಅಂಗಡಿಗಳು ಗ್ರಾಹಕರಿಲ್ಲದೇ ಬಣಗುಡುತ್ತಿವೆ. ಅಲ್ಲದೇ ಬೆಲೆ ಕೂಡ ಕುಸಿದಿದೆ.

ಈ ಸಂದರ್ಭದಲ್ಲಿ ಮೀನಿನ ಬೇಡಿಕೆ ಹೆಚ್ಚಾಗಿದ್ದು, ಮೀನು ಪ್ರಿಯರಿಗೆ ದರ ಏರಿಕೆಯ ಬಿಸಿ ತಾಗಿದೆ. ಕೊರೊನಾ ಭಯದಿಂದ ಕೋಳಿ ಮಾಂಸ ಪ್ರಿಯರು ಕೂಡ ಮೀನು ಮಾಂಸದತ್ತ ಮುಖ ಮಾಡಿದ್ದಾರೆ.

ಸತತ ಬರಗಾಲದಿಂದ ತಾಲೂಕಿನ ಬಹುತೇಕ ಕೆರೆಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಮೀನು ಸಾಕಾಣೆಗೂ ಅವಕಾಶ ಇಲ್ಲದಂತಾಗಿದೆ. ಅದಾಗ್ಯೂ ತಾಲೂಕಿನ ಕೆಲ ಕರೆಗೆಳಲ್ಲಿ ಅತ್ಯಲ್ಪ ಪ್ರಮಾಣದಲ್ಲಿ ದೊರೆಯುವ ಮೀನುಗಳಿಗೆ ಬೇಡಿಕೆ ಹೆಚ್ಚಾಗಿ ಹೆಚ್ಚು ದರದಲ್ಲಿ ಮೀನು ಮಾರಾಟ ಮಾಡಲಾಗುತ್ತಿದೆ.

ತಾಲೂಕು ಕೇಂದ್ರದಲ್ಲಿ ಒಟ್ಟು 38 ಕೋಳಿ ಮಾಂಸದ ಅಂಗಡಿಗಳಿವೆ. ಈ ಮುನ್ನ ಪ್ರತಿನಿತ್ಯ ಒಂದೊಂದು ಅಂಗಡಿಯಲ್ಲಿ ಐದರಿಂದ ಆರು ಸಾವಿರ ರೂ. ವ್ಯಾಪಾರ ನಡೆಯುತ್ತಿತ್ತು. ಕೊರೊನಾ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಒಂದು ವಾರದಿಂದ ವ್ಯಾಪಾರ ಪೂರ್ಣ ನಿಂತಿದೆ. –ಮೈಬುಬ್‌, ಚಿಕನ್‌ ವ್ಯಪಾರಿ, ಔರಾದ

-ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.