ಕಾಂಗ್ರೆಸ್ ಪರ ಒಲವಿಗೆ ಪರಿಷತ್ ಫಲಿತಾಂಶ ಸಾಕ್ಷಿ
Team Udayavani, Dec 18, 2021, 3:34 PM IST
ಸಿಂಧನೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯದ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು ರಾಜಕೀಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದಕ್ಕೆ ಸಾಕ್ಷಿಯಾಗಿದೆ.
ಇದು ಮುಂದಿನ ವಿಧಾನಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ತಮ್ಮ ನಿವಾಸದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಯಚೂರು ಮತ್ತು ಕೊಪ್ಪಳ ವಿಧಾನ ಪರಿಷತ್ ನೂತನ ಸದಸ್ಯ ಶರಣಗೌಡ ಬಯ್ನಾಪುರಗೆ ಸನ್ಮಾನಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮತ್ತು ಸಂವಿಧಾನ ವಿರೋಧಿ ನೀತಿಗಳಿಂದ ಜನ ಬೇಸತ್ತಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಣೆ ಹಾಕಿರುವುದೆ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಶರಣಗೌಡ ಬಯ್ನಾಪುರ ಮಾತನಾಡಿ, ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ ಮತದಾರ ಪ್ರಭುಗಳಿಗೆ ಕಾಂಗ್ರೆಸ್ ಪಕ್ಷದ ಹಿರಿಯರಿಗೆ, ಮುಖಂಡರಿಗೆ ಅಭಿನಂದನೆಗಳು. ಈ ಗೆಲುವನ್ನು ಮತದಾರರಿಗೆ ಅರ್ಪಿಸಿದ್ದೇನೆ. ತಮ್ಮ ಅವಧಿಯಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳ ಸೇವೆಗೆ ಸದಾ ಸಿದ್ಧನಿರುವೆ ಎಂದು ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರ ಬ್ಲಾಕ್ ಕಾಂಗ್ರೆಸ್ ಖಾಜಿಮಲ್ಲಿಕ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅನಿಲಕುಮಾರ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಸಭೆ ಮಾಜಿ ಅಧ್ಯಕ್ಷ ಜಾಫರಅಲಿ ಜಾಗಿರದಾರ್, ನಗರಸಭೆ ಸದಸ್ಯರಾದ ಶೇಖರಪ್ಪ ಗಿಣಿವಾರ್, ಶಬ್ಬಿರ ಅಹ್ಮದ್, ಮುನೀರಪಾಷ, ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ಮುಖಂಡರಾದ ಎಂ.ಕಾಳಿಂಗಪ್ಪ ವಕೀಲ, ಅಶೋಕ ಭೂಪಾಲ, ದೊಡ್ಡಪ್ಪ ತಿಡಿಗೋಳ, ಶ್ರೇಣಿಕರಾಜ್ ಶೇಟ, ಪ್ರಭುರಾಜ, ನನ್ನುಸಾಬ ಮೇಸ್ತ್ರಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಶಫಿಯುಲ್ಲಾ ಖಾನ್, ಖಾಸಿಂಸಾಬ ದಢೇಸುಗೂರು, ದೊಡ್ಡನಗೌಡ ಕಲ್ಲೂರು, ದಶರಥ ರೆಡ್ಡಿ ಚನ್ನಳ್ಳಿ, ಹನುಮಂತಪ್ಪ ಗೋಮರ್ಸಿ, ನರಸಪ್ಪ ಕಟ್ಟಿಮನಿ, ಛತ್ರಪ್ಪ ಕುರುಕುಂದಿ, ಶಬ್ಬೀರ್ ಹುಸೇನ ನಾಯಕ, ಮಹಿಬೂಬ, ವೆಂಕಟೇಶ, ನಾಗರಾಜ, ಕ್ರಾಂತಿಕುಮಾರ ಬಾದರ್ಲಿ, ಅಯ್ಯಪ್ಪ ಬಾದರ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.