ನ್ಯಾಯಾಲಯ ಸಂಕೀರ್ಣ ನಿವೇಶನ ಒದಗಿಸಲು ತಾಕೀತು


Team Udayavani, Sep 1, 2020, 6:12 PM IST

ನ್ಯಾಯಾಲಯ ಸಂಕೀರ್ಣ ನಿವೇಶನ ಒದಗಿಸಲು ತಾಕೀತು

ಔರಾದ: ಪಟ್ಟಣದ ತಾಲೂಕು ನ್ಯಾಯಾಲಯ ಆವರಣಕ್ಕೆ ಸೋಮವಾರ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಭೇಟಿ ನೀಡಿ, ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.

ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡಲು ವಿಳಂಬ ಮಾಡುತ್ತಿರುವ ತಹಶೀಲ್ದಾರರನ್ನು ಸ್ಥಳಕ್ಕೆ ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರು. ಔರಾದನಲ್ಲಿ ಭವ್ಯ ನ್ಯಾಯಾಲಯಗಳ ಸಂಕೀರ್ಣ ನಿರ್ಮಾಣವಾಗಬೇಕು ಎನ್ನುವ ಉದ್ದೇಶದಿಂದ ಹಿಂದಿನ ಶಾಸಕ ಅವಧಿಯಲ್ಲಿ ಹಲವು ಬಾರಿ ಸರ್ಕಾರಕ್ಕೆ ಪತ್ರಗಳನ್ನು ಬರೆದಿದ್ದೆ. ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಬೇಗ ಮಂಜೂರಾತಿ ನೀಡುವಂತೆ ಒತ್ತಾಯಿಸಿದ್ದೆ. ಅದರ ಫಲವಾಗಿ 2017-18ನೇ ಸಾಲಿನಲ್ಲಿ ಔರಾದ ಕೋರ್ಟ್‌ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ಬೇಗ ನಿವೇಶನ ನೀಡುವಂತೆ ಹಲವು ಸಭೆಗಳಲ್ಲಿ ಮತ್ತು ದೂರವಾಣಿ ಮೂಲಕವು ತಿಳಿಸಲಾಗಿದೆ. ಆದರೂ ಸಹ ನಿವೇಶನ ನೀಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ತಾವು ಶಾಸಕನಾದ ನಂತರ ತಾಲೂಕಿನಲ್ಲಿ ಹಲವು ಅಭಿವೃದ್ಧಿ ಕೆಲಸಗಳಾಗಿವೆ. ಶಾಲೆ-ಕಾಲೇಜುಗಳು, ವಸತಿ ನಿಲಯಗಳು, ಆಸ್ಪತ್ರೆಗಳು ಸೇರಿದಂತೆ ಹಲವಾರು ಕಟ್ಟಡಗಳನ್ನು ನಿರ್ಮಿಸಲಾಗಿದೆ. ತಾಲೂಕಿನಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಿಸಬೇಕೆಂದು ತಾಲೂಕಿನ ವಕೀಲರು ಹಾಗೂ ನ್ಯಾಯಾಲಯಕ್ಕೆ ಸಂಬಂಧಿ ಸಿದವರ ಬಹುದಿನಗಳ ಬೇಡಿಕೆಯಾಗಿದೆ. ಕೂಡಲೇ ನಿವೇಶನ ಹಸ್ತಾಂತರಿಸಿ ಕಟ್ಟಡ ನಿರ್ಮಾಣಕ್ಕೆ ಸಹಕರಿಸಬೇಕೆಂದು ತಹಶೀಲ್ದಾರ್‌ಗೆ ತಾಕೀತು ಮಾಡಿದರು.

ಅಂದಾಜು 13 ಕೋಟಿ ರೂ.ಗಳ ವೆಚ್ಚದಲ್ಲಿ 1 ಎಕರೆ 15 ಗುಂಟೆ ಪ್ರದೇಶದಲ್ಲಿ ಕೋರ್ಟ್‌ ಸಂಕೀರ್ಣ ನಿರ್ಮಿಸಲಾಗುತ್ತಿದೆ. ನಿವೇಶನ ಪತ್ರಗಳು ಹಸ್ತಾಂತರವಾದ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪಪಂ ಸದಸ್ಯ ಸಂತೋಷ ಪೊಕಲ್ವಾರ, ಕೆರಬಾ ಪವಾರ, ರಮೇಶ ದೇವಕತ್ತೆ, ಶಶಿರಾವ ಕೋಳಿ, ಪ್ರಕಾಶ ಅಲ್ಮಾಜೆ, ಶಿವಾಜಿ ಚವ್ಹಾಣ, ಶರಣಪ್ಪ ಪಂಚಾಕ್ಷರಿ, ಸಂಜೀವ ಒಡೆಯರ್‌, ಪ್ರಕಾಶ ಭಂಗಾರೆ, ಬಿ.ಕೆ. ನಾಯಕ್‌ ಇದ್ದರು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.