ವಿದ್ಯಾರ್ಥಿಗಳಿಂದ ಕೋವಿಡ್ ಜಾಗೃತಿ
Team Udayavani, Mar 24, 2021, 8:44 PM IST
ಬೀದರ: ಸನ್‌ರೈಸ್ ಶಿಕ್ಷಣ ಸಮೂಹ ಸಂಸ್ಥೆ ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ ಕೋವಿಡ್ ಜಾಗೃತಿ ಜಾಥಾ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ನಯಾ ಕಮಾನ್‌ವರೆಗೆ ಜಾಥಾ ನಡೆಸಲಾಯಿತು.
ಕೈಯಲ್ಲಿ ಜಾಗೃತಿ ಪೋಸ್ಟರ್ ಹಿಡಿದಿದ್ದ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಸಾವಿರಕ್ಕೂ ಅ ಧಿಕ ಉಚಿತ ಮಾಸ್ಕ್ ಹಾಗೂ ನೀರಿನ ಬಾಟಲಿ ವಿತರಿಸಿದರು. ಸಂಸ್ಥೆ ಕಾರ್ಯದರ್ಶಿ ಮಹಮ್ಮದ್ ಗೌಸ್ ಶೇಕ್ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಶುರುವಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.
ಹೀಗಾಗಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿ ತಪ್ಪದೇ ಪಾಲಿಸಬೇಕು ಎಂದರು. ಜನದಟ್ಟಣೆ ಸ್ಥಳಗಳಿಂದ ದೂರವಿರಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಸ್ಯಾನಿಟೈಸರ್ ಬಳಸಬೇಕು. ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದುಕೊಳ್ಳಬೇಕು. ನೆಗಡಿ, ಕೆಮ್ಮು, ಜ್ವರ ಕಂಡರೆ ಕೂಡಲೇ ವೈದ್ಯರನ್ನು ಕಾಣಬೇಕು ಎಂದರು.
ಕೋವಿಡ್‌ನಿಂದ ಒಂದು ವರ್ಷದ ಅವಧಿ ಯಲ್ಲಿ ಜಗತ್ತು ನಲುಗಿದೆ. ಕಾರಣ, ಸಾರ್ವಜನಿಕರು ಕೋವಿಡ್ ನಿರ್ಲಕ್ಷಿಸಬಾರದು. ಪ್ರತಿಯೊಬ್ಬರೂ ಸುರಕ್ಷತಾ ನಿಯಮ ಪಾಲಿಸಿ, ಸರ್ಕಾರಕ್ಕೆ ಸಹಕಾರ ನೀಡಿದ್ದಲ್ಲಿ ಮಾತ್ರ ಭಾರತವನ್ನು ಕೋವಿಡ್ ಮುಕ್ತಗೊಳಿಸಲು ಸಾಧ್ಯವಿದೆ ಎಂದರು. ಈ ವೇಳೆ ಸಂಸ್ಥೆ ಅಧ್ಯಕ್ಷ ಮಹಮ್ಮದ್ ಉಮರ್ ಶೇಕ್, ಮಹಮ್ಮದ್ ಮುದಸ್ಸಿರ್ ಶೇಕ್, ಪ್ರಾಚಾರ್ಯ ಮಹಮ್ಮದ್ ಗಯಾಸ್, ಉಪನ್ಯಾಸಕರಾದ ಆಕಾಶ, ವಿನೀತ್, ಮಹಮ್ಮದ್ ಖಾಲೀದ್, ಮತಿನ್, ಮಹಮ್ಮದ್ ಅಲಿ ಫೈಜನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.