ಬೀದರನಲ್ಲಿ ಕೋವಿಡ್ ಲ್ಯಾಬ್ ಆರಂಭ
Team Udayavani, Jun 2, 2020, 6:55 AM IST
ಬೀದರ: ಬಹು ಜನರ ನಿರೀಕ್ಷೆಯಂತೆ ಕೋವಿಡ್-19 ಮೊಲಿಕ್ಯೂಲರ್ ವೈರಾಲೋಜಿ ನೂತನ ಪ್ರಯೋಗಾಲಯ ಕಾರ್ಯಾರಂಭಕ್ಕೆ ನಗರದಲ್ಲಿ ಸೋಮವಾರ ಚಾಲನೆ ಸಿಕ್ಕಿತು.
ನಗರದ ಬಿಮ್ಸ್ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಪ್ರಯೋಗಾಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದರನಲ್ಲಿ ಕೋವಿಡ್-19 ವೈರಾಣು ಲ್ಯಾಬ್ ಆರಂಭವಾಗಿರುವುದು ಜನರ ಆರೋಗ್ಯ ಸೇವೆ ಹಿತದೃಷ್ಟಿಯಿಂದ ಉತ್ತಮ ಪ್ರಯತ್ನವಾಗಿದೆ. ಈ ಲ್ಯಾಬ್‌ನಿಂದ ಜಿಲ್ಲೆಯ ಜನತೆಗೆ ಮುಂಬರುವ ದಿನಗಳಲ್ಲಿ ಕೋವಿಡ್-19 ಸೋಂಕಿತ ರೋಗಿಗಳ ತಪಾಸಣೆಗೆ ಹಾಗೂ ಶೀಘ್ರ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.
ಬೀದರನಲ್ಲಿ ಈವರೆಗೆ ಯಾವುದೇ ತರಹದ ವೈರಾಲಜಿ ಪ್ರಯೋಗಾಲಯ ಪರೀಕ್ಷೆಗಳು ಲಭ್ಯವಿದ್ದಿಲ್ಲ. ಪ್ರಸ್ತುತ ಗಂಟಲು ದ್ರವ ಮಾದರಿ ಇತ್ಯಾದಿ ಪರೀಕ್ಷೆಗಾಗಿ ಬೇರೆ ಜಿಲ್ಲೆಗೆ ರವಾನಿಸಿ ಮಾಹಿತಿ ಪಡೆಯಬೇಕಾಗುತ್ತಿತ್ತು. ಇದರಿಂದ ಸಮಯ ಬೇಕಾಗುತ್ತಿತ್ತು. ಜಿಲ್ಲೆಗೆ ಈ ಪ್ರಯೋಗಾಲಯ ಅತ್ಯಗತ್ಯವಿದೆ ಎಂದು ಭಾವಿಸಿ ಸ್ಥಾಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ದಿನಕ್ಕೆ 600 ಮಾದರಿ ಪರೀಕ್ಷೆ: ಬ್ರಿಮ್ಸ್ ಸಂಸ್ಥೆಯ ಮಿನಿ ಜೀವಶಾಸ್ತ್ರ ವಿಭಾಗದ ಅಧಿಧೀನದಲ್ಲಿ ಮೊಲಿಕ್ಯೂಲರ್ ವೈರಾಲಜಿ ಪ್ರಯೋಗಾಲಯ ರಾಜ್ಯ ಪ್ರಕೃತಿ ವಿಕೋಪ ನಿಗ್ರಹಣ ನಿಧಿ ಯಿಂದ ನಿರ್ಮಾಣವಾಗಿದೆ. ಇದು ಐಸಿಎಂಆರ್‌ನಿಂದ ಮಾನ್ಯತೆ ಹೊಂದಿದೆ. ಇಲ್ಲಿ ಒಬ್ಬ ಮುಖ್ಯ ಸಂಶೋಧಕರು, ಇಬ್ಬರು ವಿಜ್ಞಾನಿಗಳು ಹಾಗೂ ಪರಿಣಿತ ಪ್ರಯೋಗಾಲಯ ತಂತ್ರಜ್ಞರು ಕಾರ್ಯ ನಿರ್ವಹಿಸಲಿದ್ದಾರೆ. ಐಸಿಎಂಆರ್ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವರು.
ಪ್ರಯೋಗಾಲಯ ಮೂರು ಪಾಳೆಯದಲ್ಲಿ ಹಾಗೂ ಪೂರ್ಣ ಪ್ರಮಾಣ ಕಾರ್ಯನಿರ್ವಹಿಸಿದಲ್ಲಿ ದಿನಕ್ಕೆ 600 ಮಾದರಿ ಪರೀಕ್ಷೆ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಬ್ರಿಮ್ಸ್ ನಿರ್ದೇಶಕ ಡಾ|ಶಿವಕುಮಾರ ಮಾಹಿತಿ ನೀಡಿದರು.
ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಖಾಶೆಂಪುರಹೀಂ ಖಾನ್, ಬಿ.ನಾರಾಯಣರಾವ್, ಎಂಎಲ್‌ಸಿ ಅರವಿಂದಕುಮಾರ ಅರಳಿ, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ನಾಗೇಶ ಡಿ.ಎಲ್., ಎಸಿ ಅಕ್ಷಯಶ್ರೀಧರ, ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ವೈದ್ಯಾ ಧಿಕಾರಿಗಳಾದ ಡಾ| ರಥಿಕಾಂತ ಸ್ವಾಮಿ, ಡಾ| ವಿಜಯಕುಮಾರ ಅಂತಪ್ಪನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.