ಕೋವಿಡ್ ಪರೀಕ್ಷಾ ಕೇಂದ್ರ ಶೀಘ್ರ ಆರಂಭ
Team Udayavani, May 27, 2020, 6:57 AM IST
ಬೀದರ: ಬೀದರನಲ್ಲೇ ಕೋವಿಡ್ ವೈರಾಣು ಪರೀಕ್ಷಾ ಕೇಂದ್ರ ಪ್ರಾರಂಭಿಸುವ ಎಲ್ಲ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರ ಜನಸೇವೆಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಈ ಹಿಂದೆಯೇ ತಿಳಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಬ್ರಿಮ್ಸ್ ನಿರ್ದೇಶಕರು ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಸಂಬಂಧಿಸಿದ ಕೆಲವು ಉಪಕರಣಗಳು ಬಂದಿವೆ. ಇನ್ನೂ ಕೆಲವು ವಾರದೊಳಗೆ ಬರಲಿವೆ. ಸಂಬಂಧಿಸಿದ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಇದಕ್ಕೆ ಅವಶ್ಯವಿರುವ ಎಲ್ಲದಕ್ಕೂ ವ್ಯವಸ್ಥೆ ಮಾಡಲಾಗುತ್ತಿದ್ದು, ಶೇ.90ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಬೀದರನಲ್ಲಿ ಪರೀಕ್ಷಾ ಕೇಂದ್ರ ಆರಂಭವಾದಲ್ಲಿ ಬೆಂಗಳೂರು ಮತ್ತು ಕಲಬುರಗಿ ಹಾಗೂ ಇನ್ನಿತರ ಕಡೆಗೆ ಸ್ಯಾಂಪಲ್ ಕಳಿಸುವುದು ತಪ್ಪಲಿದೆ. ಮತ್ತು ರೋಗಿಗಳ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ನಡೆಸುವುದು ತೀವ್ರವಾಗಲಿದೆ. ಪರೀಕ್ಷಾ ವರದಿ ಬೇಗನೇ ಕೈಗೆ ಸಿಗುವುದರಿಂದ ಪಾಸಿಟಿವ್ ಬಂದ ರೋಗಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಕೂಡ ಬೇಗನೆ ನಡೆದು ವೈರಾಣು ಇತರರಿಗೆ ಹರಡುವುದನ್ನು ತಡೆಯಬಹುದಾಗಿದೆ ಎಂದಿದ್ದಾರೆ.
ಸಿಎಂ ಯಡಿಯೂರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ತಮ್ಮ ಮನವಿಗೆ ಸ್ಪಂದಿಸಿ ಪರೀಕ್ಷಾ ಕೇಂದ್ರ ತೆರೆಯಲು ಅವಕಾಶ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.