ಕಾಮಗಾರಿ ಪೂರ್ಣಗೊಳಿಸಲು ಗಡುವು

Team Udayavani, Dec 21, 2019, 12:30 PM IST

bidar-tdy-2

ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಬೋಧ್‌ ಯಾದವ ಸಂಬಂಧಿಸಿದ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಗಡುವು ವಿಧಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಯೋಜನೆಯಡಿ 30 ಲಕ್ಷ ವರೆಗಿನ ಕಾಮಗಾರಿಗಳನ್ನು 3 ತಿಂಗಳೊಳಗೆ, 30 ಲಕ್ಷದಿಂದ 1 ಕೋಟಿವರೆಗಿನ ಕಾಮಗಾರಿಗಳನ್ನು 5 ತಿಂಗಳೊಳಗೆ, 1 ಕೋಟಿ ರೂ. ಕಾಮಗಾರಿಗಳನ್ನು 6 ತಿಂಗಳೊಳಗೆ ಪೂರ್ಣಗೊಳಿಸಬೇಕು.

ನಿವೇಶನ ಪರಿಶೀಲನೆ, ಕಾಮಗಾರಿ ಸ್ಥಳ ಮತ್ತು ಕಾಮಗಾರಿ ಬದಲಾವಣೆಯಂತಹ ಪ್ರಕ್ರಿಯೆ ಕೂಡ ತಿಂಗಳೊಳಗೆ ಮುಗಿಸಬೇಕು ಎಂದು ನಿರ್ದೇಶನ ನೀಡಿದರು. 2019ರ ಅ.11ರ ವರೆಗೆ 109 ಕಾಮಗಾರಿಗಳು ಮತ್ತು ಡಿ.20ರ ವರೆಗೆ 64 ಕಾಮಗಾರಿಗಳು ಆರಂಭವಾಗದೇ ಇರುವ ಬಗ್ಗೆ ಕಾರ್ಯದರ್ಶಿಗಳು ಸಂಬಂಧಿಸಿದ ಇಲಾಖೆಗಳಿಂದ ವಿವರಣೆ ಕೇಳಿದರು. ಲೋಕೋಪಯೋಗಿ ಇಲಾಖೆಯಿಂದ ಬಾಕಿ ಇರುವ 31 ಕಾಮಗಾರಿಗಳ ಪೈಕಿ 22 ಕಾಮಗಾರಿಗಳಿಗೆ ಈ ವರ್ಷ ಮಂಜೂರಾತಿ ಸಿಕ್ಕಿದೆ. ಇನ್ನುಳಿದ 9 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಅಭಿಯಂತರರು ಗಮನಕ್ಕೆ ತಂದರು. 13 ಕಾಮಗಾರಿ ಆರಂಭಿಸದೇ ಇರುವ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳಿಗೆ ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತು ಕೊಡುವಂತೆ ಸೂಚಿಸಲಾಯಿತು.

ಪ್ರಗತಿ ತೃಪ್ತಿಕರವಾಗಿಲ್ಲ: 2018-19ನೇ ಸಾಲಿನ ಕ್ರಿಯಾ ಯೋಜನೆಗಳಲ್ಲಿನ ಕಾಮಗಾರಿಗಳಿಗೆ ಅನುಮತಿ ನೀಡಿ ವರ್ಷವಾದರೂ ಅವುಗಳ ಪ್ರಗತಿ ತೃಪ್ತಿಕರವಾಗಿಲ್ಲ. ಕಾಮಗಾರಿ ಬದಲಾವಣೆ, ಅನುಷ್ಠಾನ, ಇಲಾಖೆ ಬದಲಾವಣೆ, ಕಾಮಗಾರಿ ರದ್ದು ಪಡಿಸುವುದು, ಕಾಮಗಾರಿಗೆ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆ ಸರಿಯಾದ ಸಮಯಕ್ಕೆ ಕಳುಹಿಸಬೇಕು. ಕಡತಗಳನ್ನು ವರ್ಷಗಟ್ಟಲೇ ಇಟ್ಟುಕೊಂಡು ಕೂಡುವುದು ಸರಿಯಲ್ಲ. ಡಿಸೆಂಬರ್‌ ಮುಗಿಯಲು ಬಂದಿದ್ದು, ಕಾಮಗಾರಿ ಆರಂಭಕ್ಕೆ ಸಂಬಂಧಿಸಿದ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಬೇಕು. ಭೌತಿಕ-ಆರ್ಥಿಕ ಪ್ರಗತಿ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಹಿಂದೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಕಾಮಗಾರಿ ಆರಂಭಿಸಲು ಮತ್ತು ಪೂರ್ಣಗೊಳಿಸುವಂತೆ ಕಾಲಮಿತಿ ನಿರ್ಧರಿಸಿ ತಿಳಿಸಿದ್ದರೂ ಕೆಲ ಇಲಾಖೆಗಳು ಅನಗತ್ಯ ವಿಳಂಬ ಮಾಡುತ್ತಿವೆ. ಅಧಿಕಾರಿಗಳು ಇಲ್ಲದ ನೆಪ ಹೇಳಿ ಕಾಲಹರಣ ಮಾಡಿದರೆ ಕಾಮಗಾರಿ ಅನುಷ್ಠಾನ ಮತ್ತು ಕಾಮಗಾರಿ ಅನುದಾನ ಬಳಕೆಯಾಗುವುದಿಲ್ಲ. ಇನ್ಮುಂದೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಧಿಕಾರಿಗಳು ಮುಂದೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಕಾರ್ಯದರ್ಶಿಗಳು ಇದೇ ವೇಳೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ| ಎಚ್‌. ಆರ್‌. ಮಹಾದೇವ, ಜಿ.ಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇತರರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.