5ರಂದು ಶಿಕ್ಷಕರ ದಿನ ಅದ್ಧೂರಿ ಆಚರಣೆಗೆ ನಿರ್ಧಾರ
Team Udayavani, Aug 28, 2022, 3:58 PM IST
ಭಾಲ್ಕಿ: ಕಳೆದ ಕೆಲ ವರ್ಷಗಳಲ್ಲಿ ಕೋವಿಡ್ ಕಾರಣ ಶಿಕ್ಷಕ ದಿನಾಚರಣೆ ತಕ್ಕಮಟ್ಟಿಗೆ ಆಚರಿಸಲು ಆಗಲಿಲ್ಲ. ಪ್ರಸ್ತುತ ಸಾಲಿನಲ್ಲಿ ಶಿಕ್ಷಕರ ದಿನವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ. 5ರಂದು ಪಟ್ಟಣದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನ ಅರ್ಥಪೂರ್ಣವಾಗಿ ಆಚರಿಸೋಣ. ಉತ್ತಮ ಶಿಕ್ಷಕರ ಪ್ರಶಸ್ತಿ ಆಯ್ಕೆಗೆ ಅರ್ಹರನ್ನು ಗುರುತಿಸಬೇಕು. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಕಳೆದ ಎರಟ್ಮೂರು ವರ್ಷ ಶಿಕ್ಷಕರ ದಿನಾಚರಣೆ ಸರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಎಲ್ಲರೂ ಸೇರಿ ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದರು.
ಅಂದು ತಾಲೂಕಿನಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ನಿವೃತ್ತಿ ಹೊಂದಿದ ಶಿಕ್ಷಕರು, ಅಕಾಲಿಕವಾಗಿ ನಿಧನ ಹೊಂದಿದ ಶಿಕ್ಷಕರ ಕುಟುಂಬದ ಸದಸ್ಯರು ಮತ್ತು ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಉತ್ತಮ ಶಿಕ್ಷಕರ ಪ್ರಶಸ್ತಿಗೆ ಯಾರು ಲಾಬಿ ಮಾಡಬಾರದು. ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಶಿಕ್ಷಕರನ್ನು ಮಾತ್ರ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಬೇಕು ಎಂದರು.
ಅಂದು ಬೆಳಗ್ಗೆ 9ಕ್ಕೆ ಮೆರವಣಿಗೆ, 11ಕ್ಕೆ ಪಟ್ಟಣದ ಹುಮನಾಬಾದ್ ರಸ್ತೆಯ ಪ್ರಯಾಗ ಫಂಕ್ಷನ್ ಹಾಲ್‌ನಲ್ಲಿ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡೋಣ. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿಕೊಂಡು ಎಲ್ಲ ಸರಕಾರಿ, ಖಾಸಗಿ ಶಾಲೆಗಳ ಶಿಕ್ಷಕರನ್ನು ಆಹ್ವಾನ ನೀಡಬೇಕು. ಕಾರ್ಯಕ್ರಮದಲ್ಲಿ ಶಿಕ್ಷಕರಲ್ಲದೇ ಎಲ್ಲ ಇಲಾಖೆಗಳ ಅಧಿಕಾರಿಗಳಿಗೂ ಭಾಗವಹಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಬಿಇಒ ಬಸವಂತರಾಯ ಜಿಡ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ್, ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರೌಢಶಾಲಾ ಶಿಕ್ಷಕರ ಸಂಘದ ಆಧ್ಯಕ್ಷ ದತ್ತು ಕಾಟಕರ, ನಿರಂಜಪ್ಪ ಪಾತ್ರೆ, ವಸಂತರಾವ್ ಹುಣಸನಾಳೆ, ಸುಭಾಷ ಹುಲಸೂರೆ, ಮಲ್ಲಿಕಾರ್ಜುನ ಹಲಮಂಡಗೆ, ತಿಪ್ಪಣ್ಣ ಶಿವಪೂರೆ ಸೇರಿದಂತೆ ಹಲವರು ಸಲಹೆ ಸೂಚನೆ ನೀಡಿದರು. ತಾಪಂ ಇಒ ದೀಪಿಕಾ ನಾಯ್ಕರ್, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್, ಸೋಮಶೇಖರ, ಮಾಯಾವತಿ ಗೋಖಲೆ ಇದ್ದರು. ಇದೇ ವೇಳೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕೀರ್ತಿಲತಾ ಸೊನಾಳೆಯವರ ನೇತೃತ್ವದಲ್ಲಿ ಶಾಸಕ ಈಶ್ವರ ಖಂಡ್ರೆಯವರಿಗೆ ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.