ಬೀದರ ಅತಿವೃಷ್ಟಿ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ
ತೋಟಗಾರಿಕೆ ಇಲಾಖೆಯ ತರಕಾರಿ ಸೇರಿ ವಿವಿಧ ಬೆಳೆಗಳು ಫಸಲು ನೀಡುವ ಹಂತದಲ್ಲಿ ನೆಲಕಚ್ಚಿವೆ.
Team Udayavani, Sep 16, 2021, 6:30 PM IST
ಭಾಲ್ಕಿ: ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಮುಂಗಾರಿನಲ್ಲಿ ಬೆಳೆದ ಎಲ್ಲ ಬೆಳೆಗಳು ಜಲಾವೃತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ತ್ವರಿತವಾಗಿ ಪರಿಹಾರ ವಿತರಣೆ ಕಾರ್ಯಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಸ್ವಾಭಿಮಾನಿ ಬಣ) ಜಿಲ್ಲಾ ಯುವ ಘಟಕ ಒತ್ತಾಯ ಮಾಡಿದೆ.
ಈ ಕುರಿತು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಗಮೇಶ ಗುಮ್ಮೆ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಕಳೆದ 15 ದಿನಗಳ ಅಂತರದಲ್ಲಿ ಎರಡು ಬಾರಿ ಭಾರೀ ಮಳೆಯಾಗಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಹೆಸರು, ಉದ್ದು, ಸೋಯಾ ಅವರೆ, ತೊಗರಿ, ಕಬ್ಬು ಹಾಗೂ ತೋಟಗಾರಿಕೆ ಇಲಾಖೆಯ ತರಕಾರಿ ಸೇರಿ ವಿವಿಧ ಬೆಳೆಗಳು ಫಸಲು ನೀಡುವ ಹಂತದಲ್ಲಿ ನೆಲಕಚ್ಚಿವೆ.
ಇದರಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ದಿಕ್ಕು ತೋಚದಂತಾಗಿದೆ. ಜೊತೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನೀರಿನ ರಭಸಕ್ಕೆ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿವೆ. ಕೂಡಲೇ ರಾಜ್ಯ ಸರಕಾರ ಪರಿಶೀಲಿಸಿ ಬೀದರ ಅತಿವೃಷ್ಟಿ ಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ಹಾಳಾದ ರಸ್ತೆ, ಸೇತುವೆ ದುರುಸ್ತಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯ ಮಾಡಲಾಗಿದೆ.
ಕರವೇ ತಾಲೂಕು ಅಧ್ಯಕ್ಷ ಸಂಜುಕುಮಾರ ನಾವದಗಿ, ಪ್ರಮುಖರಾದ ಅಭಿಷೇಕ ದಾಡಗಿ, ಸುನೀಲ ಸ್ವಾಮಿ, ರಾಜಕುಮಾರ ಡಾವರಗಾಂವೆ, ಶಿವಕುಮಾರ ಕಮಠಾಣೆ, ಕುಪೇಂದ್ರ ವಂಕೆ, ಯೋಹಾನ ಹಿರ್ಗೆ, ಸಿದ್ದು ಜಮಾದಾರ್, ಆದೀಲ್ ಸೈಯದ್, ಸುರೇಶ ಕಾಂಬಳೆ, ಲೋಕೇಶ ಮೊಳಕೇರೆ, ಧೂಳಪ್ಪ ಮಾಳಗೊಂಡ, ಸಂತೋಷ ಹಡಪದ, ದಿಲೀಪಕುಮಾರ್, ಸಿಕ್ರೇಶ ನಿಂಬುರೆ, ಸತೀಶ ಮಾಳೆಗಾಂವ ಮತ್ತು ಸುಧಾಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.