ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಘೋಷಿಸಿ; ಬೀದರ್ ನಲ್ಲಿ ಬೃಹತ್ ಹೋರಾಟ
Team Udayavani, Jul 20, 2017, 3:38 PM IST
ಬೀದರ್: ವೀರಶೈವರೇ ಬೇರೆ, ಲಿಂಗಾಯತರೇ ಬೇರೆ, ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನ ಕೊಡಬೇಕು ಎಂದು ಆಗ್ರಹಿಸಿ ಬೀದರ್ ನಲ್ಲಿ ಲಕ್ಷಾಂತರ ಲಿಂಗಾಯತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನೆರೆಯ ತೆಲಂಗಾಣ, ಮಹಾರಾಷ್ಟ್ರ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಲಿಂಗಾಯತರು ಬೃಹತ್ ರಾಲಿ ನಡೆಸಿದರು. ಲಿಂಗಾಯತ ಸ್ವತಂತ್ರ ಧರ್ಮ ಎಂದು ಬರೆಯಲಾಗಿದ್ದ ಟೋಪಿಯನ್ನು ಹಾಕಿಕೊಂಡಿದ್ದ ಯುವಕರು ಸೇರಿದಂತೆ ಲಿಂಗಾಯತ ಸಮಾಜದ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.
ಹಿಂದೂ ಧರ್ಮಕ್ಕೂ ನಮಗೂ ಸಂಬಂಧ ಇಲ್ಲ. ನಮ್ಮದು ಲಿಂಗಾಯತ ಧರ್ಮ, ಬಸವ ಸಿದ್ಧಾಂತ ನಂಬಿದ್ದೇವೆ. ಆ ನಿಟ್ಟಿನಲ್ಲಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಬೇಕು. ಇದರಿಂದಾಗಿ ಸರ್ಕಾರದ ಅನೇಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಬಸ ಮಠ ಪೀಠಾಧ್ಯಕ್ಷೆ ಮಾತೆಮಹಾದೇವಿ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡುತ್ತ ತಿಳಿಸಿದರು.
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ; ಚಿದಾನಂದ ಮೂರ್ತಿ
ವೀರಶೈವ, ಲಿಂಗಾಯತ ಪ್ರತ್ಯೇಕ ಪಂಥ ಅಲ್ಲ. ಮಾತೆಮಹಾದೇವಿಗೆ ಪ್ರಚಾರದ ಹುಚ್ಚು ಎಂದು ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mulki: ರಾಷ್ಟ್ರೀಯ ಹೆದ್ದಾರಿ; ಶೀಘ್ರ ಸರ್ವಿಸ್ ರಸ್ತೆ ಕಾಮಗಾರಿ
Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್ ಬಾಸ್ ಮನೆಯ ಪ್ರಬಲ ಸ್ಪರ್ಧಿ
Editorial: ಸಂಚಾರ, ಪಾರ್ಕಿಂಗ್; ಸಮನ್ವಯದ ಕ್ರಮ ಆಗಬೇಕು
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.