ರೈತರ ಸಾಲ ಮನ್ನಾಕ್ಕೆ ಆಗ್ರಹ
Team Udayavani, Jun 19, 2018, 11:54 AM IST
ಶಿವಮೊಗ್ಗ: ರೈತರಿಗೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘ ಸರ್ಕಾರಗಳನ್ನು ನಿರಂತರವಾಗಿ
ಒತ್ತಾಯಿಸುತ್ತಾ ಬಂದಿದೆ. ಜತೆಗೆ ಹಲವು ಬಾರಿ ಹೋರಾಟವನ್ನು ನಡೆಸಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ರೈತರ ಸಾಲ ಮನ್ನಾ ಕೇವಲ ರಾಜಕೀಯ ಘೋಷಣೆ ಆಗಿರದೇ ವೈ‚ಜ್ಞಾನಿಕ ಕಾರಣ ಮತ್ತು ತಜ್ಞರ ವರದಿ ಕೂಡ ರೈತರ ಸಾಲ ಮನ್ನಾ ಮಾಡುವಂತೆ ಈಗಾಗಲೇ ಸ್ಪಷ್ಟೀಕರಣ ನೀಡಿದೆ ಎಂದರು.
ರೈತರು ಆಹಾರೋತ್ಪಾದನೆಗಾಗಿ ಹೂಡಿದ ಬಂಡವಾಳ ಮರಳಿ ಕೈಸೇರುತ್ತಿಲ್ಲ. ಕೃಷಿ ಮತ್ತು ಕೃಷಿ ಮಾರುಕಟ್ಟೆಗಳ ರೈತ ವಿರೋಧಿ ನೀತಿಗಳಿಂದಾಗಿಯೇ ರೈತರು ಇಂದು ಸಾಲಗಾರರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ.
ದೇಶದ 125 ಕೋಟಿ ಜನರ ಹಸಿವು ನೀಗಿಸಲು ಆಹಾರೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ಸರ್ಕಾರಗಳು ಬ್ಯಾಂಕ್ ಮೂಲಕ ನೀಡಿರುವ ಹಣ ಬಂಡವಾಳವೇ ಹೊರತು ಅದು ಸಾಲವಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪೂರ್ವ ಮತ್ತು ನಂತರದಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿಕೆ ನೀಡಿರುವುದನ್ನು ರೈತ ಸಂಘ ಸ್ವಾಗತಿಸುತ್ತದೆ. ಆದರೆ ಕಳೆದ 20 ದಿನಗಳ ಹಿಂದೆ ಸಭೆ ಕರೆದು ಸಾಲ ಮನ್ನಾ ಮಾಡುವುದಕ್ಕೆ 15 ದಿನಗಳ ಗಡುವು ಕೇಳಿದ್ದರು. ಇದೀಗ ಗಡುವು ಮುಕ್ತಾಯವಾಗಿದ್ದರೂ ನೀಡಿದ್ದ ಭರವಸೆಯಂತೆ ಸಾಲ ಮನ್ನಾ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸಾಲ ಮನ್ನಾ ವಿಷಯದಲ್ಲಿ ಸರ್ಕಾರ ಮತ್ತು ಮುಖ್ಯಮಂತ್ರಿ ಮಾತಿಗೆ ತಪ್ಪಿದಲ್ಲಿ ರಾಜ್ಯದ ರೈತರ ಹಿತ ಕಾಪಾಡಲು ರೈತ ಸಂಘ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಪ್ರಮುಖರಾದ ವೀರೇಶ್, ಜಯಪ್ಪಗೌಡ, ಹಿರಣ್ಣಯ್ಯ, ಸೇನಾಪತಿ ಗೌಡ, ಯಶವಂತರಾವ್ ಘೋರ್ಪಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.