ಪದವಿ-ಸ್ನಾತಕೋತ್ತರ ಪರೀಕ್ಷೆ ರದ್ದತಿಗೆ ಆಗ್ರಹ
ಪಾಲಕರು, ವೈದ್ಯರು, ಶಿಕ್ಷಣ ಪ್ರೇಮಿಗಳು ಸೇರಿ ಒಂದು ಲಕ್ಷಕ್ಕೂ ಹೆಚ್ಚು ಜನ ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.
Team Udayavani, Jul 15, 2021, 8:02 PM IST
ಬೀದರ: ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸಮಿತಿ ಜಿಲ್ಲಾ ಸಂಚಾಲಕ ಹಣಮಂತ ಎಸ್. ಎಚ್. ಮತ್ತು ಪ್ರಮುಖ ತುಳಸಿರಾಮ ಎನ್. ಕೆ. ನೇತೃತ್ವದಲ್ಲಿ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ನಾಮಫಲಕ ಹಿಡಿದು ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆ ನಡೆಸಬಾರದು ಹಾಗೂ ಎರಡು ಡೋಸ್ ಕೋವಿಡ್ ಲಸಿಕೆ ನಂತರವೇ ಆಪ್ ಲೈನ್ ತರಗತಿ ಮತ್ತು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಲಾಯಿತು.
ಈ ವೇಳೆ ಹಣಮಂತ ಎಸ್.ಎಚ್. ಮಾತನಾಡಿ, ಪರೀಕ್ಷೆ ರದ್ದುಗೊಳಿಸುವಂತೆ ಹಲವು ಹಂತದ ಹೋರಾಟ ನಡೆಸಲಾಗಿದ್ದು, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲ ಪಾಲಕರು, ವೈದ್ಯರು, ಶಿಕ್ಷಣ ಪ್ರೇಮಿಗಳು ಸೇರಿ ಒಂದು ಲಕ್ಷಕ್ಕೂ ಹೆಚ್ಚು ಜನ ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.
ವಿದ್ಯಾರ್ಥಿಗಳ ಆತಂಕವನ್ನು ಅರಿಯದ ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ನಮ್ಮ ಬೇಡಿಕೆಗಳ ಪರ ಯಾವುದೇ ನಿರ್ಧಾರ ಕೈಗೊಳ್ಳದೇ ಮೌನ ವಹಿಸಿದ್ದು, ಪರೀಕ್ಷೆಗೆ ತಯಾರಿಯಲ್ಲಿ ಮುಳುಗಿವೆ. ವಿದ್ಯಾರ್ಥಿಗಳ ಜೀವ ಲೆಕ್ಕಿಸದೇ ಪರೀಕ್ಷೆಗಳನ್ನು ನಡೆಸುವುದೇ ಪ್ರಮುಖ ಗುರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರಾದ ಲಕ್ಷ್ಮಣ ಮಚಕೂರೆ, ಅಕ್ಷತಾ, ಶೃತಿ, ಕಾವೇರಿ, ಮಾರುತಿ, ಶಿವಕುಮಾರ, ಪ್ರದೀಪ, ಸಚಿನ್, ಸುನೀತಾ, ಪ್ರೀಯಾ, ಸಿದ್ದು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Robbery: ಬೀದರ್ ದರೋಡೆ ಬಿಹಾರಿ ಗ್ಯಾಂಗ್ ಕೃತ್ಯ: ಪೊಲೀಸರು
Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್.ಡಿ.ಕುಮಾರಸ್ವಾಮಿ
Bidar ದರೋಡೆ ಕೇಸ್: ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.