ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ


Team Udayavani, Dec 22, 2018, 2:13 PM IST

bid-3.jpg

ಬೀದರ: ಮಕ್ಕಳ ಮನಸ್ಸು ನಿರ್ಮಲವಾದದ್ದು, ಅವರನ್ನು ಓದುವುದಕ್ಕೆ ಮಾತ್ರ ಸೀಮಿತಗೊಳಿಸದೇ ಎಲ್ಲ ರೀತಿಯ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವುದು ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.

ಜಿಲ್ಲಾ ಬಾಲ ಭವನದಲ್ಲಿ ರಾಜ್ಯ ಬಾಲ ಭವನ ಸೂಸೈಟಿ ಬೆಂಗಳೂರು, ಭಾರತ ವಿಜ್ಞಾನ ಸಮಿತಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಮೂಢನಂಬಿಕೆ ಹೊಗಲಾಡಿಸಿ, ವೈಜ್ಞಾನಿಕ ಮನೋಭಾವ ಮೂಡಿಸುವ ಕಾರ್ಯ ನಡೆಯಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಇತರೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಬೇಕು ಎಂದು ಸಲಹೆ ನೀಡಿದರು.

ನಗರ ಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ ಮಾತನಾಡಿ, ಮಕ್ಕಳು ಟಿವಿ, ಸಿನಿಮಾ, ಹಾವಳಿಯಿಂದ ದೂರವಿದ್ದು, ಸಾಹಿತ್ಯ, ಸಂಸ್ಕೃತಿ ಹಾಗೂ ರಂಗಭೂಮಿಯತ್ತ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು. ಈ ಕುರಿತು ಮಕ್ಕಳಿಗೆ ಪ್ರೇರೇಪಿಸಬೇಕು. ಮಕ್ಕಳಿಗೆ ಸರ್ವತೋಮುಖ ಬೇಳವಣಿಗೆ ಸಹಕರಿಸಬೇಕು ಎಂದರು. ಪ್ಲಾಸ್ಟಿಕ್‌ ಮುಕ್ತ ಬೀದರ ನಗರ ಮಾಡುವ ಉದ್ದೇಶವಿದ್ದು, ಈ ಕುರಿತು ಮಕ್ಕಳಲ್ಲಿ ಕೂಡ ಶಿಕ್ಷಕರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಮಾತನಾಡಿದರು. ಚಂದ್ರಪ್ಪಾ ಹೆಬ್ಟಾಳ್ಕರ್‌, ದೇವಿಪ್ರಸಾದ ಕಲಾಲ, ಶಾಮರಾವ್‌ ನೆಲ್ವಾಡೆ, ಸಂಜುಕುಮಾರ ಸ್ವಾಮಿ, ಬಾಬುರಾವ್‌ ಸಲ್ಸಾರೆ, ಶಂಭುಲಿಂಗ ವಾಲೊಡಿ, ಸಂಜೀವ ಕುಮಾರ ಅತಿವಾಳೆ, ಎಂ.ಎಸ್‌. ಮನೋಹರ, ಮಹೇಶ ಗೊರನಾಳಕರ್‌ ಇದ್ದರು.

ಟಾಪ್ ನ್ಯೂಸ್

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.