ಅಭಿವೃದ್ದಿ ಮಾಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಲಕ್ಷ್ಮಣ
Team Udayavani, Dec 22, 2021, 3:46 PM IST
ಬೀದರ: ಹೈ-ಕ ಭಾಗವನ್ನು ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿ ಅಭಿವೃದ್ಧಿ ವಿಷಯದಲ್ಲಿ ನಿರಂತರ ಮಲತಾಯಿ ಧೋರಣೆ ಮಾಡುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಕ.ಕ ಅಭಿವೃದ್ಧಿ ಮಾಡಲು ಆಗದಿದ್ದರೆ, ನಮಗೆ ಪ್ರತ್ಯೇಕ ರಾಜ್ಯ ಕೊಡಲಿ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹಿಸಿದರು.
ನಗರದ ಎಂ.ಎಸ್. ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಡೆದ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸದಸ್ಯರು, ಚಿಂತಕರ ಸಭೆಯಲ್ಲಿ ಮಾತನಾಡಿದ ಅವರು, ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ವಿಶೇಷ ಆದ್ಯತೆ ನೀಡುವ ಬಗ್ಗೆ ನಿರಂತರ ಭರವಸೆಗಳು ಮಾತ್ರ ನೀಡುತ್ತಿವೆ. ಆದರೆ, ಅನುಷ್ಠಾನ ಆಗುತ್ತಿಲ್ಲ. 371 (ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಮಂತ್ರಾಲಯ, ಕ.ಕ ಜಿಲ್ಲೆಗಳಲ್ಲಿ ಉದ್ದಿಮೆಗಳ ಸ್ಥಾಪನೆ ಘೋಷಣೆಯಾಗಿಯೇ ಉಳಿದಿವೆ ಎಂದು ಕಿಡಿಕಾರಿದರು.
ಒಂದು ಕಡೆ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಮತ್ತೂಂದೆಡೆ ಕೇಂದ್ರ ಸರ್ಕಾರ ಸಹ ನಮಗೆ ಮಂಜೂರಾದ ಹೆದ್ದಾರಿ ರಸ್ತೆಗಳು, ಕಲಬುರಗಿ ವಿಭಾಗೀಯ ರೈಲ್ವೆ ಕಚೇರಿ ಅಸ್ತಿತ್ವದ ಬಗ್ಗೆ ಘೋಷಣೆಯಾಗಿಯೇ ಉಳಿದು, ನಿರ್ಲಕ್ಷ ಧೋರಣೆ ತೋರಿದೆ. ಇಂತಹ ಸಂದರ್ಭದಲ್ಲಿ ನಮ್ಮ ಅಭಿವೃದ್ಧಿಗೆ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಬೇಡಿಕೆ ಅನಿವಾರ್ಯವಾಗಿದೆ ಎಂದರು.
ಸಮಿತಿ ಜಿಲ್ಲಾ ಅಧ್ಯಕ್ಷ ಅನಂತರೆಡ್ಡಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಪ್ರಗತಿ ಮಾಡಿ ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ ಎಂಬ ಬೇಡಿಕೆಯೊಂದಿಗೆ ಬೀದರನಲ್ಲಿ ಜನೆವರಿ ಎರಡನೇ ವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಪ್ರಮುಖರಾದ ಡಾ| ಆನಂದರಾವ, ವೀರಭದ್ರಪ್ಪ ಉಪ್ಪಿನ್, ಸಂತೋಷ ಶೆಟ್ಟಿ, ಶಿವಕುಮಾರ ಬೆಲ್ದಾಳ, ಚಂದ್ರಶೇಖರ ಪಾಟೀಲ, ಮಹಮ್ಮದ ಅಸಿಫೋದ್ದೀನ್, ಮಹಮ್ಮದ ನಿಜಾಮೊದ್ದೀನ್, ಉದಯಕುಮಾರ ಅಷ್ಟೊರೆ, ಧನರಾಜ ರೆಡ್ಡಿ, ವಿಜಯಕುಮಾರ, ಕೃಷ್ಣಾರೆಡ್ಡಿ, ಬಕ್ಕಪ್ಪ, ಅನಿಲ ಹಮೀಲಪುರಕರ, ರಘುನಾಥರಾವ್, ರೋಹನಕುಮಾರ, ಘಾಳೆಪ್ಪ ಚಾಮಾ, ಸುಧಾಕರರಾವ ಪಾಟೀಲ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.