ಬೀದರ ಅಭಿವೃದ್ಧಿಗೆ ಡಿಸಿ ಜತೆ ಚರ್ಚೆ
Team Udayavani, Jun 28, 2020, 8:50 AM IST
ಬೀದರ: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಳೆದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾಮಗಾರಿ ಕೈಗೊಳ್ಳಲು ಮತ್ತು ಜಿಲ್ಲೆಯನ್ನು ಪ್ರಗತಿ ಪಥದತ್ತ ಕೊಂಡೊಯ್ಯುವ ಕುರಿತು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಜತೆ ಚರ್ಚಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು ತುರ್ತಾಗಿ ಕೈಗೊಳ್ಳಬೇಕಾದ ಕಾಮಗಾರಿ ಕೈಗೆತ್ತಿ ಕೊಳ್ಳಲು ಸೂಚನೆ ನೀಡಲಾಗಿದೆ. ಎಲ್ಲ ತಾಲೂಕಿನಲ್ಲಿ ಟ್ರೀ ಪಾರ್ಕ್, ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲು ರೈತರೊಂದಿಗೆ ಚರ್ಚಿಸಲಾಗುವುದು. ಎಲ್ಲ ತಾಲೂಕುಗಳಲ್ಲಿ ರಸ್ತೆ, ಕುಡಿವ ನೀರು, ಚರಂಡಿ, ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರುವಂತೆ ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ತ್ವರಿತವಾಗಿ ಮುಗಿಸಲು, ಬ್ರಿಮ್ಸ್ ಕಾಲೇಜು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬೀದರನಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ನೀರು ಸರಬರಾಜು ಕಾಮಗಾರಿ ತ್ವರಿತ ಮುಗಿಸಲು, ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲು ತಿಳಿಸಲಾಗಿದೆ.
ನಗರದಲ್ಲಿ ಮಿನಿ ವಿಧಾನಸೌಧ, ಡಿಸಿ ಕಚೇರಿ, ಜಿಪಂ ಕಚೇರಿ ಕಾಮಗಾರಿ ಕೈಗೆತ್ತಿಕೊಳ್ಳಲು, ನಗರದಲ್ಲಿ ಕನ್ನಡ ಭವನ, ಪತ್ರಿಕಾ ಭವನ ಕಾಮಗಾರಿ ಆರಂಭಿಸುವುದು, ಪಾಪನಾಶ ಕೆರೆ ಜೀರ್ಣೋದ್ಧಾರ, ನಾಂದೇಡ-ಬೀದರ ರೈಲು ಮಾರ್ಗ ಶೀಘ್ರ ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳುವುದು, ಬಸವಕಲ್ಯಾಣದಲ್ಲಿ ಅನುಭವ ಮಂಟಪ ಕಾಮಗಾರಿಗೆ ಚಾಲನೆ ನೀಡುವುದು ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಿದ್ದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.