ಕೋವಿಶಿಲ್ಡ್ ಲಸಿಕೆ ಪಡೆದ ಡಿಎಚ್‌ಒ
ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಕಂಡುಬಂದಿಲ್ಲ.
Team Udayavani, Feb 18, 2021, 5:33 PM IST
ಬೀದರ: ಬೀದರ ಮತ್ತು ಬಸವಕಲ್ಯಾಣ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ್ ಮತ್ತು ಭುವನೇಶ ಪಟೇಲ್ ಅವರು ನಗರದ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡರು. ಕೋವಿಶೀಲ್ಡ್ ಲಸಿಕೆಯು ಸುರಕ್ಷಿತವಾಗಿದೆ. ಇದು ಆಸ್ಪತ್ರೆಯಲ್ಲಿ ಉಚಿತವಾಗಿದೆ. ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಈಗಾಗಲೇ ಗುರುತಿಸಿದ ಇಲಾಖೆಗಳ ನೌಕರರು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ಗರಿಮಾ ಪನ್ವಾರ್ ಹೇಳಿದರು.
ನಾನು ಕೋವಿಶೀಲ್ಡ್ ಲಸಿಕೆ ಪಡೆದುಕೊಂಡಿದ್ದೇನೆ. ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಕಂಡುಬಂದಿಲ್ಲ. ಕೋವಿಶೀಲ್ಡ್ ಲಸಿಕೆಯ ಮಹತ್ವ
ಅರಿತು ಮುಂಚೂಣಿಯಲ್ಲಿರುವ ಎಲ್ಲ ಇಲಾಖೆಗಳ ಅ ಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬೇಕು ಎಂದು ಭುವನೇಶ ಪಟೇಲ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಎರಡನೇ ಡೋಸ್ ಪಡೆದ ಡಿಎಚ್‌ಒ:
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ಅವರು ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದರು. ಕೋವಿಶಿಲ್ಡ್ ಲಸಿಕೆಯ ಬಗ್ಗೆ ಇದುವರೆಗೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಕಂಡು ಬಂದಿಲ್ಲ. ಪೊಲೀಸ್, ನಗರಸಭೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿ ಮೊಹ್ಮದ್ ಸೋಹಲ್, ಡಾ.ಸರೋಜ ಪಾಟೀಲ ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.