ಹುಮನಾಬಾದ ಪುರಸಭೆ ಆಡಳಿತ ವ್ಯವಸ್ಥೆಗೆ ಶಾಸಕರ ಅಸಮಾಧಾನ


Team Udayavani, Sep 1, 2022, 8:56 PM IST

22-MLA

ಹುಮನಾಬಾದ: ಪುರಸಭೆ ಸದಸ್ಯರು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು. ಆಡಳಿತ ವ್ಯವಸ್ಥೆ ಸರಿಪಡಿಸಿಕೊಳ್ಳುವಂತೆ ಅನೇಕ ಬಾರಿ ಸೂಚಿಸಿದರೂ ಅಧಿಕಾರಿಗಳು ಸೂಕ್ತ ಕೆಲಸ ನಿರ್ವಹಿಸಿಲ್ಲ. ಇಲ್ಲಿನ ಆಡಳಿತ ಕುರಿತು ಸಿಬಿಐ, ಸಿಐಡಿ ಮೂಲಕ ತನಿಖೆ ನಡೆಸುವ ಸ್ಥಿತಿ ಎದುರಾಗುತ್ತಿದೆ ಎಂದು ಶಾಸಕ ರಾಜಶೇಖರ ಪಾಟೀಲ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಪುರಸಭೆ ಎದುರಿಗೆ ಮಂಗಳವಾರ ಏರ್ಪಡಿಸಿದ್ದ 2021-22ನೇ ಸಾಲಿನ ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗೆ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಹಾಗೂ 2018-19ನೇ ಸಾಲಿನ ಎಸ್‌ಎಫ್‌ಸಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿನ ಯುಜಿಡಿ ಕಾಮಗಾರಿ, ಲೇಔಟ್‌ ಗಳ ನಿವೇಶನ ಬಿಡುಗಡೆ, ಸರ್ಕಾರಿ ಭೂಮಿ ಕಬಳಿಕೆ, ಸಿಎ ನಿವೇಶ, ಒಂದು ಕೆಲಸಕ್ಕೆ ಎರೆಡು ಬಿಲ್‌ ಪಾವತಿ ಸೇರಿದಂತೆ ಅನೇಕ ಆರೋಪಗಳು ಸದಸ್ಯರೇ ಮಾಡುತ್ತಿದ್ದಾರೆ. ವಿವಿಧ ಲೇಔಟ್‌ಗಳ ಅನುಮೋದನೆ ನೀಡಿದರೆ ಪುರಸಭೆಗೆ ಅನುದಾನ ಬರುತ್ತೆ ಎಂದು ಕೆಲ ಸದಸ್ಯರು ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ ಬಂದಿರುವ ಅನುದಾನ ಎಲ್ಲಿ ಖರ್ಚು ಆಯ್ತು ಎಂದು ಪ್ರಶ್ನಿಸಿದ ಅವರು, ಸೆ. 6ರಂದು ಪುರಭೆಯಲ್ಲಿ ಸಾಮಾನ್ಯ ಸಭೆ ನಡೆಯಲ್ಲಿದ್ದು, ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡ ಲಕ್ಷ್ಮೀ ಪುತ್ರ ಮಾಳಗೆ ಮಾತನಾಡಿ, ನಿವೇಶನ ಮಂಜೂರು ಮಾಡಲು ಕೆಲ ಸದಸ್ಯರು 50 ಸಾವಿರ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಬಹಿರಂಗವಾಗಿ ಆರೋಪಿಸಿದರು. ಈ ಕುರಿತು ಮಾತನಾಡಿದ ಶಾಸಕರು, ಅಧಿಕೃತವಾಗಿ ಮಾಹಿತಿ ನೀಡಿ, ಸುಮ್ಮನೆ ಆರೋಪ ಮಾಡುವುದು ಬೇಡ. ಒಂದು ವೇಳೆ ಹಾಗೆ ನಡೆದಿದ್ದರೆ ಅಂತಹ ಫಲಾನುಭವಿಗಳ ಹೆಸರು ಪಟ್ಟಿಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.

ಗ್ರಾಪಂ, ಪುರಸಭೆ, ತಾಪಂ, ಜಿಪಂ ವ್ಯಾಪ್ತಿಯ ಜನ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಕೆಲಸಗಳು ಸೂಕ್ತವಾಗಿ ನಿಭಾಯಿಸಬೇಕು. ಎಲ್ಲ ಕಡೆಗಳಲ್ಲಿ ಶಾಸಕರೇ ನಿಗಾವಹಿಸಲು ಸಾಧ್ಯವಾಗುವುದಿಲ್ಲ. ನಾನು ಎಲ್ಲ ಸದಸ್ಯರ ಅಭಿಪ್ರಾಯಗಳು ಪಡೆದುಕೊಂಡು ಫಲಾನುಭವಿಗಳ ಆಯ್ಕೆಗೆ ಸಹಕಾರ ನೀಡಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.

ಈ ಸಂದರ್ಭದಲ್ಲಿ ವಿವಿಧ ವಸತಿ ಯೋಜನೆ ಫಲಾನುಭವಿಗಳಿಗೆ ಮನೆ ನಿರ್ಮಾಣದ ಆದೇಶ ಪತ್ರ ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. ಅಲ್ಲದೆ, ನೂತನ ಪುರಸಭೆ ಅಧ್ಯಕ್ಷೆ ನೀತು ಮಲ್ಲಿಕಾರ್ಜುನ ಶರ್ಮಾ ಅವರ ಕೋಣೆಯನ್ನು ಶಾಸಕ ರಾಜಶೇಖರ ಪಾಟೀಲ ಉದ್ಘಾಟಿಸಿದರು. ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಉಪಾಧ್ಯಕ್ಷೆ ಸತ್ಯವತಿ ಮಠಪತಿ, ತಹಶೀಲ್ದಾರ್‌ ಪ್ರದೀಪಕುಮಾರ, ಸದಸ್ಯರಾದ ಅಪ್ಸರ್‌ ಮಿಯ್ನಾ, ಅಬ್ದುಲ್‌ ಗೋರೆಮಿಯ್ನಾ, ವೀರೇಶ ಸೀಗಿ, ಎಸ್‌ಎ ಬಾಸಿದ್‌, ಅನಿಲ ಪಲ್ಲರಿ, ಗಿರೀಶ ಪಾಟೀಲ, ರಮೇಶ ಕಲ್ಲೂರ್‌, ಸುನೀಲ ಪಾಟೀಲ ಸೇರಿದಂತೆ ಇತರೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.