ರಕ್ಷಣಾ ಕರ್ತವ್ಯ ನಿಷ್ಠೆಯಿಂದ ಮಾಡಿ
Team Udayavani, Dec 11, 2017, 12:19 PM IST
ಬೀದರ: ಪ್ರತಿಯೊಬ್ಬರು ಕಾನೂನು ನಿಯಮಗಳನ್ನು ಪಾಲಿಸಬೇಕು. ರಕ್ಷಣೆಯ ಕರ್ತವ್ಯವನ್ನು ನಿಷ್ಠೆ, ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿ ಬಾಬು ಕರೆ ನೀಡಿದರು.
ನಗರದ ಜಿಲ್ಲಾ ಗೃಹರಕ್ಷದ ದಳ ಕಚೇರಿ ಆವರಣದಲ್ಲಿ ಗೃಹ ರಕ್ಷಕ ದಳ ದಿನಾಚರಣೆ ನಿಮಿತ್ತ ನಡೆದ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸರೊಂದಿಗೆ ಗೃಹ ರಕ್ಷಕ ಸಿಬ್ಬಂದಿ ಕೈ ಜೋಡಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಮನೋಜಕುಮಾರ ಪಾಟೀಲ ಮಾತನಾಡಿ, ಪ್ರತಿಯೊಬ್ಬರ ರಕ್ಷಣೆ, ಕಾನೂನು ಪರಿಪಾಲನೆ ಮಾಡುವುದು, ರಸ್ತೆ ಸುರಕ್ಷತೆ ನಿಯಮ ಪಾಲಿಸುವಂತೆ ಅರಿವು ಮೂಡಿಸುವುದು, ಅಪಘಾತ ತಡೆಗಟ್ಟಲು ಸೂಕ್ತ ಮಾಹಿತಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಗೃಹ ರಕ್ಷಕ ದಳ ಕಚೇರಿಯಿಂದ ಶುರುವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಃ ಕಚೇರಿಗೆ ತಲುಪಿ ಮುಕ್ತಾಯಗೊಂಡಿತು. 250 ಗೃಹ ರಕ್ಷಕರು, ಪೊಲೀಸರು ಮತ್ತು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೊಗಲಪ್ಪ ಅವರನ್ನು ಸನ್ಮಾನಿಸಲಾಯಿತು. ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ಶ್ರೀಕಾಂತ ಅಲ್ಲಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.