ಗ್ರಾಮಗಳಲ್ಲಿ ಆದೀತು ಕುಡಿವ ನೀರಿನ ಸಮಸ್ಯೆ


Team Udayavani, Feb 17, 2019, 8:58 AM IST

bid-1.jpg

ಬೀದರ: ಬೇಸಿಗೆಯಲ್ಲಿ ಜಿಲ್ಲೆಯ ಸುಮಾರು 130ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಇರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
ಸದ್ಯ ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕಾಮಧೇನು ಎಂದೇ ಗುರುತಿಸಿಕೊಂಡ ಕಾರಂಜಾ ಜಲಾಶಯದ ನೀರು ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಪೋಲಾಗುತ್ತಿರುವುದು ಸಹಜ ಎನ್ನುವಂತಾಗಿದೆ.

ಕಾರಂಜಾ ಜಲಾಶಯದಿಂದ ವಿವಿಧ ಪಟ್ಟಣ ಹಾಗೂ ಗ್ರಾಮಗಳಿಗೆ ಪೈಪ್‌ ಲೈನ್‌ ಮೂಲಕ ನೀರು ಹರಿಸುವ ಕಾರ್ಯ ನಡೆಯುತ್ತಿದೆ. ಆದರೆ, ಪದೇಪದೆ ಪೈಪ್‌ಲೈನ್‌ ಸಮಸ್ಯೆಯಿಂದ ಭಾರಿ ಪ್ರಮಾಣದ ನೀರು ಪೋಲಾಗುತ್ತಿದೆ. ತಿಂಗಳ ಹಿಂದೇ ಬೀದರ್‌-ಹುಮನಾಬಾದ ಮಾರ್ಗ ಮಧ್ಯದ ಹಾಲಹಳ್ಳಿ
ಸಮೀಪದಲ್ಲಿ ಕಾರಂಜಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಪೋಲಾಗುತ್ತಿತ್ತು. ನಂತರ ಸಂಗೋಳಗಿ ಸಮೀಪ, ಶಮಶಾನಗರ ಸಮೀಪದಲ್ಲಿ ಕೂಡ ನೀರು ಪೋಲಾಗಿತ್ತು. ಇದೀಗ ಬೀದರ್‌ ತಾಲೂಕಿನ ಕಮಠಾಣಾ ಸಮೀಪದಲ್ಲಿ ಪೈಪ್‌ ಲೈನ್‌ ಒಡೆದು ಭಾರಿ ಪ್ರಮಾಣದ ನೀರು ಪೋಲಾಗುತ್ತಿದೆ.

ನೀರು ಮಿತವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾಡಳಿತ ಜಿಲ್ಲೆಯ ಜನರಿಗೆ ಮನವರಿಕೆ ಮಾಡುತ್ತಿದೆ. ಈ ಮಧ್ಯದಲ್ಲಿ ಅಧಿ ಕಾರಿಗಳ ನಿರ್ಲಕ್ಷéಕ್ಕೆ ಭಾರಿ ಪ್ರಮಾಣದ ನೀರು ಪೋಲಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಹಳ್ಳಿ ಮಾರ್ಗದಿಂದ ಶಮಶಾನಗರ,
ಕಂಗನಕೋಟೆ, ಕಮಠಾಣಾಗೆ ಸರಬರಾಜಾಗುವ ಪೈಪ್‌ಲೈನ್‌ ಕಮಠಾಣಾ ಗ್ರಾಮದ ಬಳಿ ಒಡೆದು ಹೋಗಿದೆ. ಇದರಿಂದ ದಿನನಿತ್ಯ ಸಾಕಷ್ಟು ನೀರು ಪೋಲಾಗುತ್ತಿದೆ. ಪೈಪ್‌ ಒಡೆದ ಜಾಗದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆದರೆ, ಸಂಬಂಧಿ ಸಿದ ಸಿಬ್ಬಂದಿ ಈ ಕಡೆ ಗಮನಹರಿಸುತ್ತಿಲ್ಲ. ಕನಿಷ್ಠ ಕಮಠಾಣಾ ಪಂಚಾಯತ್‌ ಸಿಬ್ಬಂದಿ ಕೂಡ ನೀರು ಪೋಲಾಗುತ್ತಿರುವ ಕುರಿತು ಸಂಬಂಧಿಸಿದ ಇಲಾಖೆ
ಅ ಧಿಕಾರಿಗಳಿಗೂ ಮಾಹಿತಿ ನೀಡುವ ಕೆಲಸ ಮಾಡಿಲ್ಲ. 

ಗ್ರಾಮದಲ್ಲಿ ವಾಸಿಲು ಸೂಚನೆ: ಬೇಸಿಗೆ ಸಂದರ್ಭದಲ್ಲಿ ಆಯಾ ಗ್ರಾಮ ಪಂಚಾಯತ ವ್ಯಾಪ್ತಿಯ ಅಧಿಕಾರಿಗಳು ಆಯಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿಯೇ ವಾಸ ಮಾಡಬೇಕು. ಯಾವ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರ್ತವ್ಯ ಲೋಪ ಮಾಡಿರುವ ಜಿಲ್ಲೆಯ 47 ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ. ಅಲ್ಲದೆ, ಈಗಾಗಲೇ 16 ಪಿಡಿಒಗಳನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದು, ಭಾಲ್ಕಿ ತಾಲೂಕಿನ ತೇಗಂಪೂರ್‌ ಗ್ರಾಮದಲ್ಲಿ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 128 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಕುರಿತು ಮಾಹಿತಿ ಇದೆ. ಈ ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮ ಪಂಚಾಯತ ಮಟ್ಟದಲ್ಲಿ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಾನೂನು
ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಗ್ರಾಮದಲ್ಲಿ ನೀರಿನ ಸಂಗ್ರಹ ಇರುವ ಖಾಸಗಿ ಕೊಳವೆ ಬಾವಿ, ತೆರೆದ ಬಾವಿ ಪರಿಶೀಲಿಸಲಾಗುತ್ತಿದೆ. ಭೂ ಗರ್ಭ
ತಜ್ಞರ ಮಾಹಿತಿ ಪ್ರಕಾರ ವಿವಿಧೆಡೆ ಕೊಳವೆ ಬಾವಿಗಳನ್ನು ಕೊರೆಸುವ ಕಾರ್ಯ ನಡೆಯುತ್ತಿದೆ. ನಮ್ಮ ಎಲ್ಲಾ ಯೋಜನೆಗಳು ವಿಫಲಗೊಂಡ
ಸಂದರ್ಭದಲ್ಲಿ ಮಾತ್ರ ಟ್ಯಾಂಕರ್‌ ನೀರು ಪೂರೈಕೆ ಮಾಡಲಾಗುವುದು.
 ಮಹಾಂತೇಶ ಬೀಳಗಿ. ಜಿಲ್ಲಾಪಂಚಾಯತ ಸಿಇಒ

ಕುಡಿಯುವ ನೀರಿಗೆ ಪ್ರತಿಯೊಬ್ಬರು ಮಹತ್ವ ನೀಡಬೇಕು. ಎಲ್ಲಿಯಾದರೂ ನೀರು ಪೋಲಾಗುತ್ತಿದ್ದರೆ ಕೂಡಲೆ ಅಧಿಕಾರಿಗಳ ಗಮನಕ್ಕೆ ತರುವ ಕಾರ್ಯವನ್ನು ಸಾರ್ವಜನಿಕರು ಮಾಡಬೇಕು. ಕಮಠಾಣಾ ಗ್ರಾಮದ ಸಮೀಪದಲ್ಲಿ ನೀರು ಪೋಲಾಗುತ್ತಿರುವ ಕುರಿತು ಅಧಿಕಾರಿಗಳು ಕೂಡಲೇ ಭೇಟಿ ನೀಡಿ ನೀರು ಪೋಲಾಗದಂತೆ ತಡೆಯುವಂತೆ ಸೂಚಿಸಲಾಗುವುದು. ಔರಾದ ಪಟ್ಟಣಕ್ಕೆ ಕಾರಂಜಾ ಜಲಾಶಯದ ನೀರು ಪೂರೈಕೆ ಮಾಡುವಂತೆ ಔರಾದ ಶಾಸಕರು ಪತ್ರ ಬರೆದಿದ್ದಾರೆ. ಆದರೆ, ಕಾರಂಜಾ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಜಲಾಶಯದಿಂದ ಔರಾದವರೆಗೆ ಹರಿದು ಹೋಗುವ ನೀರು ಹೆಚ್ಚಾಗಿ ಹಾಳಾಗುವ ಸಾಧ್ಯತೆ ಇದ್ದು, ಈ ಕುರಿತು ಪರಿಶೀಲಿಸಲಾಗುತ್ತಿದೆ.
 ಡಾ| ಎಚ್‌.ಆರ್‌. ಮಹಾದೇವ, ಜಿಲ್ಲಾಧಿಕಾರಿ

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Mangaluru: ಕರಾವಳಿ ಉತ್ಸವ; ಅರಣ್ಯ ಅನುಭವ!

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

10(1

Mangaluru: ನಗರದ 18 ಕಡೆಗಳಲ್ಲಿ ಪೇ ಪಾರ್ಕಿಂಗ್‌

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.