ಗ್ರಾಮೀಣ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಓಡಿಸಿ
ರಸ್ತೆಯ ಬಾಕಿ ಉಳಿದಿರುವ ಕಾಮಗಾರಿ ಕೆಲಸ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಬೇಕು.
Team Udayavani, Jan 29, 2021, 5:43 PM IST
ಭಾಲ್ಕಿ: ತಾಲೂಕಿನ ಗ್ರಾಮೀಣ ಪ್ರದೇಶದ ವಿವಿಧೆಡೆ ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ
ತಾಕೀತು ಮಾಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನ ವಿವಿಧೆಡೆ ಬಸ್ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಿಗದಿತ ಸಮಯದಲ್ಲಿ ತೆರಳಲು ಸಾಧ್ಯವಾಗುತ್ತಿಲ್ಲ. ಜತೆಗೆ
ಜನರು ವಿವಿಧ ಕೆಲಸಗಳಿಗೆ ಓಡಾಡಲು ಸಮಸ್ಯೆ ಎದುರಿಸುತ್ತಿದ್ದಾರೆ. ಯಾವುದೇ ನೆಪ ಹೇಳದೇ ಎಲ್ಲ ಕಡೆಗಳಲ್ಲಿ ತಕ್ಷಣ ಬಸ್ ವ್ಯವಸ್ಥೆ ಮಾಡಿ ಮಾಹಿತಿ
ನೀಡುವಂತೆ ಡಿಪೋ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಪಟ್ಟಣದಲ್ಲಿ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿ, ಹೊಸ ಬಡಾವಣೆಗಳಲ್ಲಿ ಬಿಟ್ಟು ಹೋಗಿರುವ ಸಿಸಿ ರಸ್ತೆ, ಚರಂಡಿ, ಬೀದಿ ದೀಪ ಅವಳವಡಿಕೆ ಸೇರಿ ಮುಖ್ಯ ರಸ್ತೆಯ ಬಾಕಿ ಉಳಿದಿರುವ ಕಾಮಗಾರಿ ಕೆಲಸ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಬೇಕು. ರಸ್ತೆ ಮಧ್ಯದಲ್ಲಿನ ವಿದ್ಯುತ್ ಕಂಬ ಸ್ಥಳಾಂತರಿಸಬೇಕು.
ಜತೆಗೆ ಪುರಸಭೆ ನೂತನ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿ ಫೆ.15ರೊಳಗೆ ಕಟ್ಟಡ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಜತೆಗೆ
ಗ್ರಾಮೀಣ ಭಾಗದ ಕುಡಿವ ನೀರಿನ ಕಾಮಗಾರಿ ಪರಿಶೀಲಿಸಲು ಇಒಗೆ ಸೂಚಿಸಿದರು.
ಕೊರೊನಾ ಸಕ್ರಿಯೆ ಪ್ರಕರಣ 4: ತಾಲೂಕಿನಲ್ಲಿ ಕೇವಲ 4 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ತಾಲೂಕು ಆರೋಗ್ಯ ವೈದ್ಯಾ ಧಿಕಾರಿ
ಡಾ| ಜ್ಞಾನೇಶ್ವರ ನಿರಗೂಡೆ ಸಭೆಯ ಗಮನಕ್ಕೆ ತಂದರು. ಶೇ.78 ಕೊರೊನಾ ವಾರಿಯರ್ಸ್‌ಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಲಸಿಕೆಯಿಂದ
ಯಾವುದೇ ಅಡ್ಡ ಪರಿಣಾಮವಾಗಿಲ್ಲ ಎಂದರು.
ಈ ವೇಳೆ ತಾಪಂ ಉಪಾಧ್ಯಕ್ಷ ಶಿವರಾಜ ಪಾಟೀಲ್, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ತಾಪಂ ಇಒ ದೀಪಿಕಾ ನಾಯಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.