ಬೆಂಬಲ ಬೆಲೆಯಲ್ಲಿ ಜೋಳ ಖರೀದಿಗೆ ಚಾಲನೆ
Team Udayavani, Feb 20, 2022, 2:24 PM IST
ಮಾನ್ವಿ: ಸರಕಾರದ ಆದೇಶದಂತೆ 2021-22ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಜೋಳ ಖರೀದಿಗೆ ಜ.1ರಿಂದ ನೋಂದಣಿ ಪ್ರಾರಂಭವಾಗಿದ್ದು, 1685ಕ್ಕೂ ಹೆಚ್ಚು ರೈತರು ಹೆಸರು ನೋಂದಾಯಿಸಿದ್ದಾರೆ ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಕೇಂದ್ರದ ಲೆಕ್ಕಾ ಧಿಕಾರಿ ರಮೇಶ ತಿಳಿಸಿದರು.
ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಕೇಂದ್ರದಲ್ಲಿನ ಜೋಳ ಖರೀದಿ ಕೇಂದ್ರದಲ್ಲಿ ಜೋಳ ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರದಿಂದ ಹೈಬ್ರಿಡ್ ಜೋಳ ದರ ಪ್ರತಿ ಕ್ವಿಂಟಲ್ಗೆ 2738 ರೂ., ಬಿಳಿ ಜೋಳ ಮಾಲ್ದಂಡಿ ದರ ಪ್ರತಿ ಕ್ವಿಂಟಲ್ಗೆ 2758 ರೂ. ನಂತೆ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಸರಕಾರದಿಂದ ಖರೀದಿ ಮಿತಿಯನ್ನು ತೆರವುಗೊಳಿಸಿರುವುದರಿಂದ ರೈತರು ಪ್ರತಿ ಎಕರೆಗೆ 20 ಕ್ವಿಂಟಲ್ ವರೆಗೆ ಫೆ.28ರ ವರೆಗೆ ನೋಂದಣಿಗೆ ಅವಕಾಶವಿದೆ. ಮಾ.31ರವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.
ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ ಮಾತನಾಡಿ, ತಾಲೂಕಿನಲ್ಲಿ ಒಟ್ಟು ಜೋಳ ಖರೀದಿಗೆ ಮಾನ್ವಿ ಪಟ್ಟಣದಲ್ಲಿ 2 ಕೇಂದ್ರಗಳು, ಹಿರೇಕೋಟೆ°ಕಲ್, ತೋಳದಿನ್ನಿ ಗ್ರಾಮಗಳಲ್ಲಿ ಒಂದರಂತೆ 4 ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ರೈತರು ಜೋಳದ ಬೆಳೆಯನ್ನು ನೋಂದಾಯಿಸಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.