ರೈತರ ಸಮಸ್ಯೆಗೆ ಸ್ಪಂದಿಸುವ ಪ್ರಯತ್ನ
Team Udayavani, Feb 24, 2019, 8:38 AM IST
ಬೀದರ: ಕೇಂದ್ರ ಸರ್ಕಾರ ದೇಶದ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು. ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದ ಪ್ರಾಂಗಣದಲ್ಲಿ ಕೃಷಿ ಇಲಾಖೆ ಬೀದರ, ತೋಟಗಾರಿಕೆ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಕಿಸಾನ್ ಮೇಳ ಹಾಗೂ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ತಿಂಗಳಿಂದ ಯೋಜನೆ ಅನುಷ್ಠಾನ: ಪ್ರಧಾನಿ ಮೋದಿ ರೈತರ ಅನೇಕ ಕಷ್ಟಗಳನ್ನು ತಿಳಿದುಕೊಂಡು ವಿವಿಧ ಯೋಜನೆ ಜಾರಿ ಮಾಡಿದ್ದಾರೆ. ದೇಶದಲ್ಲಿ ಇಂದು ಯಾವುದೇ ರಾಜ್ಯದಲ್ಲಿ ಗೊಬ್ಬರದ ಸಮಸ್ಯೆ ಇಲ್ಲದಂತೆ ಮಾಡಿದ್ದಾರೆ. ಬಜೆಟ್ ಮಂಡನೆ ಸಂದರ್ಭದಲ್ಲಿ ರೈತರಿಗೆ ಪ್ರತಿ ವರ್ಷಕ್ಕೆ ಆರು ಸಾವಿರ ಹಣ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ಘೋಷಣೆ ಮಾಡಿದ್ದು, ಇದೇ ತಿಂಗಳಿಂದ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ತಿಳಿಸಿದರು.
ರೈತರಿಗೆ ನೆರವು: ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಕಂಗಾಲಾಗುತ್ತಿರುವುದುನ್ನು ತಿಳಿದುಕೊಂಡ ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಅನುಷ್ಠಾನಗೊಳಿಸಿ ದೇಶದ ಅನೇಕ ರೈತರಿಗೆ ವಿಮಾ ಯೋಜನೆ ಲಾಭ ದೊರಕಿಸಿದ್ದಾರೆ. ರೈತರ
ಬೆಳೆಗಳಿಗೆ ಉತ್ತಮ ಬೆಲೆ ನೀಡುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ರೈತರಿಗೆ ನೆರವು ನೀಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಕುರಿತು ವಿವರಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ರಾಜಕುಮಾರಸಿಂಗ್ ಹಜಾರೆ, ಡಾ| ಕೆ.ಎನ್. ಕಟ್ಟಿಮನಿ, ಡಾ| ಪ್ರಶಾಂತ ಅರ್ಮೊರಿಕರ್, ಡಾ| ಬಿ.ಎಂ. ಚಿತ್ತಾಪುರೆ, ರವಿ ದೇಶಮುಖ, ಡಾ| ಮಲ್ಲಿಕಾರ್ಜುನ ಬಾವಗೆ, ವಿದ್ಯಾನಂದ. ಸಿ ಸೇರಿದಂತೆ ಇತರೆ ಅಧಿಕಾರಿಗಳು, ರೈತರು ಭಾಗವಹಿಸಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಹಿಂದೆಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುತ್ತಿದೆ. ಅಧಿಕಾರವಧಿಯಲ್ಲಿ ರೈತರು ಸೇರಿದಂತೆ, ಬಡವರು, ನಿರ್ಗತಿಕರು, ಅಂಗವಿಕಲರು ಹೀಗೆ ಸರ್ವರ ಏಳ್ಗೆ ಬಯಸಲು ಹಲವಾರು ಅಭಿವೃದ್ಧಿ ಯೋಜನೆ ಕೈಗೊಳ್ಳುತ್ತಿದೆ. ಈ ಮೂಲಕ ದೇಶದ ಜನಮಾನಸದಲ್ಲಿ ಕೇಂದ್ರ ಸರ್ಕಾರ ಮೆಚ್ಚುಗೆಯ ಅಚ್ಚೊತ್ತಿದೆ.
ಭಗವಂತ ಖೂಬಾ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.