ಹಿರಿಯರ ಗೌರವಿಸುವ ಗುಣ ಬೆಳೆಯಲಿ
Team Udayavani, Oct 5, 2017, 11:52 AM IST
ಬೀದರ: ಹಿರಿಯ ಜೀವಗಳಿರುವ ಕುಟುಂಬ ಯಾವುದೇ ಸಮಸ್ಯೆಗಳಿರದೇ ಸುಂದರವಾಗಿರುತ್ತದೆ. ಹಿರಿಯರಿಗೆ ನೋವುಂಟು ಮಾಡದೇ ಗೌರವದಿಂದ ನೋಡಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು. ನಗರದ ಎಸ್‌ಆರ್‌ಎಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರು ಆಧುನಿಕತೆಯೆಡೆಗೆ ಸಾಗುತ್ತಿದ್ದಂತೆ ಹಿರಿಯ ನಾಗರಿಕರ ಸಮಸ್ಯೆಗಳು ಹೆಚ್ಚುತ್ತಿವೆ. ಮಕ್ಕಳು
ದೊಡ್ಡವರಾಗುತ್ತಿದ್ದಂತೆ ಸ್ವಂತ ತಂದೆ ತಾಯಿ ನಿರ್ಲಕ್ಷಿಸುವುದು ಕಂಡು ಬರುತ್ತಿದೆ. ಇಂತಹ ನಡವಳಿಕೆಯಿಂದ ಅನುಭವಸ್ಥರಿಲ್ಲದ ಕುಟುಂಬಗಳು ಹೆಚ್ಚಾಗಿ ಆತ್ಮಹತ್ಯೆ, ಕೌಟುಂಬಿಕ ಸಾಮರಸ್ಯದ ಕೊರತೆ ಹಾಗೂ ವಿವಾಹ ವಿಚ್ಛೇದನದಂತಹ ಸಮಸ್ಯೆಗಳು ಹೆಚ್ಚಾಗುತ್ತವೆ. ಆದ್ದರಿಂದ ಹಿರಿಯ ನಾಗರಿಕರನ್ನು ಗೌರವಿಸುವ ಮನೋಭಾವ ಎಲ್ಲರಲ್ಲಿಯೂ ಬೆಳೆಯಬೇಕು ಎಂದು ಹೇಳಿದರು.
ಹಿರಿಯ ನಾಗರಿಕರು ತಾವು ಗಳಿಸಿದ ಅನುಭವವನ್ನು ಸಾಮಾಜಿಕ ಸುಧಾರಣೆಗೆ ಬಳಸಬೇಕು. ಮಕ್ಕಳಲ್ಲಿ ನೈತಿಕ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ವೃದ್ದಾಪ್ಯ ಜೀವನವನ್ನು ನೆಮ್ಮದಿಯಿಂದ ಕಳೆಯಲು ಸಂಗೀತ ಆಲಿಸುವಿಕೆಯಂತಹ ಮನೋರಂಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಮಾತನಾಡಿ, ನಾವು ನಮ್ಮ ತಂದೆ ತಾಯಿಗಳಿಗೆ ಗೌರವ ನೀಡಿದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳಿಂದಲೂ ಗೌರವ ದೊರೆಯುತ್ತದೆ. ಯುವಕರು ತಮ್ಮ ವೃದ್ಧ ತಂದೆ-ತಾಯಿಯರ ಆಸೆ-ಆಕಾಂಕ್ಷೆಗಳನ್ನು ಪೂರೈಸಬೇಕು. ಅವರ ಯೋಗ ಕ್ಷೇಮದ ಬಗ್ಗೆ ಪ್ರತಿದಿನ ವಿಚಾರಿಸುತ್ತಿರಬೇಕು ಎಂದು ಹೇಳಿದರು. ಹಿರಿಯರಾದ ಎಸ್.ಬಿ. ಕುಚಬಾಳ, ವೈಜಿನಾಥ ಕಮಠಾಣೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿ ಕಾರಿ ಬಿ.ಪಾಂಡುರಂಗ ಮಾತನಾಡಿದರು.
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಅಲ್ಲದೇ ದೇಹದಾನ ಮಾಡಿದ ಮನ್ನಳ್ಳಿಯ ಚನ್ನಪ್ಪ ಸಂಗೋಳಗಿ ಅವರನ್ನು ಸನ್ಮಾನಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಈರಣ್ಣ ಪಾಂಚಾಳ, ಕೃಷಿ ನಿವೃತ್ತ ಜಂಟಿ ನಿರ್ದೇಶಕ ಎಂ.ಎಸ್.ಕಟಗಿ, ಲಕ್ಷ್ಮಣರಾವ ಕಾಂಚೆ, ಡ್ಯಾನಿಯಲ್ ರಾಜ್ ಕೊಳಾರ, ವಿವಿಧ ಇಲಾಖೆ ಅಧಿಕಾರಿಗಳು, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯ ನಾಗರಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.