ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ಕೊಡಿ
Team Udayavani, Mar 4, 2018, 12:58 PM IST
ಭಾಲ್ಕಿ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು ಎಂದು ಎಸ್‌ಎಲ್‌ಡಿಇಸಿ ಟ್ರಸ್ಟ್ ಕಾರ್ಯದರ್ಶಿ ಉಷಾ ಖಂಡ್ರೆ ಹೇಳಿದರು.
ಪಟ್ಟಣದ ಸೂರ್ಯೋದಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕೋತ್ಸವ ನಿಮಿತ್ತ ನಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಶಿಕ್ಷಣ ಸಂಸ್ಥೆಯಲ್ಲಿ ಪಾಲಕ, ಬಾಲಕ, ಶಿಕ್ಷಕ ಮತ್ತು ಆಡಳಿತ ಮಂಡಳಿಯವರ ಪಾಲು ಬಹುಮುಖ್ಯವಾಗಿದೆ. ಪಾಲಕರು ಶಾಲೆ ಜೊತೆಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂದು ಹೇಳಿದರು.
ಉಪನ್ಯಾಸಕ ಪ್ರೊ| ಚಂದ್ರಕಾಂತ ಬಿರಾದಾರ ಮಾತನಾಡಿ, ಒಬ್ಬ ವ್ಯಕ್ತಿ ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎಂದು ಛಲತೊಟ್ಟು ನಿಂತಾಗ ಯಶಸ್ಸು ಖಂಡಿತಾ ಸಾಧ್ಯ. ಒಂದು ದೇಶದ ಶ್ರೀಮಂತಿಕೆಯನ್ನು ಆ ದೇಶದ ಶೈಕ್ಷಣಿಕ ಗುಣಮಟ್ಟದಿಂದ ಅಳೆಯಲಾಗುತ್ತದೆ. ಹೀಗಾಗಿ ನಾವು ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುವಂತಾಗಬೇಕು. ಶಿಕ್ಷಣ ಮತ್ತು ಸಂಸ್ಕಾರ ಸೇರಿದಾಗ ಮಾತ್ರ ಆ ವ್ಯಕ್ತಿ ಪರಿಪೂರ್ಣವಾಗಲು ಸಾಧ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಎಲ್‌ಡಿಇಸಿ ಟ್ರಸ್ಟ್ ಅಧ್ಯಕ್ಷ ಸಂತೋಷ ಖಂಡ್ರೆ ಮಾತನಾಡಿ, ಪಾಲಕರು ತಮ್ಮ ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಬೇಕು. ಮಕ್ಕಳ ಜೊತೆಯಲ್ಲಿ ತಾಯಿ, ತಂದೆ, ಅಕ್ಕ, ಅಣ್ಣ, ಅಜ್ಜ, ಅಜ್ಜಿಯರ ಎಲ್ಲಾ ಪಾತ್ರಗಳನ್ನು ಪಾಲಕರು ನಿರ್ವಹಿಸಬೇಕು. ಆಗ ಮಾತ್ರ ಆ ಮಗು ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.
ಮುಖ್ಯಗುರು ಅನೀಲ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಮಶೆಟ್ಟಿ ಸ್ವಾಮಿ ವಿದ್ಯಾರ್ಥಿಗಳ ಬೆಳವಣಿಗೆ ಕುರಿತು ಮಾತನಾಡಿದರು. ಇದೇವೇಳೆ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮತ್ತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಲಕ್ಷ್ಮಿಬಾಯಿ ಖಂಡ್ರೆ, ತೊರಣಗೆ ಗುರೂಜಿ, ಹರಿದೇವ ರುದ್ರಮಣಿ, ರಾಜೇಶ ಮುಗಟೆ, ಜಯರಾಜ ದಾಬಶೆಟ್ಟಿ, ಮಾಸುಮ ಅಲಿ, ವಿರಶಟ್ಟಿ, ವಿದ್ಯಾ, ಪ್ರಭು,
ಮಂಜಪ್ಪ ಉಪಸ್ಥಿತರಿದ್ದರು. ಶಾಲೆಯ ಪುಟ್ಟ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಣೆ ಮಾಡಿದ್ದು ವಿಶೇಷವಾಗಿತು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.