![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 21, 2020, 7:15 PM IST
ಬೀದರ: ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಹಿಂದುಳಿದ ಔರಾದ ತಾಲೂಕಿನಲ್ಲಿ ಹೊಸ ಕೈಗಾರಿಕಾಪ್ರದೇಶ ಮತ್ತು ವಸಾಹತು ಸ್ಥಾಪನೆ ಮಾಡುವ ಪ್ರಕ್ರಿಯೆಯನ್ನು ತೀವ್ರವಾಗಿ ನಡೆಸಬೇಕು. ಜಮೀನು ಗುರುತಿಸಿ,ಸರ್ವೆ ಮಾಡುವ ಕಾರ್ಯವನ್ನು ಮುಂದಿನ ಸಭೆಯೊಳಗೆಪೂರ್ಣಗೊಳಿಸಬೇಕು ಎಂದು ಡಿಸಿ ರಾಮಚಂದ್ರನ್ ಆರ್ ಅವರು ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ
ಸಭಾಂಗಣದಲ್ಲಿ ನಡೆದ ಜಿಲ್ಲಾ ಕೈಗಾರಿಕಾ ಕೇಂದ್ರದಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಮಟ್ಟದಲ್ಲಿ ಕೈಗಾರಿಕಾ ಸ್ಥಾಪನೆಗೆ ಐದು ಘಟಕಗಳು ಮುಂದೆ ಬಂದಿದ್ದು, 2554.75 ಲಕ್ಷ ರೂ. ಬಂಡವಾಳ ಮತು 103 ಜನರಿಗೆ ಉದ್ಯೋಗ ನೀಡುವ ಅವಕಾಶವಿರುತ್ತದೆ ಎಂದು ಇದೆ ವೇಳೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನವಳ್ಳಿ ಅವರು ಸಭೆಗೆ ತಿಳಿಸಿದರು.
ಈ ಘಟಕಗಳಿಗೆ ಬ್ಯಾಂಕಿನಿಂದ ಸಾಲ, 109 ಕಾಯಿದೆ ಅಡಿ ಕೃಷಿಯೇತರ ಚಟುವಟಿಕೆಗಳಿಗೆ ಭೂಪರಿವರ್ತನೆಮತ್ತು ಇತರೆ ಇಲಾಖೆಗಳ ಪರವಾನಿಗೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಖಾಲಿ ಇರುವ ನಿವೇಶನಗಳ ಬಗ್ಗೆ ಚರ್ಚಿಸಲಾಯಿತು. ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನಗಳ ಲಭ್ಯತೆ ಬಗ್ಗೆ ವರದಿ ಸಲ್ಲಿಸಬೇಕು. ಅಲ್ಲದೇ ಹೊಸ ಉದ್ದಿಮೆಗಳಿಗೆ ಹಂಚಿಕೆ ಮಾಡಲು ಕ್ರಮವಹಿಸಬೇಕು ಎಂದು ಡಿಸಿ ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ವಿಶೇಷ ಘಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಮಳಿಗೆಗಳ ಹಂಚಿಕೆಗೆ ಸಭೆಯಲ್ಲಿ ಇದೆ ವೇಳೆ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಬೀದರ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ. ಕಮತಗಿ, ಕೆಐಎಡಿಬಿ ಅಧಿಕಾರಿ ಸತ್ಯವ್ರತ, ಪ್ರಕಾಶ, ನಾಗಪ್ಪ ರೆಡ್ಡಿ ಹಾಗೂ ಕೈಗಾರಿಕೋದ್ಯಮಿಗಳು ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.