ಸಕಲರ ಒಳಿತಿಗೆ ವಿವಿ ಸ್ಥಾಪನೆ
Team Udayavani, Jan 21, 2019, 11:48 AM IST
ಬೀದರ: ವಿಶ್ವವಿದ್ಯಾಲಯ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸರ್ವ ಸಮುದಾಯದ ಹಿತಕ್ಕಾಗಿ ಆರಂಭಿಸಲಾಗಿದೆ. ಯಾರೂ ಬೇಕಾದರೂ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಬಹುದು ಎಂದು ವಿಶ್ವವಿದ್ಯಾಲಯದ ಕುಲಪತಿ ಖಾಜಾಬಂದೆ ನವಾಜ್ ದರ್ಗಾದ ಸಜ್ಜಾದೆ ಡಾ| ಸೈಯ್ಯದ್ ಶಾ ಖುಸ್ರೊ ಹುಸೇನಿ ಹೇಳಿದರು.
ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್ ಫೋರ್‌ಂ ವತಿಯಿಂದ ನಗರದ ಹಳೆ ಸರ್ಕಾರಿ ಆಸ್ಪತ್ರೆ ಸಮೀಪದ ನಗರಸಭೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಅಣಿಗೊಳಿಸಲಾಗುವುದು. ಕಲಬುರ್ಗಿ ಖಾಜಾಬಂದೆ ನವಾಜ್ ನೂತನ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಖಾಜಾಬಂದೆ ನವಾಜ್ ಶಿಕ್ಷಣ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ದಶಕಗಳ ಅವಯಲ್ಲಿ ನರ್ಸರಿಯಿಂದ ವಿಶ್ವವಿದ್ಯಾಲಯ ವರೆಗೂ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದೆ. ಸಂಸ್ಥೆಯ ಶಾಲೆ-ಕಾಲೇಜುಗಳಲ್ಲಿ ಓದಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಮಹಮೂದ್ ಗವಾನ್ ಅವರು ಬೀದರನಲ್ಲಿ ಶತಮಾನಗಳ ಹಿಂದೆಯೇ ವಿಶ್ವವಿದ್ಯಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದರು. ದೇಶ ವಿದೇಶದ ವಿದ್ಯಾರ್ಥಿಗಳು ಆಗಲೇ ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಅದಾದ 700 ವರ್ಷಗಳ ನಂತರ ಹಲವರ ಸಹಕಾರದಿಂದ ಈ ಭಾಗದ ಖಾಜಾಬಂದೆ ನವಾಜ್ ಸಂಸ್ಥೆಗೆ ವಿಶ್ವವಿದ್ಯಾಲಯ ಮಂಜೂರಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯ ಮಂಜೂರು ಆಗಿರುವುದರ ಹಿಂದೆ ಬಹಳಷ್ಟು ಜನರ ಶ್ರಮವಿದೆ. ಖಾಜಾಬಂದೆ ನವಾಜ್ ಅವರ ಕೃಪಾಶೀರ್ವಾದ, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದನದಲ್ಲಿ ಒಕ್ಕೊರಲಿಂದ ಬೆಂಬಲಿಸಿದ ಎಲ್ಲ ಶಾಸಕರು, ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಇದರ ಶ್ರೇಯ ಸಲ್ಲುತ್ತದೆ ಎಂದು ಹೇಳಿದರು.
ನೀಲಂಗಾದ ದರ್ಗಾ ಹೈದರ್ ವಲಿ ಸಜ್ಜಾದೆ ಸೈಯ್ಯದ್ ಹೈದರ್ ಪಾಶಾ ಖಾದ್ರಿ, ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್ ಫೋರ್‌ಂ ಸಂಚಾಲಕ ಡಾ| ಮಕ್ಸೂದ್ ಚಂದಾ ಮಾತನಾಡಿ, ಬೀದರ ಈಗ ಶೈಕ್ಷಣಿಕವಾಗಿ ಮುಂದುವರಿಯುತ್ತಿದೆ. ಹಿಂದೆ ಒಬ್ಬ ವಿದ್ಯಾರ್ಥಿ ಮೆಡಿಕಲ್‌ಗೆ ಹೋಗುವುದು ದೊಡ್ಡ ಸಾಧನೆಯಾಗುತ್ತಿತ್ತು. ಆದರೆ, ಇದೀಗ ಜಿಲ್ಲೆಯಲ್ಲಿ ಶೈಕ್ಷಣಿಕ ಕಾಂತ್ರಿ ನಡೆಯುತ್ತಿದೆ. ಉನ್ನತ ಸ್ಥಾನಗಳನ್ನು ನಮ್ಮ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಾಹೀನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್ ಖದೀರ್, ಅಸ್ಲಂ ಫರಶೂರಿ, ಕೆಬಿಎನ್ ವಿವಿ ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.
ಹೈಕ ಭಾಗದ ಪ್ರತಿಷ್ಠಿತ ಸಂಸ್ಥೆಯಾಗಿರುವ ಖಾಜಾಬಂದೆ ನವಾಜ್ ಸಂಸ್ಥೆ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ವೇದಿಕೆ ಒದಗಿಸಿದೆ. ವಿಶ್ವವಿದ್ಯಾಲಯದ ಮಂಜೂರಾತಿ ಡಾ| ಸೈಯ್ಯದ್ ಶಾ ಖುಸ್ರೊ ಹುಸೇನಿ ಅವರ ಅವಿರತ ಶ್ರಮದ ಪ್ರತಿಫಲವಾಗಿದೆ. ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತಮ್ಮ ಗುರು, ಪಾಲಕರು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು.
•ಮಹಮ್ಮದ್ ಅಜರುದ್ದೀನ್ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.