ಪ್ರತಿಯೊಬ್ಬರೂ ಸಸಿ ನೆಡಲು ಸಲಹೆ
Team Udayavani, Jun 17, 2021, 6:00 PM IST
ಬೀದರ: ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪಾಲಿ ಕ್ಲಿನಿಕ್ ಕಚೇರಿ ಆವರಣದಲ್ಲಿ ಬುಧವಾರ “ಸಸಿ ನೆಡುವ ಕಾರ್ಯಕ್ರಮ’ ನಡೆಯಿತು. ನಗರಸಭೆ ಮಾಜಿ ಸದಸ್ಯ ಮೊಹಮ್ಮದ್ ಇರ್ಷಾದ್ ಕಚೇರಿ ಆವರಣದಲ್ಲಿ ಸಸಿ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪಾಲಿಕ್ಲಿನಿಕ್‌ನ ಉಪ ನಿರ್ದೇಶಕ ರವೀಂದ್ರಕುಮಾರ ಭೂರೆ ಮಾತನಾಡಿರು. ಡಾ| ಗೌತಮ ಅರಳಿ, ಡಾ| ಯೋಗೀಂದ್ರ ಕುಲಕರ್ಣಿ, ಡಾ| ಬಸವರಾಜ ನಿಟ್ಟೂರೆ, ಡಾ| ಇಲಿಯಾಸ್, ವಿಠಲ್ ಕಲ್ಯಾಣಿ ಹಾಗೂ ಇತರರು ಇದ್ದರು. ಕುರಿಗಳ ಕರುಳು ಬೇನೆ ಲಸಿಕಾ ಕಾರ್ಯಕ್ರಮ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಜೂ. 30ರವರೆಗೆ ಕುರಿ ಮತ್ತು ಮೇಕೆಗಳಿಗೆ ಉಚಿತ “ಕರುಳು ಬೇನೆ ಲಸಿಕಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಕುರಿ ಮೇಕೆ ಸಾಕಾಣಿಕೆದಾರರು ತಮ್ಮ ಕುರಿ ಮತ್ತು ಮೇಕೆಗಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಂಡು ಕರುಳು ಬೇನೆ ಬರದಂತೆ ಮುಂಜಾಗ್ರತೆ ವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಧಿಕಾರಿಗಳಾದ ಭಾಲ್ಕಿ ಡಾ| ನರಸಪ್ಪಾ ಎ.ಡಿ. ಮುಖ್ಯ ಪಶುವೈದ್ಯಾಧಿಕಾರಿಗಳು ಮೊ: 9480719624, ಬಸವಕಲ್ಯಾಣ ಡಾ| ರವೀಂದ್ರನಾಥ ಜಿ., ಮುಖ್ಯ ಪಶುವೈದ್ಯಾಧಿಕಾರಿಗಳು-9448604030, ಔರಾದ ಡಾ| ರಾಜಕುಮಾರ ಬಿರಾದಾರ ಮುಖ್ಯ ಪಶುವೈದ್ಯಾಧಿಕಾರಿಗಳು 9480246028, ಬೀದರ ಡಾ| ಯೋಗೇಂದ್ರ ಕುಲಕರ್ಣಿ ಮುಖ್ಯ ಪಶುವೈದ್ಯಾಧಿಕಾರಿಗಳು-944 8100154, ಹುಮನಾಬಾದ ಡಾ| ಗೋವಿಂದ ಬೆ.ಎಚ್. ಮುಖ್ಯ ಪಶುವೈದ್ಯಾಧಿಕಾರಿಗಳು- 9449336740 ಅವರನ್ನು ಸಂಪರ್ಕಿಸಬಹುದು ಎಂದು ಇಲಾಖೆ ಉಪ ನಿರ್ದೇಶಕ ಡಾ| ರವೀಂದ್ರಕುಮಾರ ಭೂರೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.