ಮತ ಎಣಿಕೆಯತ್ತ ಈಗ ಎಲ್ಲರ ಚಿತ್ತ
Team Udayavani, May 14, 2018, 3:55 PM IST
ಬೀದರ: ಮತ ಪೆಟ್ಟಿಗೆಯಲ್ಲಿ ಭದ್ರವಾಗಿ ಸೇರಿರುವ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಏನೆಂಬುದು ಮೇ 15ರಂದು ಹೊರಬೀಳಲಿದೆ. ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ಪಡೆದಿರುವ ಮಹಾಸಮರಕ್ಕೆ ಶನಿವಾರ ಮತದಾನ ನಡೆದಿದ್ದು, ಈಗ ಎಲ್ಲರ ಚಿತ್ತ ಮತ ಎಣಿಕೆಯತ್ತ ನೆಟ್ಟಿದೆ. ಇತ್ತ ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತನ್ಮಯರಾಗಿದ್ದಾರೆ.
ಲೋಕಸಭೆ ಚುನಾವಣೆಗೆ ದಿಕ್ಸೂಚಿಯೆಂದೇ ಪರಿಗಣಿಸಿರುವುದರಿಂದ ರಾಜ್ಯ ವಿಧಾನಸಭೆ ಚುನಾವಣೆ ಭಾರಿ ಮಹತ್ವ ಪಡೆದಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಪ್ರಮುಖ ಮೂರು ಪಕ್ಷಗಳು ಕಾದಾಟ ನಡೆಸಿವೆ. ಗಣ್ಯಾತಿಗಣ್ಯರ
ಸ್ಪರ್ಧೆ, ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಜಿಲ್ಲೆ ಚರ್ಚೆಯಲ್ಲಿದೆ. ಫಲಿತಾಂಶ ಹೊರಬೀಳಲು ಒಂದು ದಿನ ಮಾತ್ರ ಬಾಕಿ ಇದ್ದು, ಪ್ರಮುಖ ಪಕ್ಷದ ಅಭ್ಯರ್ಥಿಗಳಲ್ಲಿ ತಳಮಳ ಶುರುವಾಗಿದೆ. ಜಿಲ್ಲೆಯಲ್ಲಿ ಒಟ್ಟು 64 ಜನ ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾರ ಪ್ರಭುಗಳು ತಮ್ಮ ಹಕ್ಕಿನ ಮೂಲಕ ಯಾರ ಭವಿಷ್ಯವನ್ನು ನಿರ್ಧರಿಸಿದ್ದಾರೆ ಎಂಬುದು ಮಂಗಳವಾರ ಗೊತ್ತಾಗಲಿದೆ.
ಚುನಾವಣೆಗೆ ಅಧಿಸೂಚನೆ ಹೊರಬಿದ್ದಂತೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದರು. ತಮ್ಮ ಬೆಂಬಲಿಗರೊಂದಿಗೆ ಬಿಸಿಲನ್ನೂ ಲೆಕ್ಕಿಸದೆ ಅಬ್ಬರದ ಮತಯಾಚನೆ ನಡೆಸಿದ್ದರು. ಪ್ರತಿಷ್ಠೆಯ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ನಾಯಕರು ಪ್ರಚಾರ ಕಣಕ್ಕಿಳಿದು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ್ದರು. ಪ್ರಧಾನಿ ಆದಿಯಾಗಿ ಸಚಿವರು, ಸಂಸದರು ಮತದಾರರ ಗಮನ ಸೆಳೆಯಲು ಪ್ರಯತ್ನಿಸಿದ್ದರು.
ಕದನ ಕಲಿಗಳಲ್ಲಿ ಎದೆಬಡಿತ: “ಖತಲ್ ರಾತ್ರಿ’ ಎಂದೆ ಕರೆಯಿಸಿಕೊಳ್ಳುವ ಚುನಾವಣೆಯ ಮುನ್ನಾ ದಿನ ಮತದಾರರನ್ನು ಮನವೊಲಿಸುವ ಕೊನೆಯ ಪ್ರಯತ್ನ ಭರ್ಜರಿಯಾಗಿ ನಡೆದಿತ್ತು. ಪೊಲೀಸ್ ಕಣ್ಗಾವಲು ನಡುವೆಯೂ
ಹಲವೆಡೆ ಹಣ- ಹೆಂಡದ ಹೊಳೆ ಹರಿದಿದೆ. ಇದೆಲ್ಲದರ ನಡುವೆ ಕೊನೆಗೂ ಚುನಾವಣೆಯ ಫಲಿತಾಂಶ ಎದುರಾಗಲಿದ್ದು, ಇದರಿಂದ ಅಭ್ಯರ್ಥಿಗಳ ಎದೆಬಡಿತ ಹೆಚ್ಚಿದೆ. ಮತದಾರರು ಯಾರಿಗೆ ಒಲಿಯಲಿದ್ದಾರೆ ಎಂಬ ಆತಂಕ ಅವರಲ್ಲಿ ಕಾಡುತ್ತಿದೆ.
ಮತ ಪೆಟ್ಟಿಗೆಗಳು ನಗರದ ಬಿ.ವಿ. ಭೂಮರೆಡ್ಡಿ ಮಹಾವಿದ್ಯಾಲಯದ ಸ್ಟ್ರಾಂಗ್ ರೂಂನಲ್ಲಿ ಮೀಸಲು ಪಡೆಯ ಯೋಧರ ಕಾವಲಿನಲ್ಲಿ ಭದ್ರವಾಗಿವೆ. ಇದೇ ಮಹಾವಿದ್ಯಾಲಯದಲ್ಲಿ ಫೆ.15ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಂಡಿದೆ
ಜಿಲ್ಲೆಯಲ್ಲಿ ಮತದಾನದ ಬಳಿಕ ಸೋಲು- ಗೆಲುವಿನ ಲೆಕ್ಕಾಚಾರ ಜೋರಾಗಿದ್ದು, ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗೆಲುವು ನಿಶ್ಚಿತ ಎಂದು ಹೇಳಿಕೆ ನೀಡುತ್ತಿದ್ದಾರೆ. ಗಡಿ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ಇದೇ ಮೊದಲು. ಬೀದರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ, ಬೀದರ ದಕ್ಷಿಣದಲ್ಲಿ ಜೆಡಿಎಸ್- ಕಾಂಗ್ರೆಸ್ ನಡುವೆ ನೇರಾ ನೇರ ಸ್ಪರ್ಧೆ ಇದೆ. ಔರಾದನಲ್ಲಿ ಬಿಜೆಪಿ ಅಭ್ಯರ್ಥಿ ಪರ ಒಲವು ಕಂಡು ಬಂದಿದ್ದು, ಬಸವಕಲ್ಯಾಣದಲ್ಲಿ ಬಿಜೆಪಿ- ಜೆಡಿಎಸ್ ನಡುವೆ ನೆಟ್ ಟು ನೆಟ್ ಫೈಟ್ ಇದೆ. ಇನ್ನೂ ಭಾಲ್ಕಿ ಮತ್ತು ಹುಮನಾಬಾದ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಹೆಚ್ಚಿದೆ.
ಶಶಿಕಾಂತ ಬಂಬುಳಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.