ಸ್ವಜನ ಪಕ್ಷಪಾತ ಬಿಟ್ಟು ಒಗ್ಗಟ್ಟು ಪ್ರದರ್ಶಿಸಿ: ಬಿರಾದಾರ


Team Udayavani, Jan 17, 2019, 8:16 AM IST

bid-5.jpg

ಭಾಲ್ಕಿ: ಯಾವುದೇ ಸಮಾಜ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸುಭದ್ರವಾಗಬೇಕಾದರೆ ಸ್ವಜನಪಕ್ಷಪಾತ ಮರೆತು ಒಗ್ಗಟ್ಟು ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಜೆಡಿಎಸ್‌ ಮುಖಂಡ ಜನಾರ್ಧನರಾವ್‌ ಬಿರಾದಾರ ಹೇಳಿದರು.

ಪಟ್ಟಣದ ಶಾಹು ನಗರದಲ್ಲಿ ಮರಾಠಾ ಸಮುದಾಯದ ವತಿಯಿಂದ ಆಯೋಜಿಸಿದ್ದ ರಾಜಮಾತಾ ಜೀಜಾವು ಮತ್ತು ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಮಕರ ಸಂಕ್ರಾಂತಿ ನಿಮಿತ್ತ ವೈರತ್ವ ಅಳಿಸಿ, ಸ್ನೇಹತ್ವ ಬೆಳೆಸಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಸೌಲಭ್ಯ ಪಡೆಯಲು ಮರಾಠಾ ಸಮುದಾಯವನ್ನು 3ಬಿ ವರ್ಗದಿಂದ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ತರುವುದು ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಾಬುರಾವ್‌ ಕಾರಬಾರಿ, ಮುಖಂಡರಾದ ನಾಮದೇವರಾವ್‌ ಪವಾರ, ರಾಮರಾವ್‌ ವರವಟ್ಟಿಕರ್‌, ಬಾಬುರಾವ್‌ ಜೋಳದಾಪ್ಕೆ, ರಮೇಶ ಪಾಟೀಲ, ಡಿ.ಜಿ. ಜಗತಾಪ, ವಿಠಲರಾವ್‌ ಸಾಳುಂಕೆ, ದತ್ತಾತ್ರಿ ತುಗಾಂವಕರ್‌, ನರಸಿಂಗರಾವ್‌ ಮಹಾರಾಜ ತೋರಣೆಕರ್‌, ಸಂದೀಪ ತೆಲಗಾಂವಕರ್‌ ಅವರು ಸ್ವಾಮಿ ವಿವೇಕಾನಂದ ಹಾಗೂ ರಾಜಮಾತಾ ಜೀಜಾವು ಕುರಿತು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕ್ಷತ್ರೀಯ ಮರಾಠಾ ಪರಿಷತ್‌ ಜಿಲ್ಲಾಧ್ಯಕ್ಷ ದಿಗಂಬರಾವ್‌ ಮಾನಕಾರಿ ಮಾತನಾಡಿ, ಸ್ವಾಮಿ ವಿವೇಕಾನಂದರು ಬುದ್ಧಿಶಕ್ತಿಯಿಂದ ರಾಷ್ಟ್ರದ ಕೀರ್ತಿಯನ್ನು ವಿದೇಶದಲ್ಲಿ ಪಸರಿಸಿದರು. ರಾಜಾಮಾತಾ ಜೀಜಾವು ಅವರ ಶಿಕ್ಷಣ ಪದ್ಧತಿ ಈಗಿನ ಮಹಿಳೆಯರಿಗೆ ಆದರ್ಶಪ್ರಾಯವಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಸಂಸ್ಕಾರಯುತ, ಸ್ವಾಲಂಬಿ ಜೀವನ ಸಾಗಿಸುವ ಕಲೆ ತಿಳಿಸಿಕೊಡುವುದು ಅವಶ್ಯಕವಾಗಿದೆ. ಸಮಾಜದ ಏಳ್ಗೆಗಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯುವ ಕುರಿತು ಪ್ರತಿಯೊಬ್ಬರಿಗೆ ತಿಳಿಸಿಕೊಡಬೇಕಾಗಿದೆ. ಪ್ರಸ್ತುತವಾಗಿ ತಾಲೂಕಿನ ಮರಾಠಾ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ, ಸಮುದಾಯ ಭವನ ನಿರ್ಮಿಸುವಂತೆ ಶಾಸಕರ ಮೇಲೆ ಒತ್ತಡ ತರಬೇಕು. ಸಮಾಜ ಒಗ್ಗಟ್ಟಿನಿಂದ ಇದ್ದರೆ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಿಶನರಾವ್‌ ಪಾಟೀಲ ಇಂಚೂರಕರ್‌, ಜಿಪಂ ಮಾಜಿ ಅಧ್ಯಕ್ಷ ಅನೀಲ ಭೂಸಾರೆ, ಪ್ರತಾಪರಾವ್‌ ಪಾಟೀಲ, ರಮೇಶ ಪಾಟೀಲ, ಅಶೋಕರಾವ್‌ ಪಾಟೀಲ ಮೇಹಕರ್‌, ಶೇಷರಾವ್‌ ಕಣಜಿಕರ್‌, ಭಾವುರಾವ್‌ ಪಾಟೀಲ, ಬಾಬುರಾವ್‌ ಹುಲಸೂರೆ, ವೆಂಕಟರಾವ್‌ ನೆಲವಾಡೆ, ಶಿವಾಜಿರಾವ್‌ ಭೊಸ್ಲೆ, ದಯಾನಂದರಾವ್‌ ಸೂರ್ಯವಂಶಿ, ಮಾಧವರಾವ್‌ ಪಾಟೀಲ, ಶಾಹುರಾಜ ಸಾಯಗಾಂವಕರ್‌, ಪಿ.ಎಸ್‌.ಬಿರಾದಾರ, ಸುಧಾಕರರಾವ್‌ ಜಾಧವ, ಶಾಮರಾವ್‌ ಕಾದೆಪುರೆ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ತುಕಾರಾಮ ಮೋರೆ ನಿರೂಪಿಸಿದರು. ಪಿ.ಎಸ್‌.ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.