ಬಾಲ್ಯವಿವಾಹ ವಿರುದ್ಧ ಕೇಸು ದಾಖಲಿಸಿ


Team Udayavani, Jan 21, 2020, 12:37 PM IST

bidar-tdy-2

ಬೀದರ: ಬಾಲ್ಯ ವಿವಾಹಗಳನ್ನು ತಡೆಗಟ್ಟಲು ವಿವಿಧ ಇಲಾಖೆಗಳಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳೆಂದು ಸರ್ಕಾರ ಗುರುತಿಸಿದೆ. ಗ್ರಾಮ ಮಟ್ಟದ ಬಾಲ್ಯವಿವಾಹ ನಿಷೇದಾಧಿಕಾರಿಗಳಾದ ಪಿಡಿಒ, ಶಾಲಾ ಮುಖ್ಯಗುರು ಮತ್ತು ಗ್ರಾಮ ಲೆಕ್ಕಿಗರು ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ಜಯಶ್ರೀ ಹೇಳಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಮಕ್ಕಳ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿಮಾತನಾಡಿದ ಅವರು, ಎಲ್ಲಿಯಾದರೂ ಬಾಲ್ಯವಿವಾಹಗಳು ಜರುಗಿದಲ್ಲಿ ಸಂಬಂ ಧಿಸಿದವರ ವಿರುದ್ಧ ಮುಲಾಜಿಲ್ಲದೇ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.

ಈ ವೇಳೆ ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗವಾರ್‌ ಮಾತನಾಡಿ, ಬೇಸಿಗೆ ಕಾಲದಲ್ಲಿ ಮದುವೆಗಳು ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತವೆ. ಬಾಲ್ಯವಿವಾಹ ತಡೆಗಟ್ಟಲು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಮೂಲಕ ಡಂಗೂರು ಸಾರಲು ಕ್ರಮ ವಹಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಪ್ರತಿ ತಿಂಗಳು ಬಾಲಕಾರ್ಮಿಕ ಮಕ್ಕಳ ರಕ್ಷಣೆಗಾಗಿ ಕಾರ್ಯಾಚಾರಣೆ ಕೈಗೊಂಡು, ಇಂತಹ ಮಕ್ಕಳನ್ನು ಕಡ್ಡಾಯವಾಗಿ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಮುಂದಿನ ರಕ್ಷಣೆ ಮತ್ತು ಪೋಷಣೆಗಾಗಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬಾಲಕಾರ್ಮಿಕ ಮಕ್ಕಳ ರಕ್ಷಣೆಗಾಗಿ ಕಾರ್ಯಾಚಾರಣೆ ಕೈಗೊಳ್ಳಬೇಕೆಂದು ಡಾ| ಜಯಶ್ರೀ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ, ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕ ಮಕ್ಕಳಿಗೆ ಟೆಂಟ್‌ ಶಾಲೆಯನ್ನು ಪ್ರಾರಂಭಿಸಿರುವುದು, ಬಿಸಿಯೂಟ ವಿತರಣೆ ಹಾಗೂ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಹೆಚ್ಚಳದ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆದರು. ಈ ವೇಳೆ ಡಿಡಿಪಿಐ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯ ಚಾಲ್ತಿಯಲ್ಲಿದೆ. ಸಕ್ಕರೆ ಕಾರ್ಖಾನೆಯ ವಲಸೆ ಕಾರ್ಮಿಕರ ಮಕ್ಕಳಿಗೆ ಟೆಂಟ್‌ ಶಾಲೆಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು. ಎಲ್ಲ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಬಿಸಿಯೂಟ ವಿತರಣೆ ಮಾಡಬೇಕೆಂದು ಈಗಾಗಲೇ ಸಭೆಗಳನ್ನು ಕರೆದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಮಸ್ಯೆ ಇರುವ ಶಾಲೆಗಳ ಮಾಹಿತಿ ಪಡೆದು, ಸಂಬಂಧಿ ಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಡಿ ನಡೆಯುವ ವಸತಿ ನಿಲಯಗಳ ಹೆಣ್ಣು ಮಕ್ಕಳಿಗೆ ಸ್ಯಾನೀಟರ್‌ ನ್ಯಾಪಕಿನ್‌ ಸೌಲಭ್ಯ ಒದಗಿಸಬೇಕು. ಅಲ್ಲದೇ ಉತ್ತಮ ಗುಣಮಟ್ಟದ ಆಹಾರ ವಿತರಿಸಬೇಕೆಂದು ಸಂಬಂಧಿ ಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿರುವುದು ಕಂಡುಬಂದಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.