ಚುನಾವಣಾಧಿಕಾರಿ ಕೊಠಡಿಯಲ್ಲಿ ಐವರಿಗೆ ಪ್ರವೇಶ: ಡಿಸಿ
Team Udayavani, Mar 29, 2019, 3:56 PM IST
ಬೀದರ: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿ ಒಳಗೊಂಡಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿ ಕಾರಿಗಳ ಕೊಠಡಿಯಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿಗಳ ಕಾರ್ಯಾಲಯದ ಆವರಣದ 100 ಮೀ. ವ್ಯಾಪ್ತಿಯಲ್ಲಿ ಜನಸ್ತೋಮ ಸೇರಿಸುವಂತಿಲ್ಲ. ಅಲ್ಲದೆ 3 ವಾಹನಗಳು ಮಾತ್ರ ಚುನಾವಣಾಧಿಕಾರಿ ಕಚೇರಿ ಪ್ರವೇಶಕ್ಕೆ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು 16ನೇ ಲೋಕಸಭೆ
ಸಾರ್ವತ್ರಿಕ ಚುನಾವಣೆ ಅಧಿ ಸೂಚನೆ ಈಗಾಗಲೇ ಹೊರಡಿಸಿದೆ. ಈ ಅಧಿಸೂಚನೆಯನ್ವಯ ಲೋಕಸಭೆ ಚುನಾವಣೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ
ನಡೆಯಲಿದ್ದು, ಬೀದರ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ನಾಮಪತ್ರಗಳನ್ನು ಏ.4ರ ವರೆಗೆ ಕಚೇರಿ ಕಾರ್ಯನಿರ್ವಹಿಸುವ ದಿನಗಳಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಜಿಲ್ಲಾಧಿ ಕಾರಿ ಕಚೇರಿಯಲ್ಲಿರುವ ಚುನಾವಣಾ ಧಿಕಾರಿಗಳ ಕೊಠಡಿಯಲ್ಲಿ ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳಿಂದ ಸಲ್ಲಿಸಬಹುದಾಗಿದೆ ಎಂದರು.
ಮುಷ್ಕರ-ಪ್ರತಿಭಟನೆ ನಿಷೇಧ ಈ ಅವಧಿಯಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯ ಆವರಣದ ಸುತ್ತಲೂ ಮುಷ್ಕರ ಹಾಗೂ ಪ್ರತಿಭಟನೆ ನಿಷೇಧಿ ಸಲಾಗಿದೆ. ಮತದಾನವು ಏ.23ರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಜರುಗಲಿದೆ ಎಂದು ತಿಳಿಸಿದರು.
ರಾಜಕೀಯ ಚಟುವಟಿಕೆ ನಿಷೇಧ ಜಿಲ್ಲೆಯ ಎಲ್ಲ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ರಾಜಕೀಯ ಚಟುವಟಿಕೆ ನಿಷೇಧಿ ಸಲಾಗಿದೆ. ಪ್ರವಾಸಿ ಮಂದಿರಗಳನ್ನು ರಾಜಕೀಯ ಪ್ರೇರಿತ ವ್ಯಕ್ತಿಗಳು ಹಾಗೂ ಮುಖಂಡರಿಗೆ ನೀಡದಂತೆ ಸೂಚಿಸಲಾಗಿದೆ. ಪ್ರವಾಸಿ ಮಂದಿರಗಳನ್ನು ವಶಕ್ಕೆ ಪಡೆಯಲಾಗಿದ್ದು,
ಇವುಗಳನ್ನು ಚುನಾವಣೆ ಕರ್ತವ್ಯಕ್ಕೆ ಮಾತ್ರ ಬಳಕೆ ಮಾಡಲಾಗುವುದು ಎಂದರು.
ಅದರಂತೆ ಎಲ್ಲ ಚುನಾಯಿತರು ಹಾಗೂ ನಾಮ ನಿರ್ದೇಶಿತಗೊಂಡ ರಾಜಕೀಯ ಮುಖಂಡರಿಗೆ ನೀಡಲಾಗಿರುವ ಸರ್ಕಾರಿ ವಾಹನ ಸೌಲಭ್ಯವನ್ನು ಮರಳಿ ಜಿಲ್ಲಾಡಳಿತ ವಶಕ್ಕೆ ಪಡೆಯಲಾಗಿದೆ. ಚುನಾಯಿತ, ನಾಮ ನಿರ್ದೇಶಿತಗೊಂಡಿರುವ ಅಧಿಕಾರೇತರ ಸದಸ್ಯರ ಚೆಂಬರ್‌ಗಳನ್ನು ಮುಚ್ಚಿಸಿ ಸೀಲ್ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾದ್ಯಂತ ಮತದಾರರಿಗೆ ಪ್ರಭಾವಕ್ಕೊಳಪಡುವ ರಾಜಕೀಯ ಸಭೆ, ಸಮಾರಂಭ ನಿಷೇಧಿ ಸಲಾಗಿದೆ. ಒಂದು ವೇಳೆ ಯಾವುದೇ ರೀತಿಯ ಸಭೆ ಸಮಾರಂಭ ನಡೆಸುವ ಮುನ್ನ ಚುನಾವಣಾಧಿ ಕಾರಿಗಳಿಂದ ಪರವಾನಗಿ ಪಡೆಯಬೇಕೆಂದು ಸಾರ್ವಜನಿಕರಿಗೆ ತಿಳಿಸಲಾಗಿದೆ ಎಂದ ಅವರು, ರಾಜಕೀಯ ಬ್ಯಾನರ್
ಗಳು ತೆರೆವುಗೊಳಿಸಲಾಗಿದೆ ಎಂದರು.
1,999 ಮತಗಟ್ಟೆ ಚುನಾವಣೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಲೋಕಸಭೆ ಕ್ಷೇತ್ರದಲ್ಲಿ 1,999 ಮತಗಟ್ಟೆ ಸಜ್ಜುಗೊಳಿಸಿದ್ದು, ಇವುಗಳಲ್ಲಿ 77 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.
ಚುನಾವಣೆ ಅಕ್ರಮ ತಡೆಯುವ ನಿಟ್ಟಿನಲ್ಲಿ ಒಟ್ಟಾರೆ 27 ಚೆಕ್‌ಪೋಸ್ಟ್ ಅಳವಡಿಸಿದ್ದು, ಹಗಲು-ರಾತ್ರಿ ಅಧಿಕಾರಿಗಳ ತಂಡ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು
ವಿವರಿಸಿದರು.
ಕಾನೂನು ಉಲ್ಲಂಘನೆ ಬೇಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಪಕ್ಷದವರು ಅಥವಾ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ಸರ್ವೆ ನಡೆಸುವುದು ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ರಾಜಕೀಯಕ್ಕೆ ಬಳಸಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ಅ ಧಿಕಾರಿಗಳ ತಂಡ ರಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಸಾಮಾಜಿಕ ಜಾಲತಾಣದ ಸದಸ್ಯರ ವಿರುದ್ಧ ಎರಡು
ಪ್ರಕರಣ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 1,33,64,584 ರೂ. ಮೌಲ್ಯದ 6,716
ಲೀ. ಮದ್ಯ ಹಾಗೂ 4,70,000 ರೂ. ಮೌಲ್ಯದ 117.539 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಒಟ್ಟು 118 ಪ್ರಕರಣ ದಾಖಲಿಸಲಾಗಿದೆ
ಎಂದು ಮಾಹಿತಿ ನೀಡಿದರು.
ದೂರು-ಪ್ರತಿ ದೂರು
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ -ಬಿಜೆಪಿ ಮುಖಂಡರ ವಿರುದ್ಧ ವಿವಿಧ ಆರೋಪಗಳು ಮಾಡಿ ದೂರು, ಪ್ರತಿ ದೂರು ಸಲ್ಲಿಸುವ ಕಾರ್ಯ
ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ವತಿಯಿಂದ ಒಂದು ದೂರು, ಬಿಜೆಪಿಯಿಂದ ಒಂದು ದೂರು ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಅವರಿಗೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಸಂಬಂಧಿಸಿದ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ವಿವಿಧ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು
ಹಾಗೂ ಪಿಠೊಪಕರಣಗಳನ್ನು ಚುನಾವಣಾ ಪ್ರಚಾರಕ್ಕೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮುಖಂಡರು ಚುನಾವಣಾಧಿ ಕಾರಿಗೆ ದೂರು
ಸಲ್ಲಿಸಿದ್ದಾರೆ. ಅಲ್ಲದೆ, ಹೋಳಿ ಹಬ್ಬದ ಸಂದರ್ಭದಲ್ಲಿ ಭಗವಂತ ಖೂಬಾ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖೂಬಾ ವಿರುದ್ಧ ಕ್ರಮ ಕೈಗೊಳ್ಳುವಂತೆ
ಕಾಂಗ್ರೆಸ್ ಮುಖಂಡರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಚುನಾವಣಾಧಿಕಾರಿ ಡಾ| ಎಚ್.ಆರ್. ಮಹಾದೇವ, ಭಗವಂತ ಖೂಬಾ ವಿರುದ್ಧ ನೀಡಲಾದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ. ಅಲ್ಲದೆ, ಈಶ್ವರ ಖಂಡ್ರೆ ಸಂಬಂಧಿ ಸಿದ ಶಿಕ್ಷಣ ಸಂಸ್ಥೆಯಲ್ಲಿನ ಸಿಬ್ಬಂದಿಗಳನ್ನು ಬೇರೆ ಕಡೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.