ಜಾನಪದ ಕಲೆಗಳು ನಾಗರಿಕತೆ ಸಂಕೇತ


Team Udayavani, Jan 21, 2018, 3:50 PM IST

bid-1.jpg

ಬೀದರ: ಜಾನಪದರಿಂದ ಹುಟ್ಟಿಕೊಂಡಿರುವ ನೃತ್ಯ, ಬಿಸುವ-ಕುಟ್ಟುವ, ಜೋಗುಳ ಪದ, ನೃತ್ಯದಂತಹ ವಿವಿಧ ಕಲೆಗಳು ನಮ್ಮ ನಾಗರಿಕತೆ ಸಂಕೇತವಾಗಿವೆ ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಹೇಳಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡಾಂಬೆ ಗೆಳೆಯರ ಬಳಗದ ವತಿಯಿಂದ ನಗರದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಮತ್ತು ಹಳ್ಳಿ ಬದುಕಿನಲ್ಲಿ ಮೂಡಿಬಂದಿರುವ ವಿವಿಧ ಜಾನಪದ ಕಲೆಗಳು ನಮ್ಮ ಸಂಸ್ಕೃತಿ ಪ್ರತಿಬಿಂಬಿಸುತ್ತವೆ.

ಸಮಾಜದ ಅಂತಕರಣವನ್ನು ಇವುಗಳಲ್ಲಿ ಕಾಣಬಹುದು. ಈ ಕಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯವಾಗಿದೆ. ಯುವ ಜನಾಂಗ ವಿದೇಶಿ ಅನುಕರಣೆ ಬಿಟ್ಟು, ದೇಶಿ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾನಪದ ಕಲೆಗಳನ್ನು ಅನುಕರಿಸುವಂತಾಗಬೇಕು ಎಂದು ಹೇಳಿದರು. 

ಸಿದ್ಧಾರೂಢ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿ ಮಾತನಾಡಿ, ಜನಪದ ಸಂಸ್ಕೃತಿ ಬೇವರಿನ ಮೂಲಕ ಹುಟ್ಟಿಕೊಂಡಿದೆ. ಶ್ರಮಜೀವಿಗಳಾಗಿದ್ದ ನಮ್ಮ ಪೂರ್ವಜರು ದುಡಿಮೆಯಿಂದ ಬದುಕು ಕಟ್ಟಿಕೊಳ್ಳುವ ಬಗೆಯನ್ನು ತಮ್ಮ ಅನುಭವಗಳನ್ನು ಜನಪದ ಗೀತೆ, ಗಿಗಿ ಪದ, ತತ್ವ ಪದಗಳ ಮೂಲಕ ಜನರಿಗೆ ತೋರಿಸಿಕೊಟ್ಟಿದ್ದಾರೆ. ಜನರು ಇಂತಹ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಶಾಸಕ ರಹೀಮ ಖಾನ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಶಿವಯ್ಯಸ್ವಾಮಿ ಮಾತನಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್‌.ಸೆಲ್ವಮಣಿ, ಸಹಾಯಕ ಆಯುಕ್ತ ಶಿವಕುಮಾರ ಶಿಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ರಾಜ್ಯ ಪ್ರಶಸ್ತಿ ಪುರಸ್ಕೃತ ರಾಜು ಪಾಸಾರೆ, ಮಹೇಶ ಗೋರನಾಳಕರ, ಪ್ರಭುಶೆಟ್ಟಿ ಸೈನಿಕಾರ, ಸುನೀಲ ಭಾವಿಕಟ್ಟಿ, ಮೂಗಲಪ್ಪ, ಡಾ| ಪ್ರಭುಲಿಂಗ ಬಿರಾದಾರ, ಫರ್ನಾಂಡಿಸ್‌ ಹಿಪ್ಪಳಗಾಂವ ಇದ್ದರು. ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಠಗಿ ಸ್ವಾಗತಿಸಿದರು. ವಿರೂಪಾಕ್ಷ ಗಾದಗಿ ನಿರೂಪಿಸಿದರು. ಸಾಗರ ವಂದಿಸಿದರು. 

ಮೇಳದಲ್ಲಿ ವಿವಿಧ ಕಲಾ ತಂಡಗಳಿಂದ ಜನಪದ ನೃತ್ಯ, ಜನಪದ ಗೀತೆ, ಗಿಗಿ ಪದ, ಸೊಬಾನೆ ಪದ, ಬಿಸುಕಲ್ಲಿನ ಪದ, ಭಜನೆ, ಲಂಬಾಣಿ ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 

ಟಾಪ್ ನ್ಯೂಸ್

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Nuclear-Plant

Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.