8 ಕೋಟಿ ಮಹಿಳೆಯರಿಗೆ ಗ್ಯಾಸ್
Team Udayavani, Jan 3, 2022, 1:11 PM IST
ಬಸವಕಲ್ಯಾಣ: ದೇಶದ ಬಡ ಕುಟುಂಬಗಳ ಮಹಿಳೆಯರಿಗೆ ಉಜ್ವಲ್ ಯೋಜನೆಯಲ್ಲಿ ಉಚಿತವಾಗಿ ಅಡುಗೆ ಅನಿಲ ವಿತರಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಕಲ್ಯಾಣ ಮಂಟಪದಲ್ಲಿ ಕಾಳೇಕರ್ ಗ್ಯಾಸ್ ಏಜೆನ್ಸಿ ವತಿಯಿಂದ ಹಮ್ಮಿಕೊಂಡ ಉಜ್ವಲ್ ಯೋಜನೆ ಉಚಿತ ಅಡುಗೆ ಅನಿಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರ ಬಗ್ಗೆ ಕಾಳಜಿ ಇರಲಿಲ್ಲ. ಆದರೆ ಮೋದಿ ಅವರು 8 ಕೋಟಿ ಮಹಿಳೆಯರಿಗೆ ಈ ಯೋಜನೆಯಲ್ಲಿ ಅಡುಗೆ ಅನಿಲ ವಿತರಿಸಿದರು. ಹೀಗಾಗಿ ತಾಲೂಕಿನ 25 ಸಾವಿರ ಮಹಿಳೆಯರಿಗೆ ಅನಿಲ ದೊರೆತಿದೆ. ಆದರೂ ಇನ್ನೂ ಬಡ ಕುಟುಂಬದವರು ಉಳಿದಿದ್ದರಿಂದ ಮತ್ತೆ ಉಚಿತ ಅನಿಲ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಾಸಕ ಶರಣು ಸಲಗರ ಮಾತನಾಡಿ, ಜಾತಿ ಮತ ನೋಡದೆ, ಬಡವರಿಗೆ, ದಲಿತರಿಗೆ ಹಿಂದುಳಿದವರ ಮಹಿಳೆಯರಿಗೆ ಸಹಾಯ ಆಗಲಿ ಎಂಬ ಸುದುದ್ದೇಶದಿಂದ ಪ್ರಧಾನಿ ಮೋದಿ ಉಜ್ವಲ ಯೋಜನೆಯಲ್ಲಿ ಉಚಿತ ಅಡುಗೆ ಅನಿಲ ನೀಡುತ್ತಿದ್ದಾರೆ ಎಂದರು.
ಮಾಜಿ ಶಾಸಕ ಎಂ.ಜಿ. ಮುಳೆ, ತಹಶೀಲ್ದಾರ್ ಸಾವಿತ್ರಿ ಸಲಗರ, ರವಿ ಗಾಯಕವಾಡ, ಅನಿಲ ಭೂಸಾರೆ, ಸಂಜೀವ ಕಾಳೇಕರ್, ಮಲ್ಲೇಶ ಕಾಳೆಕರ್, ದೀಪಕ ಗಾಯಕವಾಡ, ಅಶೋಕ ವಕಾರೆ, ಅರವಿಂದ ಮುತ್ತೆ, ರವಿ ಕೊಳಕುರ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.