ತಪ್ಪದೇ ಕೋವಿಡ್ ಲಸಿಕೆ ಪಡೆಯಿರಿ: ಚವ್ಹಾಣ
Team Udayavani, Jun 12, 2021, 10:03 AM IST
ಬೀದರ: ಕೋವಿಡ್ ಸೋಂಕು ಸಂಪೂರ್ಣ ಮಟ್ಟ ಹಾಕಲು ತಪ್ಪದೇ ಲಸಿಕೆ ಪಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕೋವಿಡ್ ಲಸಿಕೆ ಕುರಿತು ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿರುವುದರಿಂದ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಿದೆ. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ಸಂಸದರು ಸೇರಿದಂತೆ ಅನೇಕ ಪ್ರಮುಖರು ಲಸಿಕೆ ಪಡೆದಿದ್ದಾರೆ. ಮೊದಲು ಲಸಿಕೆ ಬಗ್ಗೆ ಅಪಸ್ವರ ಎ¤ದವರು ಲಸಿಕೆ ಮಹತ್ವ ಅರಿವಾದ ನಂತರ ಲಸಿಕೆ ಪಡೆಯುತ್ತಿದ್ದಾರೆ. ಹಾಗಾಗಿ ಲಸಿಕೆ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ ಕೇಂದ್ರ ಸರ್ಕಾರಿಂದ 2,84,279 ಡೋಸ್, ರಾಜ್ಯ ಸರ್ಕಾರದಿಂದ 67,986 ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸುವ ದೃಢ ಸಂಕಲ್ಪ ಮಾಡಿದ್ದು, ಇದಕ್ಕೆ ಜಿಲ್ಲಾಡಳಿತ, ಆರೋಗ್ಯ ಹಾಗೂ ಪೊಲೀಸ್ ಸೇರಿದಂತೆ ಎಲ್ಲ ಇಲಾಖೆಗಳು ಉತ್ತಮ ಸಹಕಾರ ನೀಡುತ್ತಿವೆ. ಇದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಸೋಂಕು ಸಂಪೂರ್ಣ ನಿವಾರಿಸಲು ಲಸಿಕೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಜೂ.21ರಿಂದ ಕೇಂದ್ರ ಸರ್ಕಾರದಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತಿದೆ. ಯಾವುದೇ ಅಪಪ್ರಚಾರಗಳಿಗೆ ಕಿಡಿಗೊಡದೇ ತಪ್ಪದೇ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಹೊಸ ರೋಗಿಗಳ ಪತ್ತೆ ಹಾಗೂ ಚಿಕಿತ್ಸೆ ನೀಡುವ ಉದ್ದೇಶದಿಂದ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಮೂಲಕ ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಜಿಲ್ಲೆಯಲ್ಲಿ 100 ಪ್ರತಿಶತ ಅನುಷ್ಠಾನಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮನೆಗೆ ಬರುವ ಆರೋಗ್ಯ ಇಲಾಖೆ ಸಿಬ್ಬಂದಿಯೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.